ರಾಜಕಾರಣ ಹಣ ಮಾಡುವ ದಂಧೆಯಾಗಿದೆ

KannadaprabhaNewsNetwork |  
Published : Mar 10, 2025, 12:17 AM IST
೯ಕೆಎಲ್‌ಆರ್-೧೨ಕೋಲಾರ ತಾಲ್ಲೂಕಿನ ಕಲ್ಲಂಡೂರು ಡಾ.ನಾಗರಾಜ್‌ರ ನಿವಾಸದಲ್ಲಿ ಭಾನುವಾರ ಡಾ.ನಾಗರಾಜ್ ಗೆಳೆಯರ ಬಳಗ ಜೆಡಿಯು ರಾಜ್ಯ ಅಧ್ಯಕ್ಷ ಹಾಗೂ ಮಾಜಿ ಶಾಸಕ ಮಹಿಮಾ ಜೆ.ಪಟೇಲ್ ಉದ್ಘಾಟಿಸಿದರು. | Kannada Prabha

ಸಾರಾಂಶ

ದೇಶದಲ್ಲಿ ೧೯೪೭ರಲ್ಲಿ ಸ್ವಾತಂತ್ರ್ಯ ಸಿಕ್ಕಿದ್ದರೂ ಒಂದು ರೀತಿಯ ಬಂಧನ ಅನುಭವಿಸುತ್ತಿದ್ದೇವೆ, ಕೃಷಿಗೆ ವಿಪರೀತ ರಾಸಾಯನಿಕ ಗೊಬ್ಬರ ಬಳಸುತ್ತಿದ್ದೇವೆ, ಪರಿಸರ ಹಾಳಾಗುತ್ತಿದೆ, ಗ್ಲೋಬಲ್ ವಾರ್ಮಿಂಗ್ (ಜಾಗತಿಕ ತಾಪಮಾನ) ಹೋಗಿ ಗ್ಲೋಬಲ್ ಬರ್ನಿಂಗ್ (ಜಾಗತಿಕ ಸುಡುವಿಕೆ) ಆಗಿದೆ, ಈ ಸಂಬಂಧ ಈಗಲೇ ಎಚ್ಚೆತ್ತುಕೊಳ್ಳದಿದ್ದರೆ ಮುಂದೆ ಅಪಾಯ ಕಾದಿದೆ.

ಕನ್ನಡಪ್ರಭ ವಾರ್ತೆ ಕೋಲಾರಇವತ್ತಿನ ಚುನಾವಣೆ ಎಂಬುದು ಈಗ ದಂಧೆಯಾಗಿ ಮಾರ್ಪಟ್ಟಿದೆ, ದುಡ್ಡಿಲ್ಲದೆ ರಾಜಕಾರಣ ಇಲ್ಲ ಎಂಬಂತ ಪರಿಸ್ಥಿತಿಗೆ ತಂದಿಟ್ಟಿದ್ದಾರೆ, ದುಡ್ಡು ಹಾಕಿ ದುಡ್ಡು ತೆಗೆಯುವ ಕೆಲಸವಾಗಿದೆ, ಜಾತಿ, ಧರ್ಮದ ಹೆಸರಿನಲ್ಲಿ ರಾಜಕಾರಣ ಮಾಡಲಾಗುತ್ತಿದೆ ಎಂದು ಜೆಡಿಯು ರಾಜ್ಯ ಅಧ್ಯಕ್ಷ ಹಾಗೂ ಮಾಜಿ ಶಾಸಕ ಮಹಿಮಾ ಜೆ.ಪಟೇಲ್ ವಿಷಾದ ವ್ಯಕ್ತಪಡಿಸಿದರು.ತಾಲೂಕಿನ ಕಲ್ಲಂಡೂರು ಡಾ.ನಾಗರಾಜ್‌ರ ನಿವಾಸದಲ್ಲಿ ಭಾನುವಾರ ಡಾ.ನಾಗರಾಜ್ ಗೆಳೆಯರ ಬಳಗ ಉದ್ಘಾಟಿಸಿ ಮಾತನಾಡಿ, ರಾಜಕಾರಣ ಎಂದರೆ ಬರೀ ಚುನಾವಣೆ ಅಲ್ಲ, ಉತ್ತಮ ಆಡಳಿತ ಬರಬೇಕು, ಹಣ, ಹೆಂಡ ಇಲ್ಲದೆ ಚುನಾವಣೆ ಗೆಲ್ಲಬಹುದು ಎಂಬ ಸಾಧ್ಯತೆ ಇದೆ ಎಂಬುದನ್ನು ತೋರಿಸಬೇಕು ಎಂದರು.ರಾಸಾಯನಿಕ ಗೊಬ್ಬರ ಬಳಬೇಡಿ

