ಕೆಪಿಎಸ್ ಮ್ಯಾಗ್ನೆಟ್ ಯೋಜನೆ ವಿರುದ್ಧ ಜನರ ಆಕ್ರೋಶ

KannadaprabhaNewsNetwork |  
Published : May 10, 2026, 01:30 AM IST
9ಎಚ್ಎಸ್ಎನ್16 :  | Kannada Prabha

ಸಾರಾಂಶ

ಕೆಪಿಎಸ್ ಮ್ಯಾಗ್ನೆಟ್ ಶಾಲೆಗೆ ಸಂಯೋಜಿಸಲು ಮುಂದಾಗಿರುವ ಗ್ರಾಮಗಳ ಪೋಷಕರು, ಸದಸ್ಯರು ಹಾಗೂ ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿಯ ಕಾರ್ಯಕರ್ತರು “ಯಾವುದೇ ಕಾರಣಕ್ಕೂ ನಮ್ಮ ಮಕ್ಕಳನ್ನು ದೂರದ ಕೆಪಿಎಸ್‌ ಶಾಲೆಗೆ ಕಳುಹಿಸುವುದಿಲ್ಲ” ಎಂದು ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಿ ಸಹಿ ಹಾಕಿದ್ದಾರೆ ಎಂದು ತಿಳಿಸಿದರು. ಈ ಮೂಲಕ ಹಾಸನ ಜಿಲ್ಲೆಯ ಜನತೆ ರಾಜ್ಯದ “ನಮ್ಮೂರ ಶಾಲೆ ಉಳಿಸಿ” ಚಳವಳಿಗೆ ಮಾದರಿಯಾಗಿದ್ದಾರೆ. ರಾಜ್ಯದ ಪ್ರತಿಯೊಂದು ಹಳ್ಳಿಯಲ್ಲೂ ಸಾರ್ವಜನಿಕ ಶಿಕ್ಷಣ ಉಳಿಸುವ ಹೋರಾಟ ಇನ್ನಷ್ಟು ಬಲಗೊಳ್ಳಬೇಕು ಎಂದು ಕರೆ ನೀಡಿದರು.

ಕನ್ನಡಪ್ರಭ ವಾರ್ತೆ ಹಾಸನರಾಜ್ಯ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ ಕೆಪಿಎಸ್ ಮ್ಯಾಗ್ನೆಟ್ ಯೋಜನೆ ವಿರುದ್ಧ ರಾಜ್ಯಾದ್ಯಂತ ತೀವ್ರ ವಿರೋಧ ವ್ಯಕ್ತವಾಗುತ್ತಿರುವ ನಡುವೆಯೇ, ಹಾಸನ ಜಿಲ್ಲೆಯ ವಿವಿಧ ಗ್ರಾಮಗಳ ಪೋಷಕರು ತಮ್ಮ ಮಕ್ಕಳನ್ನು ಕೆಪಿಎಸ್ ಮ್ಯಾಗ್ನೆಟ್ ಶಾಲೆಗೆ ಕಳುಹಿಸುವುದಿಲ್ಲ ಎಂದು ಶಿಕ್ಷಣಾಧಿಕಾರಿಗಳಿಗೆ ಬರೆದಿರುವ ಪತ್ರಗಳನ್ನು ಸಾರ್ವಜನಿಕವಾಗಿ ಎಐಡಿಎಸ್‌ಒ ಬಿಡುಗಡೆ ಮಾಡುವ ಮೂಲಕ ಪ್ರತಿಭಟನೆ ತೀವ್ರಗೊಳಿಸಿದರು.