ರವೀಶ್‌ ಬಸವಾಪುರ ಹುಟ್ಟುಹಬ್ಬ ಆಚರಣೆ

KannadaprabhaNewsNetwork |  
Published : Aug 03, 2024, 12:34 AM IST
ಬೇಲೂರು ಫೋಟೋ    ತಾಲೂಕಿನ ಹಾಲ್ತೊರೆ ಕೊಪ್ಪಲು ಗ್ರಾಮದ ಜಿಲ್ಲಾ ಯೂತ್ ಕಾಂಗ್ರೆಸ್ ಉಪಾಧ್ಯಕ್ಷ ರವೀಶ್ ಬಸವಾಪುರ ಅವರು  ನಿರಾಶ್ರಿತರಿಗೆ ದಿನಸಿ ಕಿಟ್ ಕೊಡುವ ಮೂಲಕ ಅರ್ಥ ಪೂರ್ಣವಾಗಿ ಹುಟ್ಟುಹಬ್ಬವನ್ನು ಆಚರಿಸಲಾಯಿತು. | Kannada Prabha

ಸಾರಾಂಶ

ಜಿಲ್ಲಾ ಯೂತ್ ಕಾಂಗ್ರೆಸ್ ಉಪಾಧ್ಯಕ್ಷ ರವೀಶ್ ಬಸವಾಪುರ ಅವರು ಮಳೆಯಿಂದ ಮನೆ ಕಳೆದುಕೊಂಡವರಿಗೆ ಫುಡ್ ಕಿಟ್ ವಿತರಣೆ ಮಾಡುವ ಮೂಲಕ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಜೊತೆಗೆ ಪರಿಸರದ ಹಿತದೃಷ್ಟಿಯಿಂದ ಗಿಡ ನೆಡುವ ಕಾರ್ಯಕ್ರಮಗಳನ್ನು ಆಯೋಜನೆ ಮಾಡಿ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಿಕೊಂಡರು.

ಕನ್ನಡಪ್ರಭ ವಾರ್ತೆ ಬೇಲೂರು

ಜಿಲ್ಲಾ ಯೂತ್ ಕಾಂಗ್ರೆಸ್ ಉಪಾಧ್ಯಕ್ಷ ರವೀಶ್ ಬಸವಾಪುರ ಅವರು ತಾಲೂಕಿನ ಹಾಲ್ತೊರೆ ಕೊಪ್ಪಲು ಗ್ರಾಮದಲ್ಲಿ ಮಳೆಯಿಂದ ಮನೆ ಕಳೆದುಕೊಂಡವರಿಗೆ ಫುಡ್ ಕಿಟ್ ವಿತರಣೆ ಮಾಡುವ ಮೂಲಕ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡರು.

ಕಾರ್ಯಕ್ರಮದಲ್ಲಿ ಕರ್ನಾಟಕ ಸಫಾಯಿ ಕರ್ಮಚಾರಿಗಳ ಆಯೋಗದ ಮಾಜಿ ಅಧ್ಯಕ್ಷರಾದ ಎಂ.ಆರ್. ವೆಂಕಟೇಶ್ ಮಾತನಾಡಿ, ಯುವ ಮುಖಂಡರು, ಸಹೋದರರು ಆಗಿರುವ ಬಸವಪುರ ರವೀಶ್ ಅವರು ಹಾಗೂ ಅವರ ಅಭಿಮಾನಿಗಳು, ಸ್ನೇಹಿತರು ಹುಟ್ಟು ಹಬ್ಬವನ್ನು ಪ್ರತಿವರ್ಷವೂ ವಿಶಿಷ್ಟ ಹಾಗೂ ವಿಭಿನ್ನ ರೀತಿಯಲ್ಲಿ ಆಚರಣೆ ಮಾಡಿಕೊಂಡು ಬರುವ ಮೂಲಕ ಇತರರಿಗೂ ಮಾದರಿಯಾಗಿದ್ದಾರೆ.

ಈ ಬಾರಿ ತಮ್ಮ ಹುಟ್ಟು ಹಬ್ಬದ ಪ್ರಯುಕ್ತ ಮಳೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ಕುಟುಂಬಗಳನ್ನು ಗುರುತಿಸಿ ದಿನಸಿ ಪದಾರ್ಥಗಳನ್ನು ನೀಡುವ ಮೂಲಕ ನೊಂದವರ ಪರವಾಗಿ ಇರುವುದಾಗಿ ಮತ್ತೊಮ್ಮೆ ಸಾಬೀತು ಮಾಡಿದ್ದಾರೆ. ಈ ರೀತಿಯಾಗಿ ತಮ್ಮ ಹುಟ್ಟು ಹಬ್ಬವನ್ನು ಆಚರಿಸುತ್ತಿರುವುದು ಶ್ಲಾಘನೀಯ ಎಂದರು.

