ವಿವಿಧ ಜಯಂತಿ ಆಚರಣೆಗೆ ಸಿದ್ಧತೆ

KannadaprabhaNewsNetwork |  
Published : Jan 07, 2024, 01:30 AM IST
ವಿವಿಧ ಜಯಂತಿಗಳ ಹಿನ್ನೆಲೆಯಲ್ಲಿ ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು | Kannada Prabha

ಸಾರಾಂಶ

ಶ್ರೀ ಶಿವಯೋಗಿ ಸಿದ್ಧರಾಮೇಶ್ವರ ಜಯಂತಿ, ಮಾಹಾಯೋಗಿ ವೇಮನ ಜಯಂತಿ ಹಾಗೂ ನಿಜಶರಣ ಅಂಬಿಗರ ಚೌಡಯ್ಯನವರ ಜಯಂತಿ ಆಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜ.16 ರಂದು ನಡೆಯಲಿರುವ ಶ್ರೀ ಶಿವಯೋಗಿ ಸಿದ್ಧರಾಮೇಶ್ವರ ಜಯಂತಿ ಕಾರ್ಯಕ್ರಮವನ್ನು ಕುಮಾರ್ ಗಂಧರ್ವ ರಂಗಮಂದಿರದಲ್ಲಿ ಆಚರಿಸಲಾಗುವುದು.

ಕನ್ನಡಪ್ರಭ ವಾರ್ತೆ ಬೆಳಗಾವಿ

ಸರ್ಕಾರದ ಮಾರ್ಗಸೂಚಿಯಂತೆ ಶ್ರೀ ಶಿವಯೋಗಿ ಸಿದ್ಧರಾಮೇಶ್ವರ ಜಯಂತಿ ಜ.16, ಮಹಾಯೋಗಿ ವೇಮನ ಜಯಂತಿ ಜ.19 ರಂದು ಹಾಗೂ ನಿಜಶರಣ ಅಂಬಿಗರ ಚೌಡಯ್ಯನವರ ಜಯಂತಿ ಜ.28 ರಂದು ಸಂಭ್ರಮದಿಂದ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶನಿವಾರ ನಡೆದ ಶ್ರೀ ಶಿವಯೋಗಿ ಸಿದ್ಧರಾಮೇಶ್ವರ ಜಯಂತಿ, ಮಾಹಾಯೋಗಿ ವೇಮನ ಜಯಂತಿ ಹಾಗೂ ನಿಜಶರಣ ಅಂಬಿಗರ ಚೌಡಯ್ಯನವರ ಜಯಂತಿ ಆಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜ.16 ರಂದು ನಡೆಯಲಿರುವ ಶ್ರೀ ಶಿವಯೋಗಿ ಸಿದ್ಧರಾಮೇಶ್ವರ ಜಯಂತಿ ಕಾರ್ಯಕ್ರಮವನ್ನು ಕುಮಾರ್ ಗಂಧರ್ವ ರಂಗಮಂದಿರದಲ್ಲಿ ಆಚರಿಸಲಾಗುವುದು. ಮಹಾಯೋಗಿ ವೇಮನ ಜಯಂತಿ ಮೆರವಣಿಗೆ ಕಾರ್ಯಕ್ರಮ ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಆವರಣದಿಂದ ಕುಮಾರ ಗಂಧರ್ವ ಕಲಾ ಮಂದಿರ ನಡೆಯಲಿದೆ. ಈ ವೇಳೆ ವಿವಿಧ ಕಲಾ ತಂಡಗಳು ಮೆರವಣಗೆಯಲ್ಲಿ ಪಾಲ್ಗೊಳ್ಳಲಿವೆ. ನಂತರ ಕುಮಾರ್ ಗಂಧರ್ವ ರಂಗಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.

ಅಂಬಿಗರ ಚೌಡಯ್ಯನವರ ಜಯಂತಿ: ಸಮಾಜದ ಮುಖಂಡರ ಮನವಿಯಂತೆ ನಿಜಶರಣ ಅಂಬಿಗರ ಚೌಡಯ್ಯನವರ ಜಯಂತಿ ಜ.28 ರಂದು ನಗರದ ಸರ್ದಾರ ಮೈದಾನದಲ್ಲಿ ಆಯೋಜನೆ ಮಾಡಲಾಗುವುದು. ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಸರ್ದಾರ್ ಮೈದಾನದವರೆಗೂ ಮೆರವಣಿಗೆ ಕಾರ್ಯಕ್ರಮ ಏರ್ಪಡಿಸಲಾಗುವುದು ಎಂದು ತಿಳಿಸಿದರು.

