ಕನ್ನಡಪ್ರಭ ವಾರ್ತೆ ಸಕಲೇಶಪುರ
ಜನವರಿ 23ರಂದು ಹಾಸನ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ರತನ್ ಸದಾಶಿವ, ಕೃಷ್ಣಮೂರ್ತಿ, ರುದ್ರಪ್ಪ ಎಂಬವರುಗಳು ತನ್ನ ಮೇಲೆ ಆಧಾರ ರಹಿತ ಹಾಗೂ ಸುಳ್ಳು ಆರೋಪಗಳನ್ನು ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯ ವಿಡಿಯೋದಲ್ಲಿ “ಸಕಲೇಶಪುರದ ಮುರಳಿ ಮೋಹನ್ ಮತ್ತು ಅವರ ಸಹಚರರು ಎರಡು ಕೊಲೆಗಳನ್ನು ಮಾಡಿ ಚಾರ್ಮಾಡಿ ಘಾಟ್‌ನಲ್ಲಿ ಶವ ಎಸೆದಿದ್ದಾರೆ” ಎಂಬ ಹೇಳಿಕೆ ನೀಡಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಯಾವುದೇ ಸ್ಪಷ್ಟ ಮಾಹಿತಿ ಇಲ್ಲದೆ ನನ್ನ ಮೇಲೆ ಗಂಭೀರ ಆರೋಪಗಳನ್ನು ಮಾಡಲಾಗಿದೆ. ಇದರಿಂದ ನನ್ನ ಮಾನಹಾನಿ ಹಾಗೂ ತೇಜೋವಧೆ ನಡೆದಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಆರೋಪಿತ ವ್ಯಕ್ತಿಗಳ ವಿರುದ್ಧ ಸೂಕ್ತ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ತನಗೆ ನ್ಯಾಯ ಒದಗಿಸಬೇಕು ಎಂದು ಮುರಳಿ ಮೋಹನ್ ಅವರು ನಗರ ಪೊಲೀಸ್ ನಿರೀಕ್ಷಕರ ವನರಾಜ್ ಅವರಿಗೆ ಮನವಿ ಸಲ್ಲಿಸಿದ್ದಾರೆ.