ಬೇಲೂರು ಬ್ಲಾಕ್‌ ಕಾಂಗ್ರೆಸ್ ಅಧ್ಯಕ್ಷ ನಿಶಾಂತ್ ಮಾತನಾಡಿ, ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸಹಾಯ ಮಾಡುವ ಭಾವನೆ ಹೊಂದಿರುವುದು ಮುಖ್ಯ ಆ ಮನಸ್ಸು ರವೀಶ್ ಅದರಲ್ಲಿದ್ದು ಜನ ಪರವಾಗಿ ಕೆಲಸ ನಿರ್ವಹಿಸುವ ಮೂಲಕ ತಮ್ಮ ಹುಟ್ಟುಹಬ್ಬ ಆಚರಣೆ ಮಾಡಿಕೊಳ್ಳುತ್ತಿದ್ದಾರೆ ಎಂದರು.

ಬಿಜೆಪಿ ಮುಖಂಡ ಡಿಶಾಂತ್ ಮಾತನಾಡಿ, ರವೀಶ್ ಅವರು ಚಿಕ್ಕ ವಯಸ್ಸಿನಲ್ಲಿಯೇ ಅಪಾರ ಜನ ಪರ ಕಾಳಜಿ ಹೊಂದಿದ್ದು, ಮುಂದಿನ ದಿನಗಳಲ್ಲಿ ರವೀಶ್ ಅವರು ಜನತೆಯ ಧ್ವನಿಯಾಗಲಿದ್ದಾರೆ ಎಂದರು.

ಇದೇ ವೇಳೆ ಹುಟ್ಟುಹಬ್ಬ ಆಚರಿಸಿಕೊಂಡ ರವೀಶ್ ಬಸವಾಪುರ ಮಾತನಾಡಿ, ಪ್ರತಿ ವರ್ಷದಂತೆ ಈ ವರ್ಷವೂ ಕೂಡ ನನ್ನ ಸ್ನೇಹಿತರು, ಹಿತೈಷಿಗಳು, ಕಳೆದ ಐದು ವರ್ಷಗಳಿಂದ ಜನ ಪರ ಕಾಳಜಿ ಹೊಂದಿರುವ ಕಾರ್ಯಕ್ರಮಗಳನ್ನು ನನ್ನ ಹುಟ್ಟುಹಬ್ಬದ ದಿನದಂದು ಆಯೋಜಿಸುತ್ತಾ ಬಂದಿದ್ದಾರೆ. ನಿರಾಶ್ರಿತ ಕುಟುಂಬಗಳಿಗೆ ಫುಡ್ ಕಿಟ್ ವಿತರಣೆ ಮಾಡುವುದು ಹಾಗೂ ಪರಿಸರದ ಹಿತದೃಷ್ಟಿಯಿಂದ ಗಿಡ ನೆಡುವ ಕಾರ್ಯಕ್ರಮಗಳನ್ನು ಆಯೋಜನೆ ಮಾಡಿ ನನ್ನ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಿದ್ದಾರೆ. ಎಲ್ಲರಿಗೂ ಧನ್ಯವಾದ ಅರ್ಪಿಸುತ್ತೇನೆ ಎಂದರು.

ಈ ವೇಳೆ ಗೋಪಿ, ಅಶೋಕ್, ರವಿ, ಅಶೋಕ್ ದೇವಿಹಳ್ಳಿ , ಇಕ್ಬಾಲ್, ವೆಂಕಟೇಶ್ ಮಾದಿಹಳ್ಳಿ, ಅಮಿತ್, ಹಗರೆ ಸುನೀಲ್, ಕಾಂತರಾಜ್, ಉಪೇಂದ್ರ, ಸುನೀಲ್ ಕಲ್ಯಾಣಪುರ, ಮಹೇಶ್ ವಡ್ಡರಹಳ್ಳಿ, ಲೋಕೇಶ್ ರಂಗನಾಕೊಪ್ಪಲು, ಕಿರಣ್ ಅರಕೆರೆ, ಜೇನುಕಲ್, ಹಾಲ್ತೋರೆ ಗ್ರಾಮಸ್ಥರು ಇದ್ದರು.

PREV

Recommended Stories

ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