೨೦೦೦ ಕೋಟಿ ವೆಚ್ಚದಲ್ಲಿ ರೈಲ್ವೇ ಆಧುನೀಕರಣ

KannadaprabhaNewsNetwork |  
Published : Dec 22, 2025, 01:15 AM IST
೨೧ಟೇಕಲ್-೧ಟೇಕಲ್ ರೈಲ್ವೆ ನಿಲ್ದಾಣದ ಬಳಿ ರಾಜ್ಯ ಹಾಗೂ ಕೇಂದ್ರ ಸರ್ಕಾರದ ೨೩ ಕೋಟಿ ರೂಗಳ ಅನುದಾನದಡಿ ನಿರ್ಮಿಸಲಾಗಿರುವ ಮೇಲ್ ಸೇತುವೆಯನ್ನು ರೈಲ್ವೆ ಹಾಗೂ ಜಲ ಶಕ್ತಿ ಸಚಿವ ವಿ.ಸೋಮಣ್ಣ ಹಾಗೂ ಶಾಸಕ ಕೆ.ವೈ.ನಂಜೇಗೌಡ ಲೋಕಾರ್ಪಣೆ ಗೊಳಿಸಿದರು. | Kannada Prabha

ಸಾರಾಂಶ

ರಾಜ್ಯಕ್ಕೆ ಕೋಲಾರ, ಬೆಂಗಳೂರು, ರಾಮನಗರ ಹಾಗೂ ತುಮಕೂರು ಹೃದಯಭಾಗ ಇದ್ದಹಾಗೆ. ಈ ಭಾಗದ ಅಭಿವೃದ್ದಿ ಮಾಡುವುದು ನಮ್ಮ ಚಿಂತೆನೆಯಾಗಿದೆ. ಕೋಲಾರದಿಂದ ಬೆಂಗಳೂರಿಗೆ ನೇರ ರೈಲ್ವೇ ಮಾಡಲು ಸ್ಥಳ ಪರಿಶೀಲಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಆದರೆ ರಾಜ್ಯದಲ್ಲಿ ರೈಲ್ವೆ ಅಭಿವೃದ್ಧಿ ಕಾಮಗಾರಿ ಯೋಜನೆಗಳಿಗೆ ರಾಜ್ಯ ಸರ್ಕಾರದಿಂದ ಅನುದಾನ ಪಡೆಯಲು ಕಷ್ಟವಾಗಿದೆ.

ಕನ್ನಡಪ್ರಭ ವಾರ್ತೆ ಟೇಕಲ್ರಾಜ್ಯದ ಎಲ್ಲ ಕಡೆ ಸುಮಾರು ೨೦೦೦ ಕೋಟಿ ರುಪಾಯಿ ವೆಚ್ಚದಲ್ಲಿ ರೈಲ್ವೇ ವಿದ್ಯುದ್ದೀಕರಣ ಮತ್ತು ಆಧುನೀಕರಣ ಮಾಡಲಾಗುತ್ತಿದೆ ಎಂದು ಕೇಂದ್ರ ಜಲಶಕ್ತಿ ಮತ್ತು ರೈಲ್ವೇ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದರು.ಟೇಕಲ್ ರೈಲ್ವೆ ನಿಲ್ದಾಣದಲ್ಲಿ ಲೆವೆಲ್ ಕ್ರಾಸಿಂಗ್ ಬದಲಿಗೆ ನಿರ್ಮಿಸಲಾದ ರೈಲ್ವೆ ಮೇಲ್ಸೇತುವೆಯ ಲೋಕಾರ್ಪಣೆಗೊಳಿಸಿ ಮಾತನಾಡಿ, ರಾಜ್ಯಕ್ಕೆ ಕೋಲಾರ, ಬೆಂಗಳೂರು, ರಾಮನಗರ ಹಾಗೂ ತುಮಕೂರು ಹೃದಯಭಾಗ ಇದ್ದಹಾಗೆ. ಈ ಭಾಗದ ಅಭಿವೃದ್ದಿ ಮಾಡುವುದು ನಮ್ಮ ಚಿಂತೆನೆಯಾಗಿದೆ. ಕೋಲಾರದಿಂದ ಬೆಂಗಳೂರಿಗೆ ನೇರ ರೈಲ್ವೇ ಮಾಡಲು ಸ್ಥಳ ಪರಿಶೀಲಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

ಕೇಂದ್ರ- ರಾಜ್ಯ ಸಹಭಾಗಿತ್ವ

ಈ ಮೇಲ್ಸೇತುವೆ ರೈಲ್ವೆ ಸಚಿವಾಲಯ ಮತ್ತು ರಾಜ್ಯ ಸರ್ಕಾರಗಳ ೫೦:೫೦ ವೆಚ್ಚ ಹಂಚಿಕೆಯ ಆಧಾರದಲ್ಲಿ ೨೩.೫ ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಈ ರಸ್ತೆ ಮೇಲ್ಸೇತುವೆ ರೈಲ್ವೆ ಸ್ಕ್ಯಾನ್ ೩೬ ಮೀ. ಬೋ ಸ್ಪಿಂಗ್ ಗರ್ಡರ್ ನಿಂದ ಕೂಡಿದೆ. ಮಾಲೂರು ಕಡೆಗೆ ೧೪೦.೨೮ ಮೀ. ಉದ್ದದ ಅಪ್ರೋಚ್ ರೋಡ್ ಇದ್ದು ಬಂಗಾರಪೇಟೆಯ ಕಡೆಗೆ ೧೫೪.೭ ಮೀ. ಉದ್ದದ ಅಪ್ರೋಚ್ ಇದೆ ಎಂದರು.

