‘ ಸೌಲಭ್ಯಗಳ ಸದುಪಯೋಗ ಮಾಡಿಕೊಳ್ಳಿ’

KannadaprabhaNewsNetwork |  
Published : Aug 09, 2024, 12:31 AM IST
ಮಹಿಳೆಯರು ಸ್ವಲಂಬಿಯಾಗಿ ಸ್ವಯಂ ಉದ್ಯೋಗ ಕಂಡುಕೊಳ್ಳಲು ಉಚಿತವಾಗಿ ಹೊಲಿಗೆ ಯಂತ್ರಗಳ ವಿತರಣೆ | Kannada Prabha

ಸಾರಾಂಶ

ಸರ್ಕಾರ ವಿಕಲಚೇತನರನ್ನು ಹಾಗೂ ಮಹಿಳೆಯರನ್ನು ಆರ್ಥಿಕವಾಗಿ ಸದೃಢಗೊಳಿಸಲು ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಈ ಯೋಜನೆಗಳ ಬಗ್ಗೆ ಮಾಹಿತಿ ತಿಳಿದುಕೊಂಡು, ಅದಕ್ಕೆ ಸಂಬಂಧಿಸಿದಂತೆ ಸೂಕ್ತ ದಾಖಲಾತಿಗಳನ್ನು ಒದಗಿಸಿ ಯೋಜನೆಗಳನ್ನು ಪಡೆದುಕೊಳ್ಳಬೇಕು

ಕನ್ನಡಪ್ರಭ ವಾರ್ತೆ ಗೌರಿಬಿದನೂರು

ಸರ್ಕಾರದ ಸೌಲಭ್ಯಗಳನ್ನು ದುರುಪಯೋಗ ಪಡಿಸಿಕೊಳ್ಳದೆ ಸದುಪಯೋಗ ಪಡಿಸಿಕೊಂಡು ನಿಮ್ಮ ಬದುಕನ್ನು ರೂಪಿಸಿಕೊಳ್ಳಬೇಕು ಎಂದು ಫಲಾನುಭವಿಗಳಿಗೆ ಶಾಸಕ ಕೆ.ಎಚ್.ಪುಟ್ಟಸ್ವಾಮಿಗೌಡರು ಕಿವಿಮಾತನ್ನು ಹೇಳಿದರು.

ನಗರದ ಸಮಾನತಾ ಸೌಧದ ಆವರಣದಲ್ಲಿ, ಜಿಲ್ಲಾ ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಮತ್ತು ದೇವರಾಜ್ ಅರಸು ಅಭಿವೃದ್ಧಿ ನಿಗಮದ ವತಿಯಿಂದ ಅಂಗವಿಕಲರಿಗೆ 15 ದ್ವಿಚಕ್ರ ವಾಹನ ಮತ್ತು ಮಹಿಳೆಯರಿಗೆ 37 ಹೊಲಿಗೆ ಯಂತ್ರಗಳನ್ನು ವಿತರಿಸಿ ಅವರು ಮಾತನಾಡಿದರು.

ಅರ್ಥಿಕವಾಗಿ ಸದೃಢರಾಗಿ

ಸರ್ಕಾರ ವಿಕಲಚೇತನರನ್ನು ಹಾಗೂ ಮಹಿಳೆಯರನ್ನು ಆರ್ಥಿಕವಾಗಿ ಸದೃಢಗೊಳಿಸಲು ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಈ ಯೋಜನೆಗಳ ಬಗ್ಗೆ ಮಾಹಿತಿ ತಿಳಿದುಕೊಂಡು, ಅದಕ್ಕೆ ಸಂಬಂಧಿಸಿದಂತೆ ಸೂಕ್ತ ದಾಖಲಾತಿಗಳನ್ನು ಒದಗಿಸಿ ಯೋಜನೆಗಳನ್ನು ಪಡೆದುಕೊಳ್ಳುವ ಮೂಲಕ ನಿಮ್ಮ ಬದುಕನ್ನು ರೂಪಿಸಿಕೊಳ್ಳಿ ಎಂದರು.

ಇದೇ ವೇಳೆ ಹದಿನೈದು ಮಂದಿ ಫಲಾನುಭವಿ ವಿಕಲ ಚೇತನರಿಗೆ ತ್ರಿಚಕ್ರ ವಾಹನಗಳನ್ನು ಹಾಗೂ ಮೂವತ್ತೇಳು ಮಂದಿ ಮಹಿಳೆಯರಿಗೆ ಹೂಲಿಗೆ ಯಂತ್ರಗಳನ್ನು ಶಾಸಕರು ವಿತರಣೆ ಮಾಡಿದರು.

ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ

ಇದಕ್ಕೂ ಮುನ್ನ ಶಾಸಕ ಕೆ.ಎಚ್.ಪುಟ್ಟಸ್ವಾಮಿಗೌಡರು ತಾಲೂಕಿನ ವಿವಿಧ ಭಾಗಗಳಲ್ಲಿ ಸುಮಾರು ಮೂರು ಕೋಟಿ ರೂಪಾಯಿಗಳ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ, ಶಾಲಾ ಕಟ್ಟಡ ನಿರ್ಮಾಣ, ಅಂಗನವಾಡಿ ಕಟ್ಟಡ ನಿರ್ಮಾಣ ಮುಂತಾದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು.

ಈ ಸಂಧರ್ಭದಲ್ಲಿ ಲೋಕೋಪಯೋಗಿ ಇಲಾಖೆಯ ಎಇಇ ಪ್ರಕಾಶ್, ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀನಿವಾಸ್, ಸಿಡಿಪಿಓ ಇಲಾಖೆಯ ಮೂಕಾಂಬಿಕಾ, ದೇವರಾಜ್ ಅರಸು ಅಭಿವೃದ್ಧಿ ನಿಗಮದ ಶಿವಾನಂದ ರೆಡ್ಡಿ, ವಿಕಲಚೇತನರ ಕಲ್ಯಾಣಾಧಿಕಾರಿ ಜಗದೀಶ್, ಕೋಚಿಮುಲ್ ನಿರ್ದೇಶಕ ಜೆ.ಕಾಂತರಾಜು, ಪಿಎಲ್ಡಿ ಬ್ಯಾಂಕ್ ನಿರ್ದೇಶಕ ವೆಂಕಟರಾಮರೆಡ್ಡಿ, ಬಿ.ಜಿ.ವೇಣುಗೋಪಾಲರೆಡ್ಡಿ, ಜಿ.ಪಂ.ಮಾಜಿ ಉಪಾಧ್ಯಕ್ಷ ರಾಘವೇಂದ್ರ ಹನುಮಾನ್, ಬಿ.ವಿ.ಗೋಪಿನಾಥ್, ರಂಗರಾಜು, ತಾ.ಪಂ.ಮಾಜಿ ಅಧ್ಯಕ್ಷ ಗಂಗಾಧರಪ್ಪ, ಮತ್ತಿತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಂಗಳೂರಿಂದ ಪುಣೆಗೆ ಹೊಸ ಹೈಸ್ಪೀಡ್‌ ರೈಲು ಘೋಷಣೆ?
ಬೆಂಗಳೂರು ಜನತೆಗೆ ಮತ್ತೊಂದು ಶಾಕ್ : ಮೆಟ್ರೋ ಟಿಕೆಟ್‌ ಮತ್ತೆ ಏರಿಕೆ? ಯಾವ ಮಾರ್ಗದಲ್ಲಿ ಎಷ್ಟು ಹೆಚ್ಚಳ?