ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ

KannadaprabhaNewsNetwork |  
Published : Mar 27, 2025, 01:07 AM IST
ಅಗಸರಹಳ್ಳಿ ಗ್ರಾಮದ ಆಂಜನೇಯ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಆಯೋಜಿಸಿದ್ದ ಶ್ರೀ ಸತ್ಯನಾರಾಯಣ ಪೂಜಾ ಕಾರ್ಯಕ್ರಮವನ್ನು ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಅಗಸರಹಳ್ಳಿ ಚಂದ್ರೇಗೌಡ ಉದ್ಘಾಟಿಸಿದರು. ಜೊತೆಯಲ್ಲಿ ದೇವಾಂಗು, ಅರುಣ್ ಕುಮಾರ್, ಪ್ರಸಾದ್, ಹೇಮೇಶ್, ಶುಂಠಿ ಶಂಕರ್, ವೆಂಕಟೇಶ್, ಸೌಮ್ಯ, ವಿಂದ್ಯಾ ಇದ್ದರು. | Kannada Prabha

ಸಾರಾಂಶ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿದ ಗ್ರಾಮೀಣ ಭಾಗದ ಕೋಟ್ಯಂತರ ಕುಟುಂಬಗಳಿಗೆ ಅನುಕೂಲವಾಗಿದೆ ಎಂದು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಅಗಸರಹಳ್ಳಿ ಚಂದ್ರೇಗೌಡ ತಿಳಿಸಿದರು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ದೇಗುಲಗಳ ಜೀರ್ಣೋದ್ಧಾರ ಸಮಿತಿಗೆ ಧನ ಸಹಾಯ, ಶೌಚಾಲಯಗಳ ನಿರ್ಮಾಣ, ಕೆರೆ ಸಂರಕ್ಷಣೆಯಿಂದ ಅಂತರ್ಜಲ ಅಭಿವೃದ್ಧಿ, ಸೌರವಿದ್ಯುತ್ ಘಟಕಗಳ ನಿರ್ಮಾಣ, ಶೈಕ್ಷಣಿಕ ಪ್ರಗತಿಗೆ ವಿದ್ಯಾರ್ಥಿ ವೇತನ, ಗೋಬರ್ ಗ್ಯಾಸ್ ಗಳ ಬಳಕೆ ಸೌಲಭ್ಯ ನೀಡಲಾಗಿದೆ ಎಂದರು.

ಕನ್ನಡಪ್ರಭ ವಾರ್ತೆ ಬಾಗೂರು

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿದ ಗ್ರಾಮೀಣ ಭಾಗದ ಕೋಟ್ಯಂತರ ಕುಟುಂಬಗಳಿಗೆ ಅನುಕೂಲವಾಗಿದೆ ಎಂದು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಅಗಸರಹಳ್ಳಿ ಚಂದ್ರೇಗೌಡ ತಿಳಿಸಿದರು.

