-ಲಾರಿ ಅವಲಂಬಿತರಿಗೆ ನ್ಯಾಯ ಒದಗಿಸುವಂತೆ ಒತ್ತಾಯ । ಜಿಲ್ಲಾಧಿಕಾರಿಗೆ ಮನವಿ
ಕನ್ನಡಪ್ರಭವಾರ್ತೆ, ಚಿತ್ರದುರ್ಗ
ಗಣಿಬಾಧಿತ ಪ್ರದೇಶಗಳಾದ ಕಾಗಳಗೆರೆ, ಡಿ.ಮದಕರಿಪುರ, ತಣಿಗೆಹಳ್ಳಿ, ಮುತ್ತುಗದೂರು, ಗ್ರಾಮಗಳ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಸೇರಿದ 52 ಲಾರಿಗಳನ್ನು ಕೆಲವು ತಿಂಗಳುಗಳ ಕಾಲ ಗಣಿಗಾರಿಕೆಗೆ ಬಳಸಿಕೊಂಡು ಏಕಾಏಕಿ ಹೊರಗಿಟ್ಟಿರುವುದನ್ನು ವಿರೋಧಿಸಿ ಸಿರಿಗೆರೆಯ ಡಿ.ಮದಕರಿಪುರ ಸಮೀಪ ಕಳೆದ ಐದು ದಿನಗಳಿಂದಲೂ ಧರಣಿ ನಡೆಸುತ್ತಿರುವವರು ನ್ಯಾಯ ಒದಗಿಸುವಂತೆ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.ಬಂಜಾರ ಲಂಬಾಣಿ ಸಮಾಜ, ದಲಿತ ಸಂಘರ್ಷ ಸಮಿತಿ, ವಾಲ್ಮೀಕಿ ಸೇನೆ, ಅಂಬೇಡ್ಕರ್ ಸೇನೆ ಜೊತೆಗೂಡಿ ಧರಣಿ ನಡೆಸಲಾಗುತ್ತಿದೆ. ಸ್ಥಳೀಯರಿಗೆ ಕೆಲಸ ಕೊಡಬೇಕೆಂಬ ನಿಯಮವಿದ್ದರೂ ಜಾನ್ ಮೈನ್ಸ್ ಮತ್ತು ವೇದಾಂತ ಮೈನ್ಸ್ ಅವರು ಇಲ್ಲಸಲ್ಲದ ಸಬೂಬು ಹೇಳಿ ಐವತ್ತೆರಡು ಕುಟುಂಬಗಳ ಲಾರಿಯನ್ನು ಕೆಲಸಕ್ಕೆ ತೆಗೆದುಕೊಳ್ಳದೆ ದರ್ಪ ತೋರುತ್ತಿದ್ದಾರೆ. ಫೈನಾನ್ಸ್ ಸಾಲ ಪಡೆದು ಲಾರಿ ಖರೀದಿಸಿರುವವರು ಅದಿರು ಸಾಗಾಣಿಕೆ ಮಾಡಲು ಅವಕಾಶವಿಲ್ಲದೆ ಪ್ರತಿ ತಿಂಗಳ ಕಂತಿನ ಹಣ ಮೂವತ್ತು ಸಾವಿರ ರು. ಕಟ್ಟಲು ಪರದಾಡುತ್ತಿದ್ದಾರೆ. ಇದರ ನಡುವೆ ಕುಟುಂಬ ನಿರ್ವಹಣೆ ಮಕ್ಕಳ ಶಿಕ್ಷಣಕ್ಕೂ ಸಂಚಕಾರವಾಗಿದೆ ಎಂದು ನೋವು ತೋಡಿಕೊಂಡರು.
------------
ಗಣಿಭಾದಿತ ಪ್ರದೇಶಗಳ ಐವತ್ತೆರಡು ಕುಟುಂಬಗಳಿಗೆ ಉದ್ಯೋಗ ನೀಡುವಂತೆ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.