ಒತ್ತಡವಿಲ್ಲದೆ ನಿರಂತರವಾಗಿ ಏಕಾಗ್ರತೆಯಿಂದ ಓದಬೇಕು

KannadaprabhaNewsNetwork |  
Published : Feb 02, 2025, 11:46 PM IST
2ಎಚ್ಎಸ್ಎನ್7 :  ಪಟ್ಟಣದ  ಹಾಸನ ರಸ್ತೆಯಲ್ಲಿರುವ  ಬಿಜಿಎಸ್ ವಿಜ್ಞಾನ ಹಾಗು ವಾಣಿಜ್ಯ ಪದವಿಪೂರ್ವ ಕಾಲೇಜ್ ಹಾಗೂ ಶಾಲಾ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ  ಕಾರ್ಯಾಗಾರ ಏರ್ಪಡಿಸಲಾಗಿತ್ತು. | Kannada Prabha

ಸಾರಾಂಶ

ಮಾನವೀಯ ಮೌಲ್ಯಗಳ ಜೊತೆಗೆ ನಾನು ಭವಿಷ್ಯದಲ್ಲಿ ಉತ್ತಮ ಸ್ಥಾನ ಪಡೆಯಬೇಕು ಎನ್ನುವ ಪ್ರೇರಣೆಯೊಂದಿಗೆ ಜೀವನವನ್ನು ಧೈರ್ಯದಿಂದ ಎದುರಿಸಬಲ್ಲೆ ಎಂಬ ಧೈರ್ಯವನ್ನು ಮೈಗೂಡಿಸಿಕೊಳ್ಳಬೇಕೆಂದು ಕ್ಷೇತ್ರ ಶಿಕ್ಷಣಾಧಿಕಾರಿ ರಾಜೇಗೌಡ ಹೇಳಿದರು. ವಿದ್ಯಾರ್ಥಿಗಳು ಉತ್ತಮ ಸಾಧಕನಾಗಬೇಕಾದರೆ ಒಳ್ಳೆಯ ಅಭ್ಯಾಸಗಳ ಜೊತೆ ಕ್ರಿಯಾಶೀಲರಾಗಿ ಅಭ್ಯಾಸದ ಕಡೆ ಗಮನ ಹರಿಸಿದರೆ ಮಾತ್ರ ನಿಮ್ಮ ಮುಂದಿನ ಭವಿಷ್ಯ ಉತ್ತಮವಾಗಿ ಸಾಗುತ್ತದೆ ಎಂದರು.

ಕನ್ನಡಪ್ರಭ ವಾರ್ತೆ ಬೇಲೂರು ಮಾನವೀಯ ಮೌಲ್ಯಗಳ ಜೊತೆಗೆ ನಾನು ಭವಿಷ್ಯದಲ್ಲಿ ಉತ್ತಮ ಸ್ಥಾನ ಪಡೆಯಬೇಕು ಎನ್ನುವ ಪ್ರೇರಣೆಯೊಂದಿಗೆ ಜೀವನವನ್ನು ಧೈರ್ಯದಿಂದ ಎದುರಿಸಬಲ್ಲೆ ಎಂಬ ಧೈರ್ಯವನ್ನು ಮೈಗೂಡಿಸಿಕೊಳ್ಳಬೇಕೆಂದು ಕ್ಷೇತ್ರ ಶಿಕ್ಷಣಾಧಿಕಾರಿ ರಾಜೇಗೌಡ ಹೇಳಿದರು.