ಹೋಬಳಿಯ ಅಗಸರಹಳ್ಳಿ ಗ್ರಾಮದ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಆಯೋಜಿಸಿದ್ದ ಶ್ರೀ ಸತ್ಯನಾರಾಯಣ ಪೂಜಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ದೇಗುಲಗಳ ಜೀರ್ಣೋದ್ಧಾರ ಸಮಿತಿಗೆ ಧನ ಸಹಾಯ, ಶೌಚಾಲಯಗಳ ನಿರ್ಮಾಣ, ಕೆರೆ ಸಂರಕ್ಷಣೆಯಿಂದ ಅಂತರ್ಜಲ ಅಭಿವೃದ್ಧಿ, ಸೌರವಿದ್ಯುತ್ ಘಟಕಗಳ ನಿರ್ಮಾಣ, ಶೈಕ್ಷಣಿಕ ಪ್ರಗತಿಗೆ ವಿದ್ಯಾರ್ಥಿ ವೇತನ, ಗೋಬರ್ ಗ್ಯಾಸ್ ಗಳ ಬಳಕೆ, ಮದ್ಯವರ್ಜನ ಶಿಬಿರದಿಂದ ಲಕ್ಷಾಂತರ ಕುಟುಂಬಕ್ಕೆ ನೆಮ್ಮದಿ, ಡೇರಿ ಕಟ್ಟಡಗಳ ನಿರ್ಮಾಣಕ್ಕೆ ಧನಸಹಾಯ, ಸ್ವ ಉದ್ಯೋಗ ತರಬೇತಿ ಶಿಬಿರಗಳಿಂದ ಯುವಕರಿಗೆ ಅನುಕೂಲ, ನಿರ್ಗತಿಕರಿಗೆ ಮಾಸಾಶನ, ಮನೆ ಇಲ್ಲದವರಿಗೆ ವಾಸ್ತಲ್ಯ ಮನೆ, ಶಾಲೆಗಳಿಗೆ ಟೇಬಲ್‌ಗಳ ಕೊಡುಗೆ, ಅಂಗವಿಕಲರಿಗೆ ವ್ಹೀಲ್ ಚೇರ್ ವಿತರಣೆ, ಹಲವಾರು ಯೋಜನೆಗಳಿಂದ ಸಹಾಯ ಮಾಡುತ್ತಿರುವ ಧರ್ಮಸ್ಥಳದ ಡಾ. ವೀರೇಂದ್ರ ಹೆಗ್ಗಡೆಯವರು ಈ ನಾಡಿನಲ್ಲಿ ಹುಟ್ಟಿರುವುದು ನಮ್ಮ ಪುಣ್ಯ ಇಂತಹ ವ್ಯಕ್ತಿಗಳಿರುವ ಕ್ಷೇತ್ರದ ಬಗ್ಗೆ ಅಪಪ್ರಚಾರ ಮಾಡುವುದು ಸರಿಯಾದ ಕ್ರಮವಲ್ಲ ಎಂದು ಎಚ್ಚರಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ನಿರ್ದೇಶಕ ದೇವಾಂಗ್, ಪಿಡಿಒ ಅರುಣ್ ಕುಮಾರ್, ತಾಲೂಕು ಯೋಜನಾಧಿಕಾರಿ ಪ್ರಸಾದ್, ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಹೇಮೇಶ್, ಗ್ರಾಮದ ಮುಖಂಡರಾದ ಶುಂಠಿ ಶಂಕರ್, ವೆಂಕಟೇಶ್, ಸಮನ್ವಯ ಅಧಿಕಾರಿ ಎಮ್. ಸೌಮ್ಯ, ವಿಂದ್ಯ, ಉದಯಪುರ ವಲಯದ ಸೇವಾ ಪ್ರತಿನಿಧಿಗಳು, ಸಂಘದ ಸದಸ್ಯರು ಇತರರು ಹಾಜರಿದ್ದರು. ಫೋಟೋ:

ಅಗಸರಹಳ್ಳಿ ಗ್ರಾಮದ ಆಂಜನೇಯ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಆಯೋಜಿಸಿದ್ದ ಶ್ರೀ ಸತ್ಯನಾರಾಯಣ ಪೂಜಾ ಕಾರ್ಯಕ್ರಮವನ್ನು ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಅಗಸರಹಳ್ಳಿ ಚಂದ್ರೇಗೌಡ ಉದ್ಘಾಟಿಸಿದರು. ಜೊತೆಯಲ್ಲಿ ದೇವಾಂಗು, ಅರುಣ್ ಕುಮಾರ್, ಪ್ರಸಾದ್, ಹೇಮೇಶ್, ಶುಂಠಿ ಶಂಕರ್, ವೆಂಕಟೇಶ್, ಸೌಮ್ಯ, ವಿಂದ್ಯಾ ಇದ್ದರು.

PREV

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