ಅಂಗಡಿಹಳ್ಳಿಯಲ್ಲಿ ಸಂಸದ ಶ್ರೇಯಸ್‌ 33ನೇ ಹುಟ್ಟುಹಬ್ಬ

KannadaprabhaNewsNetwork |  
Published : Nov 16, 2024, 12:32 AM IST
15ಎಚ್ಎಸ್ಎನ್3 :  | Kannada Prabha

ಸಾರಾಂಶ

ಲೋಕಸಭಾ ಸದಸ್ಯರಾದ ಶ್ರೇಯಸ್ ಪಟೇಲ್ ಹಾಗೂ ಮಾಜಿ ಸಚಿವ ಬಿ ಶಿವರಾಂ ಅವರ ಹುಟ್ಟುಹಬ್ಬವನ್ನು ತಾಲೂಕಿನ ಹಗರೆ ಗ್ರಾಮದ ಅಂಗಡಿಹಳ್ಳಿಯ ಆಶ್ರಮ ಶಾಲೆಯ ಆವರಣದಲ್ಲಿ ಆಚರಿಸಲಾಯಿತು. ಯುವ ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ರವೀಶ್ ಬಸವಾಪುರ ನೇತೃತ್ವದಲ್ಲಿ ಗಿಡಗಳನ್ನು ನೆಡುವ ಮೂಲಕ ಹಾಗೂ ಕೇಕ್ ಕತ್ತರಿಸಿ ಶಾಲಾ ವಿದ್ಯಾರ್ಥಿಗಳಿಗೆ ಸಿಹಿ ಹಂಚಿ ಸಂಭ್ರಮಿಸಲಾಯಿತು. ಯುವ ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ರವೀಶ್ ಬಸವಾಪುರ ನೇತೃತ್ವದಲ್ಲಿ ಗಿಡಗಳನ್ನು ನೆಡುವ ಮೂಲಕ ಹಾಗೂ ಕೇಕ್ ಕತ್ತರಿಸಿ ಶಾಲಾ ವಿದ್ಯಾರ್ಥಿಗಳಿಗೆ ಸಿಹಿ ಹಂಚಿ ಸಂಭ್ರಮಿಸಲಾಯಿತು.

ಕನ್ನಡಪ್ರಭ ವಾರ್ತೆ ಬೇಲೂರು

ಲೋಕಸಭಾ ಸದಸ್ಯರಾದ ಶ್ರೇಯಸ್ ಪಟೇಲ್ ಹಾಗೂ ಮಾಜಿ ಸಚಿವ ಬಿ ಶಿವರಾಂ ಅವರ ಹುಟ್ಟುಹಬ್ಬವನ್ನು ತಾಲೂಕಿನ ಹಗರೆ ಗ್ರಾಮದ ಅಂಗಡಿಹಳ್ಳಿಯ ಆಶ್ರಮ ಶಾಲೆಯ ಆವರಣದಲ್ಲಿ ಆಚರಿಸಲಾಯಿತು. ಯುವ ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ರವೀಶ್ ಬಸವಾಪುರ ನೇತೃತ್ವದಲ್ಲಿ ಗಿಡಗಳನ್ನು ನೆಡುವ ಮೂಲಕ ಹಾಗೂ ಕೇಕ್ ಕತ್ತರಿಸಿ ಶಾಲಾ ವಿದ್ಯಾರ್ಥಿಗಳಿಗೆ ಸಿಹಿ ಹಂಚಿ ಸಂಭ್ರಮಿಸಲಾಯಿತು.

ಈ ವೇಳೆ ಮಾತನಾಡಿದ ಅವರು, ಲೋಕಸಭಾ ಸದಸ್ಯರಾದ ಶ್ರೇಯಸ್ ಪಟೇಲ್ ಅವರ ಹುಟ್ಟುಹಬ್ಬವನ್ನು ನಮ್ಮ ಕಾಂಗ್ರೆಸ್ ಕಾರ್ಯಕರ್ತರು ಅವರ ಅಭಿಮಾನಿಗಳೊಂದಿಗೆ ಸೇರಿ ಆಚರಿಸುತ್ತಿದ್ದು, ನಮ್ಮ ಮಾಜಿ ಸಚಿವರು ನಿರಂತರವಾಗಿ ೪೦ ವರ್ಷಗಳಿಂದ ರಾಜಕೀಯದಲ್ಲಿ ಯಾವುದೇ ರೀತಿಯಲ್ಲಿ ಕಪ್ಪು ಚುಕ್ಕಿ ಇಲ್ಲದೆ ನಾಲ್ಕು ಬಾರಿ ಶಾಸಕರಾಗಿ, ಒಂದು ಬಾರಿ ಸಚಿವರಾಗಿ ಉತ್ತಮ ಆಡಳಿತ ನಡೆಸಿದ್ದಾರೆ. ಹಾಸನದ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆಯನ್ನು ಕೊಟ್ಟಿದ್ದಾರೆ. ಹಾಗೂ ಲೋಕಸಭಾ ಸದಸ್ಯರು ಕೂಡ ಕ್ರಿಯಾಶೀಲರಾಗಿ ಎಲ್ಲಾ ಕ್ಷೇತ್ರದಲ್ಲೂ ಓಡಾಡಿ ಅಭಿವೃದ್ಧಿ ಕಡೆ ಹೆಚ್ಚಿನ ಒಲವು ತೋರಿಸುತ್ತಿದ್ದಾರೆ. ಇವರಿಬ್ಬರೂ ರಾಜಕೀಯ ಕ್ಷೇತ್ರದಲ್ಲಿ ಇನ್ನೂ ಹೆಚ್ಚಿನ ರೀತಿಯಲ್ಲಿ ಕೆಲಸ ಮಾಡಲಿ ಎಂದು ಗೆಳೆಯರ ಬಳಗದ ವತಿಯಿಂದ ಆಶಿಸುತ್ತಿದ್ದೇನೆ ಎಂದರು.ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ವೆಂಕಟೇಶ್ ಮಾದಿಹಳ್ಳಿ, ಗ್ಯಾರಂಟಿ ಸಮಿತಿ ಸದಸ್ಯ ಅಶೋಕ್ ದೇವಿಹಳ್ಳಿ, ಉಪೇಂದ್ರ, ಮಹೇಶ್, ಬಾಲರಾಜ್ ಹಗರೆ, ರಮೇಶ್ ಹಗರೆ, ಚೇತನ್ ಮಲ್ಲಿಕಾರ್ಜುನಪುರ, ಹರ್ಷ ಕಲ್ಕೆರೆ, ಗೋಪಿ ಮೊದಲಾದವರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದೀರ್ಘಾವಧಿ ಸಿಎಂ ಸಂಭ್ರಮಕ್ಕೆ ಗೃಹಲಕ್ಷ್ಮಿ ಹಣ ನೀಡಿದ ಮಹಿಳೆ!
4 ಜಿಲ್ಲೆಗಳಲ್ಲಿ 13 ಸಾವಿರ ಕೇಸ್‌ ಬಾಕಿ : ಸಚಿವ ತರಾಟೆ