ನಗರದ ಹೇಮಾವತಿ ಪ್ರತಿಮೆ ಹಿಂಭಾಗದ ಮಹಾರಾಜ ಪಾರ್ಕ್‌ನಲ್ಲಿ ಎಐಡಿಎಸ್‌ಒ ಜಿಲ್ಲಾ ಸಮಿತಿ ನೇತೃತ್ವದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಜಿಲ್ಲಾಧ್ಯಕ್ಷೆ ಚೈತ್ರ, ಕಳೆದ ಏಳು ತಿಂಗಳಿಂದ ಕೆಪಿಎಸ್ ಮ್ಯಾಗ್ನೆಟ್ ಯೋಜನೆ ವಿರುದ್ಧ ರಾಜ್ಯದ ಮೂಲೆ ಮೂಲೆಗಳಿಂದ ಸಾರ್ವಜನಿಕ ವಿರೋಧ ವ್ಯಕ್ತವಾಗುತ್ತಿದೆ. ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿಗಳನ್ನು ರಚಿಸಿಕೊಂಡು ಹಳ್ಳಿ, ಹೋಬಳಿ, ತಾಲೂಕು, ಜಿಲ್ಲೆ ಹಾಗೂ ರಾಜ್ಯಮಟ್ಟದಲ್ಲಿ ಹೋರಾಟಗಳು ಯಶಸ್ವಿಯಾಗಿ ನಡೆಯುತ್ತಿವೆ ಎಂದರು. ರಾಜ್ಯದ ಜನರ ತೀವ್ರ ವಿರೋಧದ ನಡುವೆಯೂ, ಕೆಲವು ಗ್ಯಾರಂಟಿಗಳ ಹೆಸರಿನಲ್ಲಿ ಯೋಜನೆಗೆ ಹೊಸ ರೂಪ ನೀಡಿ ಬಡವರ ಮಕ್ಕಳ ಭವಿಷ್ಯ ಉಜ್ವಲಗೊಳಿಸುತ್ತೇವೆ ಎಂಬ ಹೆಸರಿನಲ್ಲಿ ಸರ್ಕಾರ ಹಠಾತ್‌ವಾಗಿ ಯೋಜನೆ ಜಾರಿಗೊಳಿಸಲು ಮುಂದಾಗಿದೆ. ಆದರೆ ಹಾಸನ ಜಿಲ್ಲೆಯ ಅರಸೀಕೆರೆ ಹಾಗೂ ಗೊರೂರು ಭಾಗದ ಪೋಷಕರು ಸರ್ಕಾರದ ಈ ಧೋರಣೆಗೆ ತೀವ್ರ ವಿರೋಧ ವ್ಯಕ್ತಪಡಿಸಿ ಲಿಖಿತ ರೂಪದಲ್ಲಿ ತಮ್ಮ ಅಭಿಪ್ರಾಯವನ್ನು ದಾಖಲಿಸಿದ್ದಾರೆ ಎಂದು ಆರೋಪಿಸಿದರು. ಕೆಪಿಎಸ್ ಮ್ಯಾಗ್ನೆಟ್ ಶಾಲೆಗೆ ಸಂಯೋಜಿಸಲು ಮುಂದಾಗಿರುವ ಗ್ರಾಮಗಳ ಪೋಷಕರು, ಸದಸ್ಯರು ಹಾಗೂ ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿಯ ಕಾರ್ಯಕರ್ತರು “ಯಾವುದೇ ಕಾರಣಕ್ಕೂ ನಮ್ಮ ಮಕ್ಕಳನ್ನು ದೂರದ ಕೆಪಿಎಸ್‌ ಶಾಲೆಗೆ ಕಳುಹಿಸುವುದಿಲ್ಲ” ಎಂದು ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಿ ಸಹಿ ಹಾಕಿದ್ದಾರೆ ಎಂದು