ಕನ್ನಡಪ್ರಭ ವಾರ್ತೆ ಮಳವಳ್ಳಿ
ಪಟ್ಟಣದ ತಾಪಂ ಆವರಣದ ಶಾಸಕರ ಕಚೇರಿಯಲ್ಲಿ ‘ನಮ್ಮ ಶಾಲೆ ನಮ್ಮ ಕೊಡುಗೆ’ ಕಾರ್ಯಕ್ರಮದ ಪೂರ್ವಭಾವಿಯಾಗಿ ಶಿಕ್ಷಣಾಸ್ತಕರ ಹಾಗೂ ಶಿಕ್ಷಕರ ಸಭೆಯಲ್ಲಿ ಮಾತನಾಡಿದರು.
ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ವಿಶೇಷ ಗಮನ ಹರಿಸುತ್ತಿದೆ. ಶಿಕ್ಷಣ ಇಲಾಖೆ ಹೊಸ ಅಲೋಚನೆಯ ಯಶ್ವಸಿಗೆ ಎಲ್ಲರೂ ಮುಂದಾಗಬೇಕು. ಬೆಳಗಾವಿಯಲ್ಲಿ ನಡೆಯುವ ರಾಜ್ಯ ಮಟ್ಟದ ‘ನಮ್ಮ ಶಾಲೆ ನಮ್ಮ ಕೊಡುಗೆ’ ಕಾರ್ಯಕ್ರಮದಲ್ಲಿ ತಾಲೂಕಿನ ಇಬ್ಬರಿಗೆ ಅವಕಾಶ ಸಿಗಲಿದೆ ಎಂದರು.ತಾಲೂಕಿನ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡುವ ನಿಟ್ಟಿನಲ್ಲಿ ಸಾರ್ವಜನಿಕರ ಸಹಕಾರ ಅಗತ್ಯವಿದೆ. ಹೀಗಾಗಿ ಮೌಲ್ಯವುಳ್ಳ ಶಿಕ್ಷಣಾಸಕ್ತರನ್ನು ಗುರುತಿಸುವ ಕೆಲಸವಾಗಬೇಕು. ಆಯಾಯ ಗ್ರಾಮಗಳಲ್ಲಿ ಉತ್ತಮ ಸ್ಥಿತಿಯಲ್ಲಿ ಇರುವ ದಾನಿಗಳ ನೆರವಿನ ಮೂಲಕ ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಗಣಿತ, ವಿಜ್ಞಾನ ವಿಷಯಗಳ ಬಗ್ಗೆ ಹೆಚ್ಚಿನ ಜ್ಞಾನ ತುಂಬುವ ಕಾರ್ಯ ಮಾಡುವ ನಿಟ್ಟಿನಲ್ಲಿ ಶಿಕ್ಷಕರು ಮುಂದಾಗಬೇಕು ಎಂದರು.
ಈಗಾಗಲೇ ಕೊಠಡಿಗಳ ಕೊರತೆ ನೀಗಿಸಲು 2.25 ಕೋಟಿ ರು. ವಿಶೇಷ ಅನುದಾನ ತಂದಿರುವೆ. 2.5 ಕೋಟಿ ರು. ನನ್ನ ಅನುದಾನವನ್ನು ಶಿಕ್ಷಣಕ್ಕಾಗಿಯೇ ಮೀಸಲಿಡಲಾಗಿದೆ. 50 ಲಕ್ಷ ರು.ಗಳನ್ನು ಟ್ಯಾಬ್‌ಗಳ ಖರೀದಿಗಾಗಿ ನೀಡಲಾಗಿದೆ. ಎಲ್ಲೆಡೆ ಮೂಲ ಸೌಕರ್ಯ ಒದಗಿಸಲಾಗುತ್ತಿದೆ ಎಂದರು.
ಕಳೆದ ಒಂದೂವರೆ ವರ್ಷದಿಂದ ಹಾರ ತೂರಾಯಿ ಹಾಕುವ ಬದಲು ಶೈಕ್ಷಣಿಕ ಸಾಮಗ್ರಿಗಳನ್ನು ನೀಡುವಂತೆ ಕರೆ ನೀಡಿದ ಹಿನ್ನೆಲೆಯಲ್ಲಿ ಸಾಕಷ್ಟು ನೆರವು ಬಂದಿವೆ. ಮುಂದಿನ ದಿನಗಳಲ್ಲಿ ಗ್ರಾಪಂ ಸಹಯೋಗ ಹಾಗೂ ಪ್ರಮುಖ ಮುಖಂಡರ ಸಹಕಾರದಿಂದ ‘ಶಿಕ್ಷಣಕ್ಕಾಗಿ ನಾವು ನೀವು’ ಎಂಬ ಕಾರ್ಯಕ್ರಮ ಆಯೋಜನೆಗೆ ನಿರ್ಧರಿಸಲಾಗಿದೆ. ಗ್ರಾಮೀಣ ಮಟ್ಟದಲ್ಲಿಯೇ ನಗರ ಪ್ರದೇಶ ಹಾಗೂ ಖಾಸಗಿ ಶಾಲೆಗಿಂತ ಉತ್ತಮ ಶಿಕ್ಷಣ ನೀಡುವಂಥ ಪ್ರಯತ್ನ ನಡೆಸಲಾಗುವುದು ಎಂದರು.