ಕನ್ನಡಪ್ರಭ ವಾರ್ತೆ ಚಳ್ಳಕೆರೆ
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿ ವರ್ಷವೂ ಜಿಲ್ಲಾ ಮಟ್ಟದಲ್ಲಿ ಉತ್ತಮ ಶಿಕ್ಷಕ ಪ್ರಶಸ್ತಿ ನೀಡುತ್ತಿದ್ದು, ಈ ಬಾರಯೂ ತಾಲೂಕಿನ 5 ಶಿಕ್ಷಕರು ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಶಿಕ್ಷಕರಿಗೆ ಜಿಲ್ಲಾ ಮಟ್ಟದಲ್ಲಿ ಪ್ರಶಸ್ತಿ ನೀಡುವ ಮೂಲಕ ಶಿಕ್ಷಕರ ಪ್ರಾಮಾಣಿಕ ಕಾರ್ಯವನ್ನು ಇಲಾಖೆ ಪ್ರಶಂಸಿಸಿದೆ. ಇದು ಎಲ್ಲಾ ಶಿಕ್ಷಕರಿಗೂ ಅವರ ವೃತ್ತಿ ಬದುಕಿನಲ್ಲಿ ಇನ್ನೂ ಹೆಚ್ಚು ಸಾಧನೆಗೆ ಪ್ರೇರಣೆಯಾಗಲಿದೆ ಎಂದು ತಿಳಿಸಿದರು.ತಾಲೂಕಿನ ಮೈಲನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ಎನ್.ರಾಧಮಣಿ, ಗೋಪನಹಳ್ಳಿ(ಯಾದವನಗರ)ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಎಂ.ಮಲ್ಲಿಕಾರ್ಜುನ್, ಸಿದ್ದಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ಡಿ.ಪುಪ್ಪಲತಾ, ಆದರ್ಶ ವಿದ್ಯಾಲಯದ ಸಹ ಶಿಕ್ಷಕ ಜಿ.ಎಂ.ವೀರಭದ್ರಪ್ಪ, ಹರವಿಗೊಂಡನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಎಚ್.ಸುರೇಶ್ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನಾರಾಗಿದ್ದಾರೆ.
ಶಿಕ್ಷಕರ ದಿನಾಚರಣೆ ಹಿನ್ನೆಲೆಯಲ್ಲಿ ಸೆ.5ರ ಗುರುವಾರ ಬೆಳಗ್ಗೆ 8.30ಕ್ಕೆ ನಗರದ ಪ್ರವಾಸಿಮಂದಿರದಲ್ಲಿ ಬೃಹತ್ ಮೆರವಣಿಗೆಗೆ ನಗರಸಭೆ ಅಧ್ಯಕ್ಷೆ ಜೈತುಂಬಿ ಚಾಲನೆ ನೀಡಲಿದ್ದು, ಎಲ್ಲಾ ಶಿಕ್ಷಕರು ಮೆರವಣಿಗೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಮನವಿ ಮಾಡಿದ್ದಾರೆ.