ತಿಳಿಸಿದರು. ಈ ಮೂಲಕ ಹಾಸನ ಜಿಲ್ಲೆಯ ಜನತೆ ರಾಜ್ಯದ “ನಮ್ಮೂರ ಶಾಲೆ ಉಳಿಸಿ” ಚಳವಳಿಗೆ ಮಾದರಿಯಾಗಿದ್ದಾರೆ. ರಾಜ್ಯದ ಪ್ರತಿಯೊಂದು ಹಳ್ಳಿಯಲ್ಲೂ ಸಾರ್ವಜನಿಕ ಶಿಕ್ಷಣ ಉಳಿಸುವ ಹೋರಾಟ ಇನ್ನಷ್ಟು ಬಲಗೊಳ್ಳಬೇಕು ಎಂದು ಕರೆ ನೀಡಿದರು.ಅರಸೀಕೆರೆ ತಾಲೂಕಿನ ಡಿ.ಎಂ. ಕುರ್ಕೆ ಕೆಪಿಎಸ್ ಮ್ಯಾಗ್ನೆಟ್ ಶಾಲೆಗೆ ಸಂಯೋಜಿಸಲು ಉದ್ದೇಶಿಸಿರುವ ಎಚ್. ಎಲ್. ಬಿ ತಾಂಡ್ಯ, ಮಾಡಾಳು, ಹರಳಕಟ್ಟ, ಯಾಚಗೊಂಡನಹಳ್ಳಿ, ಎಂ.ಜಿ ಹಟ್ಟಿ ಹಾಗೂ ಎಚ್. ವಿ ಹಟ್ಟಿ ಸೇರಿದಂತೆ ವಿವಿಧ ಗ್ರಾಮಗಳ ಪೋಷಕರು ತಮ್ಮ ಮಕ್ಕಳನ್ನು ಪ್ರತಿದಿನ ದೂರದ ಶಾಲೆಗೆ ಕಳುಹಿಸಲು ಸಾಧ್ಯವಿಲ್ಲ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ನಾವು ಕೂಲಿ ಕೆಲಸ ಮಾಡುವವರು. ಪ್ರತಿದಿನ ಮಕ್ಕಳನ್ನು ದೂರದ ಹಳ್ಳಿಗಳಿಗೆ ಕಳುಹಿಸುವುದು ಕಷ್ಟ. ಆದ್ದರಿಂದ ನಮ್ಮೂರಿನ ಶಾಲೆ ನಮ್ಮೂರಲ್ಲೇ ಉಳಿಯಬೇಕು ಎಂದು ಪೋಷಕರು ಮನವಿಯಲ್ಲಿ ಸ್ಪಷ್ಟಪಡಿಸಿದ್ದಾರೆ ಎಂದು ಹೇಳಿದರು.ಪ್ರತಿಭಟನೆಯಲ್ಲಿ ಎಐಡಿಎಸ್‌ಒ ಜಿಲ್ಲಾ ಕಾರ್ಯದರ್ಶಿ ಸುಷ್ಮಾ, ಶಾಂತಾ ಶೆಟ್ಟಿ, ಪುಟ್ಟರಾಜಪ್ಪ, ಎಚ್. ಆರ್‌. ರವಿಶಂಕರ್‌, ಧರ್ಮರಾಜು, ತಿಮ್ಮೇಗೌಡ, ತಮ್ಮಯ್ಯ, ವೆಂಕಟೇಶ್ ಬಿ.ಎನ್. ಹಾಗೂ ಎನ್. ಪುಟ್ಟಸ್ವಾಮಿಗೌಡ ಸೇರಿದಂತೆ ಇತರರು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಭ್ರಷ್ಟಾಚಾರದ ವಿರುದ್ಧ ವಾಟಾಳ್ ಪಕ್ಷದಿಂದ ರಾಜ್ಯಾದ್ಯಂತ ಹೋರಾಟ: ವಾಟಾಳ್ ನಾಗರಾಜ್
ಮಳೆಗಾಗಿ ಪ್ರಾರ್ಥಿಸಿ ಮಳೆರಾಯನ ಹಬ್ಬ ಆಚರಿಸಿದ ಅರಕೆರೆ ಗ್ರಾಮಸ್ಥರು