21ರಂದು ‘ನೇಗಿಲ ಯೋಗಿ’ ಪ್ರಶಸ್ತಿ ಪ್ರದಾನ ಸಮಾರಂಭ

KannadaprabhaNewsNetwork |  
Published : Apr 17, 2026, 02:45 AM IST
ಶಂಕರನಾರಾಯಣ | Kannada Prabha

ಸಾರಾಂಶ

ಕೊಡಗು ಪತ್ರಕರ್ತರ ಸಂಘದ ಕುಶಾಲನಗರ ತಾಲೂಕು ಘಟಕ ಕೊಡಮಾಡುವ ‘ನೇಗಿಲ ಯೋಗಿ’ ಪ್ರಶಸ್ತಿ ಪ್ರದಾನ ಸಮಾರಂಭ ಏ.21ರಂದು ಕುಶಾಲನಗರದ ಗೌಡ ಸಮಾಜದ ಸಭಾಂಗಣದಲ್ಲಿ ನಡೆಯಲಿದೆ.

ಕನ್ನಡಪ್ರಭ ವಾರ್ತೆ ಸುಂಟಿಕೊಪ್ಪ

ಕೊಡಗು ಪತ್ರಕರ್ತರ ಸಂಘದ ಕುಶಾಲನಗರ ತಾಲೂಕು ಘಟಕ ಕೊಡಮಾಡುವ ‘ನೇಗಿಲ ಯೋಗಿ’ ಪ್ರಶಸ್ತಿ ಪ್ರದಾನ ಸಮಾರಂಭ ಏ.21ರಂದು ಕುಶಾಲನಗರದ ಗೌಡ ಸಮಾಜದ ಸಭಾಂಗಣದಲ್ಲಿ ನಡೆಯಲಿದೆ.ಕುಶಾಲನಗರ ತಾಲೂಕಿನಲ್ಲಿ ಕೃಷಿ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ನಾಲ್ವರು ಕೃಷಿಕರನ್ನು ತಾಲೂಕು ಪತ್ರಕರ್ತರ ಸಂಘ ಪ್ರತಿ ವರ್ಷ ‘ನೇಗಿಲ ಯೋಗಿ’ ಪ್ರಶಸ್ತಿ ನೀಡಿ ಗೌರವಿಸುತ್ತಿದೆ.ಅದರಂತೆ ಈ ಬಾರಿ ಸುಂಟಿಕೊಪ್ಪದ ಪ್ರಗತಿಪರ ಕೃಷಿಕ ಪಟ್ಟೆಮನೆ ಪಿ. ಉದಯ ಕುಮಾರ್, ನಾಕೂರು ಶಿರಂಗಾಲ ಗ್ರಾಪಂನ ಮಳೂರು ನಿವಾಸಿ ಶಂಕರನಾರಾಯಣ, ಶಿರಂಗಾಲ ಗ್ರಾಪಂನ ಮಣಜೂರು ನಿವಾಸಿ ಭವಾನಿ ಕುಮಾರಸ್ವಾಮಿ ಹಾಗೂ ಗುಡ್ಡೆಹೊಸೂರು ಗ್ರಾಪಂನ ಬಾಳುಗೋಡು ನಿವಾಸಿ ನಂಗಾರು ಜಗ ಅವರನ್ನು ಆಯ್ಕೆ ಮಾಡಲಾಗಿದೆ.ಏ. 21ರಂದು ಪೂರ್ವಾಹ್ನ 11 ಗಂಟೆಗೆ ನಡೆಯುವ ಕಾರ್‍ಯಕ್ರಮವನ್ನು ಕೊಡಗು ಪತ್ರಿಕಾ ಭವನ ಟ್ರಸ್ಟ್‌ ಮ್ಯಾನೇಜಿಂಗ್ ಟ್ರಸ್ಟಿ ಎಂ.ಪಿ. ಕೇಶವ ಕಾಮತ್ ಅವರು ಉದ್ಘಾಟಿಸಲಿದ್ದು, ಕುಶಾಲನಗರ ತಾಲೂಕು ಪತ್ರಕರ್ತರ ಘಟಕದ ಅಧ್ಯಕ್ಷ ಬಿ.ಸಿ. ದಿನೇಶ್ ಅಧ್ಯಕ್ಷತೆ ವಹಿಸುವರು.ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷ ಎಚ್.ಟಿ. ಅನಿಲ್, ದತ್ತಿದಾನಿಗಳಾಗಿರುವ ಕೃಷಿಕ ಹಾಗೂ ಸಮಾಜ ಸೇವಕ ಟಿ.ಕೆ. ಸಾಯಿಕುಮಾರ್, ಕುಶಾಲನಗರ ಗೌಡ ಸಮಾಜದ ಅಧ್ಯಕ್ಷ ಚಿಲ್ಲನ ಗಣಿ ಪ್ರಸಾದ್, ಸುಂಟಿಕೊಪ್ಪದ ವಿಜಯ ಪ್ಲಾಂಟೇಷನ್ ಸಪ್ಲೈಸ್‌ ನ ಮಾಲೀಕ ಎಸ್.ಜಿ. ಶ್ರೀನಿವಾಸ್, ಗುಡ್ಡೆಹೊಸೂರಿನ ಉದ್ಯಮಿ ಮಂಡೆಪಂಡ ಚಿಮ್ಮ ಉತ್ತಪ್ಪ, ರಂಗಸಮುದ್ರದ ಉದ್ಯಮಿ ರಕ್ಷಿತ್ ಮಾವಾಜಿ, ಚಿಕ್ಕಬೆಟ್ಟಗೇರಿಯ ಉದ್ಯಮಿ ರಂಜಿತ್ ಎಂ.ಎಸ್. ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.ಇದೇ ಸಂದರ್ಭ ನಿವೃತ್ತ ಬ್ಯಾಂಕ್ ಉದ್ಯೋಗಿ, ವ್ಯಕ್ತಿತ್ವ ವಿಕಸನ ತರಬೇತಿದಾರ ಹಾಗೂ ವೃತ್ತಿ ಮಾರ್ಗದರ್ಶಕ, ಅಂಕಣಕಾರ ಆರ್.ಕೆ. ಬಾಲಚಂದ್ರ ಅವರು ಕೊಡಗಿನಲ್ಲಿ ಕೃಷಿ ಪ್ರವಾಸೋದ್ಯಮ-ಹಲವು ಆಯಾಮಗಳು ಎಂಬ ವಿಷಯ ಕುರಿತು ಉಪನ್ಯಾಸ ನೀಡಲಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ತಂದೆಯ ಆಡಳಿತದಲ್ಲಿ ರಾಜ್ಯ ಸುಭಿಕ್ಷವಾಗಲಿ
ಐದು ವರ್ಷ ತಂದೆಯೇ ರಾಜ್ಯ ಮುುನ್ನಡೆಸಲಿ