ದೇಶದಲ್ಲಿ ೧೯೪೭ರಲ್ಲಿ ಸ್ವಾತಂತ್ರ್ಯ ಸಿಕ್ಕಿದ್ದರೂ ಒಂದು ರೀತಿಯ ಬಂಧನ ಅನುಭವಿಸುತ್ತಿದ್ದೇವೆ, ಕೃಷಿಗೆ ವಿಪರೀತ ರಾಸಾಯನಿಕ ಗೊಬ್ಬರ ಬಳಸುತ್ತಿದ್ದೇವೆ, ಪರಿಸರ ಹಾಳಾಗುತ್ತಿದೆ, ಗ್ಲೋಬಲ್ ವಾರ್ಮಿಂಗ್ (ಜಾಗತಿಕ ತಾಪಮಾನ) ಹೋಗಿ ಗ್ಲೋಬಲ್ ಬರ್ನಿಂಗ್ (ಜಾಗತಿಕ ಸುಡುವಿಕೆ) ಆಗಿದೆ, ಈ ಸಂಬಂಧ ಈಗಲೇ ಎಚ್ಚೆತ್ತುಕೊಳ್ಳದಿದ್ದರೆ ಮುಂದೆ ಅಪಾಯ ಕಾದಿದೆ ಎಂದು ಎಚ್ಚರಿಸಿದರು. ಮಾ.೨೪ಕ್ಕೆ ಕೊಟ್ಟೂರಿನಲ್ಲಿ ಪಾದಯಾತ್ರೆ ಮಾಡುತ್ತಿದ್ದು, ಸ್ವಾಮೀಜಿಗಳು ಭಾಗವಹಿಸುತ್ತಿದ್ದಾರೆ, ರಾಜ್ಯದಲ್ಲಿ ಸೂಕ್ಷ್ಮತೆ ಉಳಿಸಿಕೊಂಡ ಶಾಸಕರು ಇದ್ದು, ಅವರ ಸಮ್ಮುಖದಲ್ಲಿ ಏ.೩, ೪ರಂದು ಸಾಣೇಹಳ್ಳಿಯಲ್ಲಿ ಪಕ್ಷಾತೀತವಾಗಿ ಚುನಾವಣಾ ಸುಧಾರಣೆ ಬಗ್ಗೆ ಚರ್ಚೆ ಹಮ್ಮಿಕೊಳ್ಳಲಾಗಿದೆ. ಮುಂಬರಲಿರುವ ೨೦೨೫ ರ ಆಗ್ನೇಯ ಪದವೀಧರ ಕ್ಷೇತ್ರದ ವಿಧಾನ ಪರಿಷತ್‌ಗೆ ನಡೆಯಲಿರುವ ಚುನಾವಣೆಯಲ್ಲಿ ಜೆಡಿಯು ಪಕ್ಷದಿಂದ ಅಭ್ಯರ್ಥಿಯಾಗಿ ಡಾ.ನಾಗರಾಜ್‌ರನ್ನು ಮಾಡಲಾಗಿದೆ ಅವರನ್ನು ಗೆಲ್ಲಿಸಬೇಕು ಇದಕ್ಕೆ ಸಮಾನ ಮನಸ್ಕ ಗೆಳೆಯರು ಎಲ್ಲರೂ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ಪಾರದರ್ಶಕ ರಾಜಕಾರಣ

ಕಲ್ಲಂಡೂರು ಡಾ.ಕೆ.ನಾಗರಾಜ್ ಮಾತನಾಡಿ, ಜೆಡಿಯು ಪಕ್ಷದಿಂದ ವಿಧಾನ ಪರಿಷತ್ ಹೋಗಲು ಪದವೀಧರ ಕ್ಷೇತ್ರದಿಂದ ಟಿಕೆಟ್ ನೀಡಿ ಅವಕಾಶ ಮಾಡಿಕೊಟ್ಡಿದ್ದಾರೆ, ಹಣ ಇಲ್ಲದ ಚುನಾವಣೆ ಗೆಲ್ಲಬಹುದು ಎಂಬುದನ್ನು ತೋರಿಸಿಕೊಡುತ್ತೇವೆ. ಹಣ ಖರ್ಚು ಮಾಡದೆ ಎದುರಿಸಿದಾಗ ಯಾವುದೇ ಭಯ ಇರುವುದಿಲ್ಲ, ಪಾರದರ್ಶಕ ರಾಜಕಾರಣಕ್ಕೆ ಒತ್ತು ನೀಡಲಾಗುವುದು ಎಂದರು.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮೀನಾರಾಯಣ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ತಬಲ ನಾರಾಯಣಪ್ಪ, ದಕ್ಷಿಣ ಭಾರತ ಕುಂಬಾರ ಕುಲಾಲ್ ಫೆಡರೇಶನ್ ಅಧ್ಯಕ್ಷ ಶಿವಕುಮಾರ್, ಚೌಡಶೆಟ್ಟಿ, ಕಸ್ತೂರಿ ಜನಪರ ವೇದಿಕೆ ರಾಜ್ಯ ಅಧ್ಯಕ್ಷ ನಿಲೇಶ್ ಗೌಡ, ಕಸಾಪ ಮಾಜಿ ಅಧ್ಯಕ್ಷ ನಾಗನಂದ್ ಕೆಂಪರಾಜು, ಮಾಜಿ ಗೌರವ ಕಾರ್ಯದರ್ಶಿ ರತ್ನಪ್ಪ, ಸಿನಿಮಾ ನಟ ವಿಧ್ಯಾಬಾರಣ್, ಹೈಕೋರ್ಟ್ ವಕೀಲ ನಟರಾಜ್, ಲಕ್ಷ್ಮೀ ಗ್ರೂಪ್ ಆಫ್ ಹಾಸ್ಪಿಟಲ್ ಮುಖ್ಯಸ್ಥ ಡಾ.ಸಾಂಭಶಿವ, ಬಿಜೆಪಿ ಮುಖಂಡ ಪ್ರಕಾಶ್, ಮುಖಂಡರಾದ ಲಕನ್, ಗಂಗಾರಾಜು, ರಂಗನಾಥ್ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕುರ್ಚಿ ಕಿತ್ತಾಟ ರಾಜ್ಯದವರೇ ಬಗೆಹರಿಸಿಕೊಳ್ಳಬೇಕು: ಖರ್ಗೆ
ಸದೃಢ ಆರೋಗ್ಯಕ್ಕೆ ಹಲ್ಲು ಸದೃಢವಾಗಿರಲಿ