ಮಾಲೆಕಲ್ ಲಕ್ಷ್ಮೀ ವೆಂಕಟರಮಣ ಸ್ವಾಮಿಯ ಜಾತ್ರಾ ಮಹೋತ್ಸವಕ್ಕೆ ಸಿದ್ಧತೆ

KannadaprabhaNewsNetwork |  
Published : Jun 25, 2025, 11:47 PM IST
ಸುದ್ದಿಗಾರರೊಂದಿಗೆ ಶಾಸಕ ಶಿವಲಿಂಗೇಗೌಡ ಮಾತನಾಡಿದರು.; | Kannada Prabha

ಸಾರಾಂಶ

ಜು. 7ರಂದು ಸೋಮವಾರ ಮಧ್ಯಾಹ್ನ ರಥೋತ್ಸವ ಜರುಗಲಿವೆ ಎಂದು ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ನಾಗರಾಜ್‌ ಹಾಗೂ ಶಾಸಕ ಕೆ. ಎಂ ಶಿವಲಿಂಗೇಗೌಡ ಹೇಳಿದರು. ಆಶಾಢ ಮಾಸದಲ್ಲಿ ಸ್ವಾಮಿಯವರ ಜಾತ್ರಾ ಮಹೋತ್ಸವು ನಡೆಯುತ್ತಾ ಬಂದಿದ್ದು, ಪ್ರತಿದಿನ ಶ್ರೀದೇವಿ ಭೂದೇವಿ ಸಮೇತನಾದ ವೆಂಕಟರಮಣ ಸ್ವಾಮಿಗೆ ವಿಶೇಷ ಪೂಜೆಗಳು ಹಾಗೂ ನಾನಾ ಉತ್ಸವಗಳು ನಡೆಯುವುದು ಇಲ್ಲಿನ ವಿಶೇಷ. ಶುಚಿತ್ವ, ದೀಪಾಲಂಕಾರ, ಆರೋಗ್ಯ ರಕ್ಷಣೆಗೆ ಒತ್ತು ನೀಡಬೇಕು.ಭಕ್ತರ ಅನುಕೂಲಕ್ಕಾಗಿ ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಯಾವುದೇ ತೊಂದರೆಯಾಗದಂತೆ .ಮುನ್ನೆಚ್ಚರಿಕೆ ವಹಿಸಲಾಗಿದೆ ಎಂದು ಹೇಳಿದರು.

ಕನ್ನಡಪ್ರಭ ವಾರ್ತೆ ಅರಸೀಕೆರೆ

"ರಾಜ್ಯದ ತಿರುಪತಿ " ಎಂದೇ ಪ್ರಸಿದ್ಧಿಯಾಗಿರುವ ತಾಲೂಕಿನ ಸುಕ್ಷೇತ್ರ ಮಾಲೆಕಲ್ ಅಮರಗಿರಿ ಲಕ್ಷ್ಮೀ ವೆಂಕಟರಮಣ ಸ್ವಾಮಿಯ ಜಾತ್ರಾ ಮಹೋತ್ಸವವು ಆಷಾಢ ಮಾಸದಲ್ಲಿ ಜರುಗಲಿದೆ.

ನಾಡಿನ ಮೂಲೆ ಮೂಲೆಗಳಿಂದ ಭಕ್ತರು ಹರಿದು ಬರುವ ನಿರೀಕ್ಷೆಯಿದೆ. ಜೂ.30ರಿಂದ ಅಂಕುರಾರ್ಪಣೆಯಿಂದ ಜು.16ರವರೆಗೆ ನಡೆಯಲಿರುವ ಗರುಡೋತ್ಸವದವರೆಗೂ ಹಲವು ಬಗೆಯ ಧಾರ್ಮಿಕ ಕೈಂಕರ್ಯ ನೆಡೆಯಲಿದ್ದು, ಜು. 7ರಂದು ಸೋಮವಾರ ಮಧ್ಯಾಹ್ನ ರಥೋತ್ಸವ ಜರುಗಲಿವೆ ಎಂದು ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ನಾಗರಾಜ್‌ ಹಾಗೂ ಶಾಸಕ ಕೆ. ಎಂ ಶಿವಲಿಂಗೇಗೌಡ ಹೇಳಿದರು. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಶಾಢ ಮಾಸದಲ್ಲಿ ಸ್ವಾಮಿಯವರ ಜಾತ್ರಾ ಮಹೋತ್ಸವು ನಡೆಯುತ್ತಾ ಬಂದಿದ್ದು, ಪ್ರತಿದಿನ ಶ್ರೀದೇವಿ ಭೂದೇವಿ ಸಮೇತನಾದ ವೆಂಕಟರಮಣ ಸ್ವಾಮಿಗೆ ವಿಶೇಷ ಪೂಜೆಗಳು ಹಾಗೂ ನಾನಾ ಉತ್ಸವಗಳು ನಡೆಯುವುದು ಇಲ್ಲಿನ ವಿಶೇಷ. ಶುಚಿತ್ವ, ದೀಪಾಲಂಕಾರ, ಆರೋಗ್ಯ ರಕ್ಷಣೆಗೆ ಒತ್ತು ನೀಡಬೇಕು.ಭಕ್ತರ ಅನುಕೂಲಕ್ಕಾಗಿ ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಯಾವುದೇ ತೊಂದರೆಯಾಗದಂತೆ .ಮುನ್ನೆಚ್ಚರಿಕೆ ವಹಿಸಲಾಗಿದೆ ಎಂದು ಹೇಳಿದರುಜೂನ್ 30ರಿಂದ ಜುಲೈ 16 ರವರೆಗೆ ದೇವಾಲಯದ ಸಂಪ್ರದಾಯದಂತೆ ಜರುಗಲಿದ್ದು ಈಗಾಗಲೇ ಮುಜರಾಯಿ ಇಲಾಖೆ, ದೇವಾಲಯದ ವ್ಯವಸ್ಥಾಪನಾ ಸಮಿತಿ ಹಾಗೂ ದೇವಾಲಯದ ಅಭಿವೃದ್ಧಿ ಸಮಿತಿ ಸಕಲ ಸಿದ್ಧತೆಗಳನ್ನ ಮಾಡಿಕೊಳ್ಳುತ್ತಿದೆ ಎಂದರು.

