ಬಾಳೆಲೆ ವ್ಯಾಪ್ತಿಯಲ್ಲಿ ಗುಣಮಟ್ಟದ ವಿದ್ಯುತ್ ಪೂರೈಕೆ ಮಾಡುವ ಮಹತ್ವಕಾoಕ್ಷೆಯಿಂದ 27.23 ಕೋಟಿ ರು. ವೆಚ್ಚದಲ್ಲಿ 66/11 ಕೆವಿಎ ಸಾಮರ್ಥ್ಯದ ವಿದ್ಯುತ್ ವಿತರಣಾ ಕೇಂದ್ರದ ಸ್ಥಾಪನೆಗೆ ಭೂಮಿ ಪೂಜೆಯನ್ನು ಶಾಸಕ ಹಾಗೂ ಮುಖ್ಯ ಮಂತ್ರಿಗಳ ಕಾನೂನು ಸಲಹೆಗಾರ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ನೆರವೇರಿಸಿದರು.
ಕನ್ನಡಪ್ರಭ ವಾರ್ತೆ ಶ್ರೀಮಂಗಲಬಾಳೆಲೆ ವ್ಯಾಪ್ತಿಯಲ್ಲಿ ಗುಣಮಟ್ಟದ ವಿದ್ಯುತ್ ಪೂರೈಕೆ ಮಾಡುವ ಮಹತ್ವಕಾoಕ್ಷೆಯಿಂದ 27.23 ಕೋಟಿ ರು. ವೆಚ್ಚದಲ್ಲಿ 66/11 ಕೆವಿಎ ಸಾಮರ್ಥ್ಯದ ವಿದ್ಯುತ್ ವಿತರಣಾ ಕೇಂದ್ರದ ಸ್ಥಾಪನೆಗೆ ಭೂಮಿ ಪೂಜೆಯನ್ನು ಶಾಸಕ ಹಾಗೂ ಮುಖ್ಯ ಮಂತ್ರಿಗಳ ಕಾನೂನು ಸಲಹೆಗಾರ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ನೆರವೇರಿಸಿದರು.ಭೂಮಿ ಪೂಜೆ ನೆರವೇರಿಸಿ ಮಾತನಾಡಿ, ಕ್ಷೇತ್ರಾದ್ಯಂತ ಗುಣಮಟ್ಟದ ವಿದ್ಯುತ್ ಪೂರೈಕೆ ಕೈಗೊಳ್ಳಲು ಸುಮಾರು 200 ಕೋಟಿ ರು. ಗೂ ಅಧಿಕ ಅನುದಾನವನ್ನು ಕರ್ನಾಟಕ ರಾಜ್ಯ ಕಾಂಗ್ರೆಸ್ ಸರಕಾರ ನೀಡಿದ್ದು, ಹಂತ ಹಂತವಾಗಿ ಕ್ಷೇತ್ರಾದ್ಯಂತ ಈ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ. ಬಾಳೆಲೆಯಲ್ಲಿ ಸ್ಥಾಪನೆಗೊಳ್ಳಲಿರುವ ಈ ವಿದ್ಯುತ್ ವಿತರಣಾ ಕೇಂದ್ರದಿಂದ ಈ ಭಾಗದ ರೈತರಿಗೆ ಹಾಗೂ ಸಾರ್ವಜನಿಕರಿಗೆ ಗುಣಮಟ್ಟದ ಹಾಗೂ ನಿರಂತರ ವಿದ್ಯುತ್ ಪೂರೈಕೆ ಆಗಲು ಸಹಕಾರಿಯಾಗಲಿದೆ ಎಂದು ವಿವರಿಸಿದರು.
ರಾಜ್ಯ ಕ್ರೀಡಾಪ್ರಾಧಿಕಾರದ ಉಪಾಧ್ಯಕ್ಷ ಚೆಪ್ಪುಡಿರ ಅರುಣ್ ಮಾಚಯ್ಯ, ಚೀಫ್ ಎಲೆಟ್ರಿಕಲ್ ಆಫೀಸರ್ ತೀತಿರ ರೋಷನ್ ಅಪ್ಪಚ್ಚು, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೀದೇರಿರ ನವೀನ್, ತಾಲೂಕು ಬಗರ್ ಹುಕುಂ ಅಧ್ಯಕ್ಷ ಅಣ್ಣಳಮಾಡ ಲಾಲಾ ಅಪ್ಪಣ್ಣ, ತಾಲೂಕು ಪ್ರಚಾರ ಸಮಿತಿಯ ಅಧ್ಯಕ್ಷ ಆಪಟ್ಟಿರ ಟಾಟು ಮೊಣ್ಣಪ್ಪ, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರು ಬಾನಂಡ ಪ್ರತ್ಯು, ವಲಯ ಅಧ್ಯಕ್ಷ ಕೋದಂಡ ಸೋಮಣ್ಣ, ಪಂಚಾಯಿತಿ ಸದಸ್ಯ ವಿನು ಉತ್ತಪ್ಪ, ನಿಟ್ಟೂರು ವಲಯ ಅಧ್ಯಕ್ಷ ಪವನ್, ರಂಜಿ, ಅಚ್ಚುತ್ತ್, ಅಜ್ಜಿಕುಟ್ಟಿರ ಗಿರೀಶ್, ಹರೀಶ್ ಪೂವಯ್ಯ, ಸಿದ್ದು ನಾಚಪ್ಪ, ಮನು, ಇಲಾಖೆಯ ಅಧಿಕಾರಿಗಳು ಚೋಂದಮ್ಮ ಹಾಗೂ ಪ್ರಮುಖರು ಇದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.