ಜೆಡಿಎಸ್ ಮೈತ್ರಿಯಿಂದ ಆನೆ ಬಲ

KannadaprabhaNewsNetwork |  
Published : Apr 05, 2024, 01:07 AM IST
(ಪೋಟೊ 4 ಬಿಕೆಟಿ7, ನಗರದಲ್ಲಿ ಗುರುವಾರ ಬಿಜೆಪಿ ಮತ್ತು ಜೆಡಿಎಸ್ ಮುಖಂಡರು ನಡೆಸಿದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಗಣ್ಯರು) | Kannada Prabha

ಸಾರಾಂಶ

ಕಳೆದ 20 ವರ್ಷಗಳ ಅಧಿಕಾರದ ಅವಧಿಯಲ್ಲಿ ಜಿಲ್ಲೆಯಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳು ಆಗಿವೆ. ಕೇಂದ್ರ ಸರ್ಕಾರದ ಪ್ರತಿ ಯೋಜನೆಗಳನ್ನು ಸಮಾಜದ ಕಟ್ಟಕಡೆಯ ವ್ಯಕ್ತಿಗೆ ತಲುಪಿಸಲು ಶ್ರಮಿಸಿದ್ದೆನೆ

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯಿಂದಾಗಿ ರಾಜ್ಯದಲ್ಲಿ ಎನ್‌ಡಿಎಗೆ ಆನೆ ಬಲ ಬಂದಂತಾಗಿದೆ. ಬಾಗಲಕೋಟೆ ಲೋಕಸಭಾ ಕ್ಷೇತ್ರದಲ್ಲಿಯೂ ಉಭಯ ಪಕ್ಷಗಳ ಸಮನ್ವಯ ಸಮಿತಿ ರಚಿಸಿ, ಆ ಮೂಲಕ ಚುನಾವಣೆ ಎದುರಿಸಲಾಗುವುದು ಎಂದು ಸಂಸದ, ಬಿಜೆಪಿ ಅಭ್ಯರ್ಥಿ ಪಿ.ಸಿ. ಗದ್ದಿಗೌಡರ ಹೇಳಿದರು.

ನಗರದಲ್ಲಿ ಗುರುವಾರ ಬಿಜೆಪಿ ಮತ್ತು ಜೆಡಿಎಸ್ ಮುಖಂಡರು ನಡೆಸಿದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಬಿಜೆಪಿ ಪ್ರಬಲವಾಗಿದೆ. ಜೆಡಿಎಸ್‌ಗೂ ಉತ್ತಮ ವಾತಾವರಣ ಇದೆ. ಹಾಗಾಗಿ ಈ ಬಾರಿ ಚುನಾವಣೆಯಲ್ಲಿಯೂ ತಮ್ಮ ಗೆಲುವು ನಿಶ್ಚಿತ. ಬಾಗಲಕೋಟೆ ಕ್ಷೇತ್ರದಲ್ಲಿ ಬಿಜೆಪಿ ಹಾಗೂ ಜೆಡಿಎಸ್‌ ಕಾರ್ಯಕರ್ತರು ಒಟ್ಟಾಗಿ ಶ್ರಮಿಸಿ, ಬಿಜೆಪಿಯನ್ನು ಗೆಲ್ಲಿಸುವ ಮೂಲಕ ಮೋದಿ ಕೈ ಬಲಪಡಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕಳೆದ 20 ವರ್ಷಗಳ ಅಧಿಕಾರದ ಅವಧಿಯಲ್ಲಿ ಜಿಲ್ಲೆಯಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳು ಆಗಿವೆ. ಕೇಂದ್ರ ಸರ್ಕಾರದ ಪ್ರತಿ ಯೋಜನೆಗಳನ್ನು ಸಮಾಜದ ಕಟ್ಟಕಡೆಯ ವ್ಯಕ್ತಿಗೆ ತಲುಪಿಸಲು ಶ್ರಮಿಸಿದ್ದೆನೆ. ಕ್ಷೇತ್ರದ ಜನತೆಗೆ ನನ್ನ ಸಾಧನೆಗಳು ಮನದಟ್ಟವಾಗಿವೆ. ನಾನು ಏನು ಎನ್ನುವುದು ಜನತೆಗೂ ಗೊತ್ತಿದೆ. ನಮ್ಮ ಕೇಂದ್ರ ಸರ್ಕಾರದ ಸಾಕಷ್ಟು ಸಾಧನೆಗಳು ಜನ ಸಾಮಾನ್ಯರಿಗೆ ತಲುಪಿವೆ. ಈ ಹಿನ್ನೆಲೆಯಲ್ಲಿ ಅವರು ನಮ್ಮ ಪರವಾಗಿ ನಿಂತು ನನ್ನನ್ನು ಗೆಲ್ಲಿಸಲಿದ್ದಾರೆ ಎಂದು ತಿಳಿಸಿದರು.