ಜು. 7ರಂದು ನಡೆಯುವ ಸ್ವಾಮಿಯವರ ಮಹಾ ರಥೋತ್ಸವದಲ್ಲಿ ಪಾಲ್ಗೊಳ್ಳುವುದರಿಂದ ಯಾವುದೇ ರೀತಿಯ ಅಹಿತಕರ ಘಟನೆಗಳು ಸಂಭವಿಸದಂತೆ ಪೊಲೀಸ್ ಇಲಾಖೆಯ ಸಹಕಾರದೊಂದಿಗೆ ದೇವಸ್ಥಾನದ ಅಭಿವೃದ್ಧಿ ಹಾಗೂ ವ್ಯವಸ್ಥಾಪನ ಸಮಿತಿ ಮತ್ತು ಭಕ್ತ ವೃಂದ ಈಗಾಗಲೇ ತಮ್ಮ ಸೇವಾ ಕಾರ್ಯದಲ್ಲಿ ತೊಡಗಿದೆ ಎಂದು ಮಾಹಿತಿ ನೀಡಿದರು.

ರಥೋತ್ಸವದ ಸಂದರ್ಭದಲ್ಲಿ ಲೋಕಸಭಾ ಸದಸ್ಯರು ಸೇರಿದಂತೆ ಜಿಲ್ಲೆಯ ಹಾಲಿ ಮತ್ತು ಮಾಜಿ ಶಾಸಕರು, ನಾನಾ ರಾಜಕೀಯ ಪಕ್ಷಗಳ ಮುಖಂಡರು, ವಿವಿಧ ಸಂಘಸಂಸ್ಥೆಯ ಪದಾಧಿಕಾರಿಗಳನ್ನು ಪಾಲ್ಗೊಳ್ಳುವಂತೆ ಆಹ್ವಾನ ನೀಡಲಾಗಿದೆ ಎಂದರು.

ರಾಜ್ಯ ಸಾರಿಗೆ ಸಂಸ್ಥೆ ವತಿಯಿಂದ ಮಹಿಳೆಯರಿಗೆ ಉಚಿತ ಬಸ್ ವ್ಯವಸ್ಥೆ ಇರುವುದರಿಂದ ಜಾತ್ರಾ ಮಹೋತ್ಸವದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತ ಸಮೂಹ ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದರು.

ಈ ಸಂದರ್ಭದಲ್ಲಿ ದೇವಾಲಯದ ಪ್ರಧಾನ ಅರ್ಚಕರಾದ ವರದರಾಜ್, ರಾಮಪ್ರಸಾದ್, ತಹಸೀಲ್ದಾರ್‌ ಸಂತೋಷ್ ಕುಮಾರ್ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಗಿರೀಶ್ ಮತ್ತಿತರರು ಉಪಸ್ಥಿತರಿದ್ದರು.

PREV

Recommended Stories

ದಲಿತರಿಗೆ ದಿಲ್ಲಿಯಲ್ಲಿ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರ : ಜಾರಕಿಹೊಳಿ
ತೀವ್ರ ಚಳಿ, ಜ್ವರ : ದೇವೇಗೌಡ ಆಸ್ಪತ್ರೆಗೆ, ಐಸಿಯುನಲ್ಲಿ ಚಿಕಿತ್ಸೆ