ಕನ್ನಡಪ್ರಭ ವಾರ್ತೆ ಸಿಂಧನೂರು
ಎಸ್ಐಓ ಕಾರ್ಯದರ್ಶಿ ಇಮ್ತಿಯಾಜ್ ಮಾತನಾಡಿ, ದೇಶದಲ್ಲಿ ನಿರುದ್ಯೋಗ ತಾಂಡವವಾಡುತ್ತಿದ್ದು, ದಿನದಿಂದ ದಿನಕ್ಕೆ ಉದ್ಯೋಗಾಕಾಂಕ್ಷಿಗಳ ಸಂಖ್ಯೆ ಹೆಚ್ಚುತ್ತಿದೆ. ವರ್ಷಕ್ಕೆ 2 ಕೋಟಿ ಉದ್ಯೋಗ ನೀಡುವುದಾಗಿ ಭರವಸೆ ಕೊಟ್ಟಿದ್ದ ಮೋದಿಯವರು ತಮ್ಮ 10 ವರ್ಷಗಳ ಆಡಳಿತಾವಧಿಯಲ್ಲಿ 2 ಕೋಟಿ ಉದ್ಯೋಗ ಸೃಷ್ಟಿಸಿಲ್ಲ. ಕೇಂದ್ರ ಸರ್ಕಾರವು ಅವೈವೈಜ್ಞಾನಿಕ, ವಿದ್ಯಾರ್ಥಿಗಳ ವಿರೋಧಿಯಾದ ಎನ್ಇಪಿ ಜಾರಿಗೆ ತರುವ ಮೂಲಕ ಈ ದೇಶದ ದುಡಿಯುವ ವರ್ಗದ ಮಕ್ಕಳನ್ನು ಶಿಕ್ಷಣದಿಂದ ವಂಚಿಸಲು ಹುನ್ನಾರ ನಡೆಸಿದೆ. ಪಠ್ಯವನ್ನು ಕೇಸರೀಕರಣ ಮಾಡಲು ಬಿಜೆಪಿ ವ್ಯವಸ್ಥಿತ ಸಂಚು ರೂಪಿಸುವ ಜೊತೆಗೆ ಮಕ್ಕಳಲ್ಲಿ ಕೋಮು ವಿಷಬೀಜ ಬಿತ್ತಲು ಯತ್ನಿಸುತ್ತಿದೆ ಎಂದು ಆರೋಪಿಸಿದರು.
ಬಿಜೆಪಿ ಸರ್ಕಾರದ ವಿದ್ಯಾರ್ಥಿ ವಿರೋಧಿ ನೀತಿ ಹಾಗೂ ಸಂವಿಧಾನ ವಿರೋಧಿ ನೀತಿ ಖಂಡಿಸಿ ದೇಶಪ್ರೇಮಿ ವಿದ್ಯಾರ್ಥಿ ಯುವಜನರ ಸಮಾವೇಶ ಹಮ್ಮಿಕೊಂಡಿದ್ದು, ಬಹುಭಾಷಾ ನಟ ಪ್ರಕಾಶ್ ರೈ ಮುಖ್ಯಭಾಷಣಕಾರರಾಗಿ ಆಗಮಿಸಲಿದ್ದಾರೆ. ಆದ್ದರಿಂದ ವಿದ್ಯಾರ್ಥಿ-ಯುವಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.ಡಿವಿಪಿ ಜಿಲ್ಲಾ ಸಂಚಾಲಕ ಮೌನೇಶ ಜಾಲವಾಡಿಗಿ, ಎಸ್ಐಓ ಅಧ್ಯಕ್ಷ ನೂರ್ ಅಹ್ಮದ್, ಕೆವಿಎಸ್‌ನ ಸಂಚಾಲಕರಾದ ಶರಣಕುಮಾರ್, ಚಾಂದ್ಪಾಷಾ, ಗೌತಮ್ ಇದ್ದರು.