ಅಂಬಿಗರ ಚೌಡಯ್ಯ ಜಯಂತಿಯಲ್ಲಿ ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸಲಿದ್ದು, ವೇದಿಕೆ ಸಿದ್ಧತೆ, ಸೂಕ್ತ ಪೊಲೀಸ್ ಬಂದೋಬಸ್ತ್, ಟ್ರಾಫಿಕ್ ಸುವ್ಯವಸ್ಥೆ ಹಾಗೂ ವಾಹನಗಳ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಬೇಕು ಮತ್ತು ಮೆರವಣಿಗೆ ಕಾರ್ಯಕ್ರಮದಲ್ಲಿ ಹೆಚ್ಚಿನ ಕಲಾತಂಡಗಳು ಭಾಗವಹಿಸಬೇಕು ಎಂದು ಸಮಾಜದ ಜಿಲ್ಲಾ ಘಟಕದ ಅಧ್ಯಕ್ಷ ದಿಲೀಪ್ ಕುರಂದವಾಡೆ ಮನವಿ ಮಾಡಿದರು. ಕುಡಿಯುವ ನೀರು, ಆಸನ ವ್ಯವಸ್ಥೆ ಸೇರಿದಂತೆ ಜನರಿಗೆ ಯಾವುದೇ ತೊಂದರೆ ಆಗಬಾರದು. ಸಂಬಂಧಿಸಿದ ಇಲಾಖೆಗಳು ಅಗತ್ಯವಿರುವ ಸಿದ್ಧತೆ ಪೂರ್ಣಗೊಳಿಸಿ ಸಹಕಾರ ನೀಡಬೇಕು. ಜಿಲ್ಲೆಯ ಎಲ್ಲ ಶಾಲಾ, ಕಾಲೇಜು ಹಾಗೂ ಗ್ರಾಪಂಗಳಲ್ಲಿ ಅಂಬಿಗರ ಚೌಡಯ್ಯನವರ ಜಯಂತಿ ಆಚರಣೆಗೆ ಸೂಚನೆ ನೀಡಬೇಕು ಎಂದು ಮನವಿ ಮಾಡಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪ ನಿರ್ದೇಶಕಿ ವಿದ್ಯಾವತಿ ಭಜಂತ್ರಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಆರ್‌.ಬಿ.ಬಸರಗಿ, ಮಹಾನಗರ ಪಾಲಿಕೆ ಉಪ ಆಯುಕ್ತ ಉದಯಕುಮಾರ್ ತಳವಾರ, ವಿವಿಧ ಸಮಾಜದ ಮುಖಂಡ ರಾಮಚಂದ್ರ ಸುಣಗಾರ, ಅಶೋಕ ಕೋಳಿ, ಅಪ್ಪಯ್ಯ ರಾಮರಾವ್, ಗೀತಾ ಕೋಳಿ, ಅಪ್ಪಾಸಾಹೇಬ ಪೂಜಾರಿ, ಮಂಜುನಾಥ ಪಾಟೀಲ, ಆರ್. ಬಿ ಬಂಡಿವಡ್ಡರ, ಎಸ್.ಬಿ ರೆಡ್ಡಿ, ಶಂಕರ ಹಾದಿಮನಿ, ರಾಜೇಂದ್ರ ಪಾಟೀಲ, ಟಿ.ಕೆ ಪಾಟೀಲ, ಎಸ್.ಎ ಅರಕೇರಿ, ಎಚ್ ವಿ ಪಾಟೀಲ ಸೇರಿದಂತೆ ಮತ್ತಿತರು ಸಭೆಯಲ್ಲಿ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಕ್ಕಳನ್ನು ಅಧ್ಯಯನ ಪ್ರವಾಸಕ್ಕೆ ಟಿಪ್ಪರಲ್ಲಿ ಕರೆದೊಯ್ದ ಹೆಡ್‌ಮಾಸ್ಟರ್‌!
ಬೆಂಗಳೂರು ರೇಸ್‌ಕೋರ್ಸ್‌ ಕುಣಿಗಲ್‌ಗೆ ಶಿಫ್ಟ್‌ : ಸಂಪುಟ