‘ನಮ್ಮ ನೀರು ನಮ್ಮ ಹಕ್ಕು’ ಚುನಾವಣೆ ಘೋಷಣೆಗೆ ಸೀಮಿತ: ಜೆಡಿಎಸ್ ಯುವಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ

KannadaprabhaNewsNetwork |  
Published : Aug 10, 2024, 01:38 AM ISTUpdated : Aug 10, 2024, 12:27 PM IST
9ಕೆಎಂಎನ್ ಡಿ31 | Kannada Prabha

ಸಾರಾಂಶ

ಈ ಹಿಂದೆ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಅವರು ಮೇಕೆದಾಟು ವಿಷಯವಾಗಿ ತಮಿಳುನಾಡಿನ ಮುಖ್ಯಮಂತ್ರಿ ಸ್ಟ್ಯಾಲಿನ್ ಅವರ ಬಳಿ ಸೌಹಾರ್ದ ಚರ್ಚೆ ನಡೆಸಿ ನಾನು ಬರುತ್ತೇನೆ ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದರು. ಆದರೆ, ಡಿ.ಕೆ. ಶಿವಕುಮಾರ್ ಹಾಗೂ ರಾಜ್ಯ ಸರ್ಕಾರಕ್ಕೆ ರೈತರ ಬಗ್ಗೆ ಯಾವುದೇ ಕಾಳಜಿಯಿಲ್ಲ.

 ಶ್ರೀರಂಗಪಟ್ಟಣ : ಕಳೆದ ವಿಧಾನಸಭಾ ಚುನಾವಣೆ ವೇಳೆ ಕಾಂಗ್ರೆಸ್ ನಾಯಕರು ಘೋಷಣೆ ಮಾಡಿದ್ದ ನಮ್ಮ ನೀರು, ನಮ್ಮ ಹಕ್ಕು ಕೇವಲ ಚುನಾವಣೆ ಘೋಷಣೆಗೆ ಸೀಮಿತವಾಗಿದೆ ಎಂದು ಜೆಡಿಎಸ್ ಯುವಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದರು.

ಪಟ್ಟಣದಲ್ಲಿನ ಮೈಸೂರು ಚಲೋ ಪಾದಯಾತ್ರೆ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇಕೆದಾಟಿಗಾಗಿ ಪಾದಯಾತ್ರೆ ಮಾಡಿದ್ದ ಕಾಂಗ್ರೆಸ್ ನಾಯಕರು, ಇಂಡಿಯಾ ಕೂಟದ ಭಾಗವಾಗಿರುವ ಡಿಎಂಕೆ ನಾಯಕ, ತಮಿಳುನಾಡು ಮುಖ್ಯಮಂತ್ರಿ ಸ್ಟ್ಯಾಲಿನ್ ಅವರನ್ನು ಒಪ್ಪಿಸಿ ಮೇಕೆದಾಟು ಯೋಜನೆ ಆರಂಭಿಸಲು ಸಾಧ್ಯವಿಲ್ಲವೇ ಎಂದು ಪ್ರಶ್ನಿಸಿದರು.

ಈ ಹಿಂದೆ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಅವರು ಮೇಕೆದಾಟು ವಿಷಯವಾಗಿ ತಮಿಳುನಾಡಿನ ಮುಖ್ಯಮಂತ್ರಿ ಸ್ಟ್ಯಾಲಿನ್ ಅವರ ಬಳಿ ಸೌಹಾರ್ದ ಚರ್ಚೆ ನಡೆಸಿ ನಾನು ಬರುತ್ತೇನೆ ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದರು. ಆದರೆ, ಡಿ.ಕೆ. ಶಿವಕುಮಾರ್ ಹಾಗೂ ರಾಜ್ಯ ಸರ್ಕಾರಕ್ಕೆ ರೈತರ ಬಗ್ಗೆ ಯಾವುದೇ ಕಾಳಜಿಯಿಲ್ಲ ಎಂದು ದೂರಿದರು.

ಅಣೆಕಟ್ಟೆಯಿಂದ ಲಕ್ಷಾಂತರ ಕ್ಯುಸೆಕ್ ನೀರು ತಮಿಳುನಾಡಿಗೆ ಹರಿದಿದೆ. ಮೆಟ್ಟೂರು ಡ್ಯಾಂ ತುಂಬಿ ಹೆಚ್ಚಿನ ನೀರು ಯಾವುದಕ್ಕೂ ಪ್ರಯೋಜನವಾಗದೇ ಸಮುದ್ರ ಸೇರುತ್ತಿದೆ. ಈಗಲಾದರೂ ಮುಖ್ಯಮಂತ್ರಿ ಸ್ಟ್ಯಾಲಿನ್ ಅವರನ್ನು ಒಪ್ಪಿಸಿದ್ದಲ್ಲಿ ಸ್ವತಃ ಕುಮಾರಣ್ಣ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಂದ ಯೋಜನೆ ಅನುಷ್ಠಾನಗೊಳಿಸಲಿದ್ದಾರೆ ಎಂದು ಹೇಳಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜೆಡಿಯು ನಾಯಕ ನಿತೀಶ್‌ ರಾಜ್ಯಸಭೆಗೆ - ಸಿಎಂ ಸ್ಥಾನಕ್ಕೆ ರಾಜೀನಾಮೆ
ಈ ಸಾಲಲ್ಲಿ ಅಬಕಾರಿ ರಾಜಸ್ವ ಟಾರ್ಗೆಟ್‌ ಕಷ್ಟ? 11 ತಿಂಗಳಲ್ಲಿ ಮದ್ಯ ಮಾರಾಟ ಗಣನೀಯ ಕುಸಿತ