ಜಾನಪದ ಕಲೆ ಉಳಿಸಲು ಯುವ ಪೀಳಿಗೆಗೆ ಅರಿವು ಮೂಡಿಸಿ

KannadaprabhaNewsNetwork | Published : Mar 28, 2025 12:30 AM

ಸಾರಾಂಶ

ಜಾನಪದ ಕಲೆ ಉಳಿಸುವ ನಿಟ್ಟಿನಲ್ಲಿ ಇಂದಿನ ಯುವ ಪೀಳಿಗೆಗೆ ಅರಿವು ಮೂಡಿಸುವ ಕೆಲಸವಾಗಬೇಕು ಎಂದು ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಹಾಗೂ ವೈಡಿಡಿ ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಹೆಬ್ಬಾಳು ಹಾಲಪ್ಪ ಹೇಳಿದರು. ಜೀವನದಲ್ಲಿ ಸಾಧನೆ ಮಾಡಿದ ಮಹನೀಯರು ಪ್ರೇರಣೆಯಾಗಬೇಕು, ಕಂಸಾಳೆ ಪದ, ಗೀಗಿಪದ, ಕೋಲಾಟದ ಪದ, ರಾಗಿ ಬೀಸೋ ಪದ, ಸುಗ್ಗಿ ಹಾಡುಗಳು, ಹೀಗೆ ಇನ್ನೂ ಅನೇಕ ವಿವಿಧ ಬಗೆಯ ಜಾನಪದ ಗೀತೆಗಳು ಆಯಾ ಪ್ರದೇಶದ ಜನರ ದೈನಂದಿನ ಚಟುವಟಿಕೆಗಳನ್ನು, ಕೌಟುಂಬಿಕ ಜೀವನವನ್ನು ತೆರೆದಿಡುತ್ತವೆ ಎಂದರು.

ಕನ್ನಡಪ್ರಭ ವಾರ್ತೆ ಬೇಲೂರು

ಜಾನಪದ ಕಲೆ ಉಳಿಸುವ ನಿಟ್ಟಿನಲ್ಲಿ ಇಂದಿನ ಯುವ ಪೀಳಿಗೆಗೆ ಅರಿವು ಮೂಡಿಸುವ ಕೆಲಸವಾಗಬೇಕು ಎಂದು ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಹಾಗೂ ವೈಡಿಡಿ ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಹೆಬ್ಬಾಳು ಹಾಲಪ್ಪ ಹೇಳಿದರು.

ಪಟ್ಟಣದ ವೈಡಿಡಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಕರ್ನಾಟಕ ಸರ್ಕಾರ, ಕಾಲೇಜು ಶಿಕ್ಷಣ ಇಲಾಖೆ, ಐ.ಕ್ಯೂ.ಎ.ಸಿ. ಹಾಗೂ ಸಾಂಸ್ಕೃತಿಕ ವೇದಿಕೆ ಇವರ ಸಂಯುಕ್ತಾಶ್ರಯದಲ್ಲಿ ನಮ್ಮ ಸಂಸ್ಕೃತಿ ನಮ್ಮ ಹೆಮ್ಮೆ, ಜಾನಪದ ಉತ್ಸವ ಪ್ರತಿಭಾ ಶೋಧ ಕಾರ್ಯಕ್ರಮ ಉದ್ಘಾಟನೆ ನಡೆಸಿ ಮಾತನಾಡಿ, ಮನುಷ್ಯನ ಅರಿವನ್ನು ವಿಸ್ತರಿಸಲು ಈ ಸಾಹಿತ್ಯ ಜಾನಪದ ಸಾಹಿತ್ಯ ಜೀವನದ ಮೌಲ್ಯಗಳನ್ನು ಕಲಿಸುತ್ತದೆ. ವಿದ್ಯಾರ್ಥಿಗಳು ಜಾನಪದ ಸಾಹಿತ್ಯದ ಬಗ್ಗೆ ತಿಳಿದುಕೊಳ್ಳಬೇಕು. ಜಾನಪದ ಗೀತೆ, ಗಾದೆ, ಒಗುಟುಗಳನ್ನು ಸಂಗ್ರಹಿಸುವ ಕಾರ್ಯವಾಗಬೇಕು. ಜೀವನದಲ್ಲಿ ಸಾಧನೆ ಮಾಡಿದ ಮಹನೀಯರು ಪ್ರೇರಣೆಯಾಗಬೇಕು, ಕಂಸಾಳೆ ಪದ, ಗೀಗಿಪದ, ಕೋಲಾಟದ ಪದ, ರಾಗಿ ಬೀಸೋ ಪದ, ಸುಗ್ಗಿ ಹಾಡುಗಳು, ಹೀಗೆ ಇನ್ನೂ ಅನೇಕ ವಿವಿಧ ಬಗೆಯ ಜಾನಪದ ಗೀತೆಗಳು ಆಯಾ ಪ್ರದೇಶದ ಜನರ ದೈನಂದಿನ ಚಟುವಟಿಕೆಗಳನ್ನು, ಕೌಟುಂಬಿಕ ಜೀವನವನ್ನು ತೆರೆದಿಡುತ್ತವೆ ಎಂದರು.

ಕಾಲೇಜು ಪ್ರಾಂಶುಪಾಲ ಡಾ.ಮಹೇಶ್ ಮಾತನಾಡಿ, ಆಧುನೀಕರಣದ ಜಂಜಾಟದ ಇಂದಿನ ಜೀವನದಲ್ಲಿ ಜನಪದ ಕಲೆಗಳು ನಶಿಸುತ್ತಿವೆ. ಜನಪದ ಶ್ರಮ ಸಂಸ್ಕೃತಿಯ ಪ್ರತೀಕವಾಗಿದೆ. ಆದರೆ, ಇದರಿಂದ ಗ್ರಾಮೀಣ ಭಾಗದಲ್ಲಿನ ಸಂಸ್ಕೃತಿಯೂ ಕೂಡ ಮರೆಯಾಗುತ್ತಿದೆ ಎಂದು ವಿಷಾದಿಸಿದರು.

ಕಾರ್ಯಕ್ರಮದಲ್ಲಿ ಅಧ್ಯಾಪಕರುಗಳಾದ ಡಾ. ನಾಗೇಂದ್ರಪ್ಪ, ಮರಿಯಾ ಪಿಂಟೋ, ಬಾಬು ಪ್ರಸಾದ್, ಮಧು, ಲೋಕೇಶ್, ಮೋಹನ ಕುಮಾರ್, ವಸಂತ್ ಕುಮಾರ್, ಪವಿತ್ರ, ದಿವ್ಯಶ್ರೀ, ವೀರಭದ್ರಪ್ಪ, ಪದ್ಮೇಗೌಡ, ಮಲ್ಲೇಶ್ ಗೌಡ, ಪುಟ್ಟಸ್ವಾಮಿ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

Share this article