ಬಿಜಿಎಸ್ ವಿಜ್ಞಾನ ಹಾಗೂ ವಾಣಿಜ್ಯ ಪದವಿಪೂರ್ವ ಕಾಲೇಜು ಹಾಗೂ ಶಾಲಾ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿದ್ದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳ ಜೀವನದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಹತ್ವದ ಘಟ್ಟವಾಗಿದ್ದು, ಯಾವುದೇ ಒತ್ತಡವಿಲ್ಲದೆ ನಿರಂತರವಾಗಿ ಏಕಾಗ್ರತೆಯಿಂದ ಯಾವುದೇ ಗೊಂದಲವಿಲ್ಲದೆ ಓದಬೇಕು. ಎಸ್‌ಎಸ್‌ಎಲ್‌ಸಿ ನಂತರ ಯಾವ ಕೋರ್ಸ್‌ಗಳ ಮಾಡಬೇಕು ಎಂಬುವುದರ ಬಗ್ಗೆ ಹಾಗು ವಿದ್ಯಾರ್ಥಿಗಳಿಗೆ ನಿವೃತ್ತ ಶಿಕ್ಷಕರು ಹಾಗೂ ಉಪನ್ಯಾಸಕರಿಂದ ಮಾಹಿತಿ ನೀಡುವಂತಹ ಕಾರ್ಯಾಗಾರ ಇದಾಗಿದೆ. ವಿದ್ಯಾರ್ಥಿಗಳು ಉತ್ತಮ ಸಾಧಕನಾಗಬೇಕಾದರೆ ಒಳ್ಳೆಯ ಅಭ್ಯಾಸಗಳ ಜೊತೆ ಕ್ರಿಯಾಶೀಲರಾಗಿ ಅಭ್ಯಾಸದ ಕಡೆ ಗಮನ ಹರಿಸಿದರೆ ಮಾತ್ರ ನಿಮ್ಮ ಮುಂದಿನ ಭವಿಷ್ಯ ಉತ್ತಮವಾಗಿ ಸಾಗುತ್ತದೆ ಎಂದರು.

ಬಿಜಿಎಸ್ ವಿದ್ಯಾಸಂಸ್ಥೆಯ ಪ್ರಾಂಶುಪಾಲ ದಿವ್ಯಕುಮಾರ್ ಮಾತನಾಡಿ, ಸ್ವಾಮೀಜಿಯವರ ಆಶಯದಂತೆ ಪ್ರತಿಯೊಬ್ಬ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಈ ಕಾರ್ಯಾಗಾರವನ್ನು ತಾಲೂಕಿನ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಅವಕಾಶ ಕಲ್ಪಿಸಲಾಗುತ್ತಿದೆ. ಪರೀಕ್ಷೆ ಸಂದರ್ಭದಲ್ಲಿ ಭಯಬಿಟ್ಟು ಹಿಂದೇಟು ಹಾಕದಂತೆ ಪ್ರತಿನಿತ್ಯ ಶ್ರದ್ಧೆಯಿಂದ ಓದಿ ಶಿಕ್ಷಕರು ತಿಳಿಸಿದ ಮಾಹಿತಿಯನ್ನು ಗಮನದಲ್ಲಿಟ್ಟುಕೊಂಡು ಓದಬೇಕು. ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳು ಅತಿ ಹೆಚ್ಚಾಗಿ ಸಾಮಾಜಿಕ ಜಾಲತಾಣ ಬಳಸುತ್ತಿರುವುದರಿಂದ ಶಿಕ್ಷಣದ ಮೇಲೆ ಪರಿಣಾಮ ಬೀಳುತ್ತಿದೆ. ಇದರ ಬಗ್ಗೆ ಪೋಷಕರು ನಿಗಾವಹಿಸಬೇಕು. ವಿದ್ಯಾರ್ಥಿಗಳು ಹೆಚ್ಚಿನ ಅಂಕ ಪಡೆದು ಭವಿಷ್ಯದಲ್ಲಿ ಮುಂದೆ ಬರಬೇಕು ಎಂದರು.

ಈ ಸಂದರ್ಭದಲ್ಲಿ ಸಂಪನ್ಮೂಲ ವ್ಯಕ್ತಿಗಳಾದ ಮಂಜುನಾಥ ರೆಡ್ಡಿ ಹಾಗೂ ಡಾ. ಶಿವಕುಮಾರ್ ಉಪನ್ಯಾಸ ನಡೆಸಿಕೊಟ್ಟರು. ಸರ್ವೋದಯ ಪ್ರಾಂಶುಪಾಲ ಪ್ರಕಾಶ್, ಗಿರೀಶ್, ರಾಜಮಲ್ ನಾಯಕ್, ಗೋಪಾಲ, ಅರೇಹಳ್ಳಿ ರಂಜಿತ್, ಇತರರು ಇದ್ದರು.

PREV

Recommended Stories

3ನೇ ಮಹಡಿಯಿಂದ ಆಯತಪ್ಪಿಬಿದ್ದು ಪಿಯು ವಿದ್ಯಾರ್ಥಿನಿ ಸಾವು
ಜೈಲೊಳಗೆ ಡ್ರಗ್ಸ್ ಸಾಗಿಸಲುಯತ್ನ: ವಾರ್ಡನ್ ಬಂಧನ