ನಾಗರ ಪಂಚಮಿ ಸಂಬಂಧಿಸಿದಂತೆ ಜಾನಪದ ಮತ್ತು ಪುರಾಣದಲ್ಲಿ ಹಲವು ಕಥೆಗಳಿವೆ. ಜನಪದ ಕಥೆಯ ಪ್ರಕಾರ ನಾಗರ ಪಂಚಮಿ ಬರುವುದು ಮುಂಗಾರಿನ ರಭಸದ ದಿನಗಳ ಮಧ್ಯೆ. ಈ ಕಾಲದ ಕೃಷಿ ಚಟುವಟಿಕೆಗಳು ಒಂದು ಹಂತ ತಲುಪಿರುತ್ತವೆ. ಈ ಕಾಲದಲ್ಲಿ ಕೀಟ, ಮಿಡತೆಗಳ ಹಾವಳಿ ಅಧಿಕ. ಅಷ್ಟೇ ಅಲ್ಲದೆ ಫಸಲು ತಿನ್ನಲು ಬರುವ ಇಲಿಗಳಿಗೂ ಕೊರತೆಯಿಲ್ಲ. ಇವೆಲ್ಲದರಿಂದ ರೈತನ ಫಸಲನ್ನು ಕಾಪಾಡುವುದು ಹಾವುಗಳು. ಇಲಿ, ಕಪ್ಪೆಗಳ ಅತಿಯಾದ ಹಾವಳಿಯನ್ನು ನಿಯಂತ್ರಿಸುವ ನಾಗರನಿಗೆ ಪುಟ್ಟದೊಂದು ಧನ್ಯವಾದ ಹೇಳಲು ನಡೆಸುವ ಪೂಜೆಯೇ ನಾಗರ ಪಂಚಮಿ ದಿವಸವಾಗಿದೆ. ಇನ್ನು ಅಣ್ಣ-ತಂಗಿಯರ ಬಾಂಧವ್ಯವು ಗಟ್ಟಿಯಾಗಿರಲೆಂದು ಹುತ್ತಕ್ಕೆ ಭಕ್ತಿಯಿಂದ ಪೂಜೆ ಸಲ್ಲಿಸುತ್ತಾರೆ.
ಹಾಸನ: ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಮಂಗಳವಾರದಂದು ನಗರದ ಮಹಾರಾಜ ಉದ್ಯಾನವನ ಇತರೆ ಕಡೆ ಹಾವಿನ ಹುತ್ತಕ್ಕೆ ಮಹಿಳೆಯರು ಮತ್ತು ಪುರುಷರು ಹಾಲೆರೆದು ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಿ ನಾಗರ ಪಂಚಮಿ ಆಚರಿಸಿದರು.
ಹಿಂದೂ ಪಂಚಾಂಗದ ಪ್ರಕಾರ ಎಲ್ಲ ಹಬ್ಬಗಳಿಗೆ ಮುನ್ನುಡಿಯಂತೆ ಬರುವ ಹಬ್ಬ ಎಂದರೆ ಅದು ನಾಗರ ಪಂಚಮಿ. ಶ್ರಾವಣ ಶುದ್ಧ ಪಂಚಮಿಯಿಂದ ಆಚರಿಸಲ್ಪಡುವ ಈ ಹಬ್ಬ ಮುಂದೆ ಬರಲಿರುವ ಗಣೇಶ ಚತುರ್ಥಿ, ಕೃಷ್ಣಾಷ್ಟಮಿ, ನವರಾತ್ರಿ, ಊರಿನ ಜಾತ್ರೆಗೆ, ಎಲ್ಲ ಶುಭ ಆಚರಣೆಗಳಿಗೆ ಮೊದಲ ಮೆಟ್ಟಿಲು ಆಗಿದೆ. ನಾಗರ ಪಂಚಮಿ ಸಂಬಂಧಿಸಿದಂತೆ ಜಾನಪದ ಮತ್ತು ಪುರಾಣದಲ್ಲಿ ಹಲವು ಕಥೆಗಳಿವೆ. ಜನಪದ ಕಥೆಯ ಪ್ರಕಾರ ನಾಗರ ಪಂಚಮಿ ಬರುವುದು ಮುಂಗಾರಿನ ರಭಸದ ದಿನಗಳ ಮಧ್ಯೆ. ಈ ಕಾಲದ ಕೃಷಿ ಚಟುವಟಿಕೆಗಳು ಒಂದು ಹಂತ ತಲುಪಿರುತ್ತವೆ. ಈ ಕಾಲದಲ್ಲಿ ಕೀಟ, ಮಿಡತೆಗಳ ಹಾವಳಿ ಅಧಿಕ. ಅಷ್ಟೇ ಅಲ್ಲದೆ ಫಸಲು ತಿನ್ನಲು ಬರುವ ಇಲಿಗಳಿಗೂ ಕೊರತೆಯಿಲ್ಲ. ಇವೆಲ್ಲದರಿಂದ ರೈತನ ಫಸಲನ್ನು ಕಾಪಾಡುವುದು ಹಾವುಗಳು. ಇಲಿ, ಕಪ್ಪೆಗಳ ಅತಿಯಾದ ಹಾವಳಿಯನ್ನು ನಿಯಂತ್ರಿಸುವ ನಾಗರನಿಗೆ ಪುಟ್ಟದೊಂದು ಧನ್ಯವಾದ ಹೇಳಲು ನಡೆಸುವ ಪೂಜೆಯೇ ನಾಗರ ಪಂಚಮಿ ದಿವಸವಾಗಿದೆ. ಇನ್ನು ಅಣ್ಣ-ತಂಗಿಯರ ಬಾಂಧವ್ಯವು ಗಟ್ಟಿಯಾಗಿರಲೆಂದು ಹುತ್ತಕ್ಕೆ ಭಕ್ತಿಯಿಂದ ಪೂಜೆ ಸಲ್ಲಿಸುತ್ತಾರೆ.
ನಾಗರ ಪಂಚಮಿ ದಿನದಂದು ಹುತ್ತಕ್ಕೆ ಶಾಸ್ತ್ರೋಕ್ತವಾಗಿ ಪೂಜೆ ಮಾಡಿದರೇ ಇಷ್ಟಾರ್ಥಗಳು ಈಡೇರುತ್ತದೆ ಎಂಬುದು ಹಿಂದಿನ ಕಾಲದಿಂದಲೂ ನಡೆದುಕೊಂಡು ಬಂದಿದೆ. ಈ ಪೂಜೆಯನ್ನು ಹೆಚ್ಚು ಮಹಿಳೆಯರು, ಹೆಣ್ಣು ಮಕ್ಕಳು ಮಾಡುತ್ತಾರೆ. ಇತ್ತಿಚಿನ ದಿನಗಳಲ್ಲಿ ಪುರುಷರು ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಪೂಜೆ ಸಲ್ಲಿಸಲು ಮುಂದಾಗುತ್ತಿದ್ದಾರೆ. ಪೂಜೆ ಮಾಡುವ ವೇಳೆ ಮಹಿಳೆಯರಿಂದ ದೇವರ ಹಾಡುಗಳು ಕೇಳಿ ಬರುತಿತ್ತು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.