ರಾಜ್ಯದಲ್ಲಿ ರೈಲ್ವೆ ಅಭಿವೃದ್ಧಿ ಕಾಮಗಾರಿ ಯೋಜನೆಗಳಿಗೆ ರಾಜ್ಯ ಸರ್ಕಾರದಿಂದ ಅನುದಾನ ಪಡೆಯಲು ಕಷ್ಟಕರವಾಗಿದೆ ರಾಜ್ಯ ಸರ್ಕಾರದಿಂದ ಯಾವುದೇ ಅನುದಾನ ಪಡೆಯದೆ ಭಾರತ ಸರ್ಕಾರದ ಪೂರ್ಣ ಅನುದಾನದಲ್ಲಿ ರೈಲ್ವೆ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದರು.

ಕೋಚ್ ಫ್ಯಾಕ್ಟರಿಗೆ ಜಾಗ ನೀಡಲಿ

ಈ ಹಿಂದೆ ಕೆ.ಎಚ್.ಮುನಿಯಪ್ಪ ರೈಲ್ವೆ ಖಾತೆ ಸಚಿವರಾಗಿದ್ದ ವೇಳೆ ಕೋಲಾರ ಜಿಲ್ಲೆಯಲ್ಲಿ ರೈಲ್ವೆ ಕೋಚ್ ಫ್ಯಾಕ್ಟರಿ ಪ್ರಾರಂಭಿಸಲು ಉದ್ದೇಶಿಸಿದ್ದರು, ಆದರೆ ಅದು ಕೈಗೂಡಿರಲಿಲ್ಲ, ಇಲ್ಲಿನ ಜಿಲ್ಲಾಡಳಿತ ಜಮೀನನ್ನು ಒದಗಿಸಿದರೆ ರೈಲ್ವೆ ಇಲಾಖೆಗೆ ಸಂಬಂಧಿಸಿದಂತೆ ಕಾರ್ಖಾನೆ ತೆರೆದು ಸ್ಥಳೀಯರಿಗೆ ಹೆಚ್ಚಿನ ಉದ್ಯೋಗಾವಕಾಶ ಕಲ್ಪಿಸಲಾಗುವುದು ಎಂದರು

ಸಾರ್ವಜನಿಕರಿಗೆ ಅನುಕೂಲ:

ಶಾಸಕ ಕೆ.ವೈ.ನಂಜೇಗೌಡ ಮಾತನಾಡಿ, ಹಲವು ವರ್ಷಗಳ ಕನಸು ನನಸಾಗಿದೆ, ಟೇಕಲ್ ರೈಲ್ವೆ ಹಳಿಮೂಲಕ ಪ್ರತಿನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ ಇದರಿಂದ ವಾಹನ ಸಂಚಾರಕ್ಕೆ ಭಾರಿ ತೊಂದರೆಯಾಗಿತ್ತು, ರಾಜ್ಯ-ಕೇಂದ್ರ ಸರ್ಕಾರದ ಶೇ.೫೦ರ ಅನುದಾನದಡಿ ೨೩ ಕೋಟಿ ರೂಗಳ ವೆಚ್ಚದಲ್ಲಿ ಗುಣಮಟ್ಟದ ರೈಲ್ವೆ ಮೇಲ್ಸೇತುವೆ ನಿರ್ಮಿಸಿರುವುದು ಸಾರ್ವಜನಿಕರಿಗೆ ಅನುಕೂಲವಾಗಲಿದೆ ಎಂದರು. ಸಂಸದ ಎಂ.ಮಲ್ಲೇಶ್ ಬಾಬು, ಶಾಸಕಿ ರೂಪಕಲಾ ಶಶಿಧರ್, ಬಿಜೆಪಿ ಜಿಲ್ಲಾಧ್ಯಕ್ಷ ಓಂಶಕ್ತಿ ಚಲಪತಿ, ಎಂಎಲ್ಸಿಗಳಾದ ಇಂಚರ ಗೋವಿಂದರಾಜು, ಅನಿಲ್ ಕುಮಾರ್, ಜಿಲ್ಲಾಧಿಕಾರಿ ರವಿಕುಮಾರ್, ಜಿಪಂ ಸಿಇಒ ಪ್ರವೀಣ್ ಬಾಗೇವಾಡಿ, ಎಸ್ಪಿ ನಿಖಿಲ್.ಬಿ, ಮಾಜಿ ಶಾಸಕ ವೆಂಕಟಮುನಿಯಪ್ಪ, ಗ್ರಾಪಂ ಅಧ್ಯಕ್ಷ ಮುರುಗೇಶ್, ಉಪಾಧ್ಯಕ್ಷೆ ಮಮತಾ ಶಶಿಧರ್, ತಾಲೂಕು ಜೆಡಿಎಸ್ ಅಧ್ಯಕ್ಷ ಬಿ.ಕೆ.ನಾರಾಯಣಸ್ವಾಮಿ ಮತ್ತಿತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕುರ್ಚಿ ಕಿತ್ತಾಟ ರಾಜ್ಯದವರೇ ಬಗೆಹರಿಸಿಕೊಳ್ಳಬೇಕು: ಖರ್ಗೆ
ಸದೃಢ ಆರೋಗ್ಯಕ್ಕೆ ಹಲ್ಲು ಸದೃಢವಾಗಿರಲಿ