ಅರಳೇರಿ ಗ್ರಾಪಂ ಅಭಿವೃದ್ಧಿಗೆ ₹2 ಕೋಟಿ ಬಿಡುಗಡೆ

KannadaprabhaNewsNetwork |  
Published : Feb 01, 2025, 12:04 AM IST
ಶಿರ್ಷಿಕೆ-31ಕೆ.ಎಂ.ಎಲ್‌.ಆರ್.3- ಮಾಲೂರು ತಾಲೂಕಿನ ಅರಳೇರಿ ಗ್ರಾಮ ಪಂಚಾಯಿತಿ ವತಿಯಿಂದ ನಿರ್ಮಿಸಿರುವ ನೂತನ ಗ್ರಾಮ ಪಂಚಾಯಿತಿ ಕಟ್ಟಡ ಉದ್ಘಾಟನೆ, ಸೆಹಗಲ್ ಫೌಂಡೇಶನ್ ವತಿಯಿಂದ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೈಗೊಂಡಿರುವ ೩೦ ಲಕ್ಷ ರೂಗಳ ವೆಚ್ಚದ ನವೀಕರಣಗೊಂಡ ಶಾಲಾ ಕಟ್ಟಡ ಉದ್ಘಾಟನೆ ಅರಳೇರಿ ಗ್ರಾಮದಿಂದ ಮೇಡಹಟ್ಟಿ ಗ್ರಾಮಕ್ಕೆ ಸಂಪರ್ಕಸಿರುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಕೆ.ವೈ.ನಂಜೇಗೌಡ ಚಾಲನೆ ನೀಡಿದರು. | Kannada Prabha

ಸಾರಾಂಶ

ಅರಳೇರಿ ಗ್ರಾಮದ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನ ಸರಸ್ವತಿ ಕಮಾನು ಹಾಗೂ ೩೦ ಲಕ್ಷ ರೂಗಳ ವೆಚ್ಚದಲ್ಲಿ ಶಾಲೆಯನ್ನು ನವೀಕರಣಗೊಳಿಸಿ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಪೂರಕ ವಾತಾವರಣ ನಿರ್ಮಾಣ ಮಾಡಿರುವ ಸೇಹಗಲ್ ಸಂಸ್ಥೆಯನ್ನು ತಾಲೂಕು ಆಡಳಿತದ ವತಿಯಿಂದ ಅಭಿನಂದಿಸಲಾಗುವುದು.

ಕನ್ನಡಪ್ರಭ ವಾರ್ತೆ ಮಾಲೂರು

ತಾಲೂಕಿನ ಅರಳೇರಿ ಮೇಡಹಟ್ಟಿ ಗ್ರಾಮಗಳಿಗೆ ಸಂಪರ್ಕಸಿರುವ ರಸ್ತೆ ಅಭಿವೃದ್ಧಿ ಕಾಮಗಾರಿ ಸೇರಿದಂತೆ ಗ್ರಾಪಂ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ೨.೨೭ ಕೋಟಿ ರು.ಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಶಾಸಕ ಕೆ.ವೈ.ನಂಜೇಗೌಡ ಹೇಳಿದರು.

ಅವರು ತಾಲೂಕಿನ ಅರಳೇರಿ ಗ್ರಾಮ ಪಂಚಾಯಿತಿ ವತಿಯಿಂದ ನಿರ್ಮಿಸಿರುವ ನೂತನ ಗ್ರಾಮ ಪಂಚಾಯಿತಿ ಕಟ್ಟಡ ಉದ್ಘಾಟನೆ, ಅರಳೇರಿ ಗ್ರಾಮದಿಂದ ಮೇಡಹಟ್ಟಿ ಗ್ರಾಮಕ್ಕೆ ಸಂಪರ್ಕಸಿರುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು.

