ಕನ್ನಡಪ್ರಭ ವಾರ್ತೆ ಬೇಲೂರು
ಹೈಟೆಕ್ ಬಸ್ ನಿಲ್ದಾಣದ ವಿಷಯಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರ ಜನಾಭಿಪ್ರಾಯ ಸಭೆಯಲ್ಲಿ ಈಗ ಇರುವ ಸ್ಥಳದಲ್ಲೇ ವಿಸ್ತರಣೆ ಮಾಡಿ ಅಲ್ಲೇ ನಿರ್ಮಾಣ ಮಾಡಲು ಸಾರ್ವಜನಿಕರು ಹಾಗೂ ಸಂಘಸಂಸ್ಥೆಗಳು ಅಭಿಪ್ರಾಯ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಅವರನ್ನು ಭೇಟಿ ಮಾಡಿ ಲೋಕೋಪಯೋಗಿ ಇಲಾಖೆಗೆ ಸೇರಿರುವ ಸ್ವಲ್ಪ ಜಾಗವನ್ನು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ಮಂಜೂರು ಮಾಡುವಂತೆ ಮನವಿ ಮಾಡಲಾಯಿತು ಎಂದರು.
ಪ್ರಸ್ತುತ ಬಸ್ ನಿಲ್ದಾಣವು ತುಂಬಾ ಕಿರಿದಾಗಿ ಇರುವುದರಿಂದ ಸಾರ್ವಜನಿಕರು ಹಾಗು ಪ್ರವಾಸಿಗರು ಹೆಚ್ಚಾಗಿ ಬರುವುದರಿಂದ ನಿಲ್ದಾಣದ ಪಕ್ಕದಲ್ಲಿರುವ ಹಳೆಯ ಪ್ರವಾಸಿ ಮಂದಿರದ ಪಕ್ಕದಲ್ಲಿರುವ ಖಾಲಿ ಜಾಗ ಹಾಗೂ ಲೋಕೋಪಯೋಗಿ ಇಲಾಖೆಗೆ ಸೇರಿದ ಜಾಗವನ್ನು ಒಟ್ಟುಗೂಡಿಸಿ ಬಸ್ ನಿಲ್ದಾಣವನ್ನು ತೆರವು ಮಾಡುವುದರಿಂದ ಸಹಕಾರಿಯಾಗಲಿದೆ. ಮುಖ್ಯರಸ್ತೆ ಅಗಲೀಕರಣಕ್ಕೆ ಹಣ ಬಿಡುಗಡೆ ಮಾಡಿದರೆ ವಾಹನ ದಟ್ಟಣೆ ಕಡಿಮೆ ಮಾಡಲು ಅನುಕೂಲವಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಹಾಗು ಸಂಬಂಧಪಟ್ಟ ಸಚಿವರಿಗೆ ಮನವಿ ಮಾಡಲಾಗಿದೆ ಎಂದು ವಿವರಿಸಿದರು.