ಜಿಲ್ಲಾ ಬಿಜೆಪಿ ಅಧ್ಯಕ್ಷ ಶಾಂತಗೌಡ ಪಾಟೀಲ ಮಾತನಾಡಿ, ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿಯ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆ ಶುಕ್ರವಾರ ಬಾಗಲಕೋಟೆಯಲ್ಲಿ ನಡೆಯಲಿದೆ. ಈ ಸಭೆಯಲ್ಲಿ ಎರಡು ಪಕ್ಷದ ಮುಖಂಡರು ಭಾಗವಹಿಸಲಿದ್ದಾರೆ. ಇಲ್ಲಿ ಪ್ರಚಾರ ರೂಪ ರೇಷಗಳ ಕುರಿತು ಚರ್ಚಿಸಿ ಒಟ್ಟಾಗಿ ಚುನಾವಣೆ ಪ್ರಚಾರ ನಡೆಸುತ್ತೇವೆ ಎಂದು ತಿಳಿಸಿದರು.

ಜೆಡಿಎಸ್ ಜಿಲ್ಲಾಧ್ಯಕ್ಷ ಹನಮಂತ ಮಾವಿನಮರದ ಮತ್ತು ನಾನು ಕಳೆದ ವಿಧಾನಸಭಾ ಚುನಾವಣೆ ಯಲ್ಲಿ ಬಾದಾಮಿ ಮತಕ್ಷೇತ್ರದಿಂದ ಅಭ್ಯರ್ಥಿಗಳು ಆಗಿದ್ದೆವು. ಈಗ ಇಬ್ಬರು ಸೇರಿ ಕ್ಷೇತ್ರದ ಪ್ರತಿ ಹಳ್ಳಿಗೂ ಭೇಟಿ ನೀಡಿ ಪಕ್ಷದ ಅಭ್ಯರ್ಥಿ ಗದ್ದಿಗೌಡರ ಗೆಲುವಿಗೆ ಶ್ರಮಿಸುವುದಾಗಿ ಹೇಳಿದರು.

ಜಿಲ್ಲಾ ಜೆಡಿಎಸ್ ಅಧ್ಯಕ್ಷ ಹನಮಂತ ಮಾವಿನಮರದ ಮಾತನಾಡಿದರು. ಬಾಗಲಕೋಟೆ ಲೋಕ ಸಭಾ ಕ್ಷೇತ್ರದ ಬಿಜೆಪಿ ಚುನಾವಣಾ ಸಂಚಾಲಕ, ಶಾಸಕ ಸಿದ್ದು ಸವದಿ ಮಾತನಾಡಿ, ಪಕ್ಷಕ್ಕೆ ಲಾಭ ಆಗುವುದನ್ನು ಗಮನಿಸಿ ಪಕ್ಷಕ್ಕೆ ಬರುವವರನ್ನು ಸೇರಿಸಿಕೊಳ್ಳುತ್ತೇವೆ. ಈ ವಿಷಯದಲ್ಲಿ ಸ್ಥಳೀಯ ಮುಖಂಡರ ನಿರ್ಧಾರ ಅಂತಿಮವಾಗಿರಲಿದೆ ಎಂದರು. ಸುದ್ದಿಗೋಷ್ಠಿ ಮುಖಂಡರಾದ ಬಿ.ಪಿ. ಹಳ್ಳೂರ, ಚಂದ್ರಕಾಂತ ಶೇಖಾ, ಸಲಿಂ ಮೋಮಿನ್, ಕೃಷ್ಣಾ ಪಾಟೀಲ, ಬಸವರಾಜ ಯಂಕಂಚಿ, ರಾಜು ನಾಯ್ಕರ್ ಸೇರಿದಂತೆ ಅನೇಕರು ಇದ್ದರು. ಕೋಟ್.

ಕಳೆದ 20 ವರ್ಷಗಳ ಅಧಿಕಾರದ ಅವಧಿಯಲ್ಲಿ ಜಿಲ್ಲೆಯಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳು ಆಗಿವೆ. ಕೇಂದ್ರ ಸರ್ಕಾರದ ಪ್ರತಿ ಯೋಜನೆಗಳನ್ನು ಸಮಾಜದ ಕಟ್ಟಕಡೆಯ ವ್ಯಕ್ತಿಗೆ ತಲುಪಿಸಲು ಶ್ರಮಿಸಿದ್ದೆನೆ. ಕ್ಷೇತ್ರದ ಜನತೆಗೆ ನನ್ನ ಸಾಧನೆಗಳು ಮನದಟ್ಟವಾಗಿವೆ. ನಾನು ಏನು ಎನ್ನುವುದು ಜನತೆಗೂ ಗೊತ್ತಿದೆ.

ಪಿ.ಸಿ ಗದ್ದಿಗೌಡರ . ಸಂಸದ, ಬಿಜೆಪಿ ಅಭ್ಯರ್ಥಿ

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶೌಚಾಲಯಕ್ಕೆ ಬೀಗ ಹಾಕಿ ಮೂತ್ರ ವಿಸರ್ಜನೆ ತಡೆಗೆ ಕನ್ನಡಿ!
ಚಿರತೆಗೆ ಬಾಲಕ ಬಲಿ : ನಾಗಮಲೆಗೆ ಪ್ರಯಾಣ ನಿಷೇಧ