28 ಗ್ರಾಪಂ ಕಟ್ಟಡ ಶಿಥಿಲ

ತಾಲೂಕಿನಲ್ಲಿ ಶಿಥಿಲಗೊಂಡಿದ್ದ ೨೮ ಗ್ರಾಪಂ ಕಚೇರಿ ಕಟ್ಟಡಗಳನ್ನು ತೆರವುಗೊಳಿಸಿ ಸರ್ಕಾರ ಹಾಗೂ ಎನ್‌ಆರ್‌ಇಜಿ ಯೋಜನೆಯ ಅನುದಾನವನ್ನು ಬಳಸಿಕೊಂಡು ನೂತನ ಕಟ್ಟಡಗಳನ್ನು ನಿರ್ಮಿಸಲು ನಿರ್ಧರಿಸಲಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಸರ್ಕಾರವು ಆಡಳಿತ ನಡೆಸುತ್ತಿದ್ದು, ನುಡಿದಂತೆ ನಡೆದ ಸರ್ಕಾರವಾಗಿದೆ. ೫ ಗ್ಯಾರಂಟಿಗಳನ್ನು ನೀಡುವುದರ ಮೂಲಕ ಜನಸಾಮಾನ್ಯರ ಜೀವನಕ್ಕೆ ಸಹಕಾರ ನೀಡುತ್ತಿದೆ.

ಸೇಹಗಲ್ ಸಂಸ್ಥೆಗೆ ಅಭಿನಂದನೆ

ಇಲ್ಲಿನ ಅರಳೇರಿ ಗ್ರಾಮದ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನ ಸರಸ್ವತಿ ಕಮಾನು ಹಾಗೂ ೩೦ ಲಕ್ಷ ರೂಗಳ ವೆಚ್ಚದಲ್ಲಿ ಶಾಲೆಯನ್ನು ನವೀಕರಣಗೊಳಿಸಿ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಪೂರಕ ವಾತಾವರಣ ನಿರ್ಮಾಣ ಮಾಡಿರುವ ಸೇಹಗಲ್ ಸಂಸ್ಥೆಯನ್ನು ತಾಲೂಕು ಆಡಳಿತದ ವತಿಯಿಂದ ಅಭಿನಂದಿಸಲಾಗುವುದು. ತಾಲೂಕಿನಲ್ಲಿ ಮತ್ತಷ್ಟು ಸರ್ಕಾರಿ ಶಾಲೆಗಳನ್ನು ಉನ್ನತೀಕರಿಸಲು ಸರ್ಕಾರದಿಂದ ಅನುದಾನ ಬಿಡುಗಡೆ ಮಾಡಿಸುವುದರ ಜೊತೆಗೆ ಸಿ ಆರ್ ಎಫ್ ಅನುದಾನವನ್ನು ಸಹ ಬಳಕೆ ಮಾಡಿಕೊಳ್ಳಲು ಯೋಚಿಸಲಾಗುತ್ತಿದೆ ಎಂದರು.

ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯ ಎಂ ಎನ್ ಅನಿಲ್ ಕುಮಾರ್, ತಹಶಿಲ್ದಾರ್ ರೂಪ ಎಂ ವಿ, ತಾ.ಪಂ ಇ.ಒ ವಿ ಕೃಷ್ಣಪ್ಪ, ಅರಳೇರಿ, ಗ್ರಾಮ ಅಧ್ಯಕ್ಷ ಲಕ್ಷ್ಮಮ್ಮ ರಾಜಪ್ಪ, ಉಪಾಧ್ಯಕ್ಷೆ ಮಮತಾ, ಜಿಲ್ಲಾ ಗ್ಯಾರೆಂಟಿ ಯೋಜನೆಗಳ ಸಮಿತಿಯ ಅಧ್ಯಕ್ಷ ಶಿವಕುಮಾರ್, ರಾಜ್ಯ ಕೃಷಿಕ ನಿರ್ದೇಶಕ ಹನುಮಂತಪ್ಪ, ಯೋಜನಾ ಪ್ರಾಧಿಕಾರ ಅಧ್ಯಕ್ಷ ಮಹಮ್ಮದ್ ನಹಿಮ್ ಉಲ್ಲಾ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ವಿ ಮುನೇಗೌಡ, ಬಿ ಇ ಓ ಚಂದ್ರಕಲಾ, ಮಾಸ್ತಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್ ಎಂ ವಿಜಯ ನರಸಿಂಹ ಮತ್ತಿತರರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೀದಿ ನಾಯಿ ಮರಿ ದತ್ತು ಪಡೆದು ಮಾನವೀಯತೆ ತೋರಿ
5 ವರ್ಷದೊಳಗಿನ ಮಕ್ಕಳಿಗೆ ಪಲ್ಸ್ ಪೋಲಿಯೊ ಕಡ್ಡಾಯ