ಕನ್ನಡಪ್ರಭ ವಾರ್ತೆ ಮೈಸೂರು
ಮೈಸೂರು ವಿಭಾಗದಿಂದ ಗುರುವಾರ ರೈಲ್ವೆ ಆಸ್ಪತ್ರೆ ಹಾಗೂ ರಕ್ತ ನಿಧಿ, ಕೆ.ಆರ್. ಆಸ್ಪತ್ರೆ, ಮೈಸೂರು ಮೆಡಿಕಲ್ ಕಾಲೇಜ್ ಮತ್ತು ಸಂಶೋಧನಾ ಸಂಸ್ಥೆ ಸಹಯೋಗದಲ್ಲಿ ಯಶಸ್ವಿಯಾಗಿ ರಕ್ತದಾನ ಶಿಬಿರ ನಡೆಯಿತು.
ಶಿಬಿರದ ಉದ್ದೇಶ ಸೇವಾ ಮನೋಭಾವ, ಸಹಾನುಭೂತಿ ಹಾಗೂ ಸಾಮಾಜಿಕ ಹೊಣೆಗಾರಿಕೆ ಉತ್ತೇಜಿಸುವುದು.ಅನೇಕ ಹಿರಿಯ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸ್ವಯಂಸೇವಕರು ಉತ್ಸಾಹದಿಂದ ಶಿಬಿರದಲ್ಲಿ ಭಾಗವಹಿಸಿದರು. ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಮುದಿತ್ ಮಿತ್ತಲ್ ಸೇರಿ ಒಟ್ಟು 48 ಮಂದಿ ಸ್ವಯಂಸೇವಕರು ರಕ್ತದಾನ ಮಾಡಿದರು.
ಶಿಬಿರವನ್ನು ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಮುದಿತ್ ಮಿತ್ತಲ್ ಉದ್ಘಾಟಿಸಿದರು. ಈ ವೇಳೆಹೆಚ್ಚುವರಿ ವಿಭಾಗೀಯ ರೈಲ್ವೆ ವ್ಯವಸ್ಥಾಪಕಿ ಶಮ್ಮಾಸ್ ಹಮೀದ್, ಮುಖ್ಯ ವೈದ್ಯಾಧಿಕಾರಿ ಡಾ.ಬಿ.ಎನ್. ಅಶೋಕ್ ಕುಮಾರ್, ಡಾ. ಕುಸುಮಾ ಹಾಗೂ ಡಾ. ಚಿಂಟು ಮೇರಿ ಮ್ಯಾಥ್ಯೂ, ಕೆ.ಆರ್. ಆಸ್ಪತ್ರೆ ಮತ್ತು ರಕ್ತನಿಧಿ ಕೇಂದ್ರದ ಸಿಬ್ಬಂದಿ ಇದ್ದರು.