ಜಾಗೃತಿ ಕಾರ್ಯಕ್ರಮ । ಆಲಯಗಳಲ್ಲಿ ವಸ್ತ್ರ ಸಂಹಿತೆ ಜಾರಿಗೊಳಿಸಲು ದೇವಸ್ಥಾನ ವಿಶ್ವಸ್ಥರ ನಿರ್ಧಾರಕನ್ನಡಪ್ರಭ ವಾರ್ತೆ ಹಾಸನ
ಶ್ರೀ ಸಪ್ತಪಧಿ ಸೌಧಾಮಿನಿ ಸಭಾಂಗಣದಲ್ಲಿ ಮಂಗಳವಾರ ಕರ್ನಾಟಕ ದೇವಸ್ಥಾನ ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘ ಮತ್ತು ಹಿಂದೂ ಜನಜಾಗೃತಿ ಸಮಿತಿಯ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ ಧಾರ್ಮಿಕ ಕಾರ್ಯಕ್ರಮದಲ್ಲಿ ಮಾತನಾಡಿದರು.
ದೇವಸ್ಥಾನವನ್ನು ಆದರ್ಶ ರೀತಿಯಲ್ಲಿ ಹೇಗೆ ನಡೆಸಬೇಕು. ನಮ್ಮ ದೇವಸ್ಥಾನವನ್ನು ಯಾವ ರೀತಿ ಧಾರ್ಮಿಕ ಕೇಂದ್ರ ಬಿಂದುವಾಗಿ ಮಾಡಬೇಕು. ದೇವಸ್ಥಾನದಲ್ಲಿ ಸಾತ್ವಿಕ ಉಡುಪು ಧರಿಸುವುದರಿಂದ ಯಾವ ರೀತಿ ದೇವರ ಚೈತನ್ಯ ಪಡೆಯಬಹುದು ಎಂದು ವಸ್ತ್ರ ಸಂಹಿತೆ ಬಗ್ಗೆ ತಿಳಿಸಿದರು.ಮಹಾಸಂಘದ ಮೋಹನ್ ಗೌಡ ಮಾತನಾಡಿ, ಕರ್ನಾಟಕದಲ್ಲಿ 34,000 ದೇವಸ್ಥಾನಗಳನ್ನು ಸರ್ಕಾರ ನಿಯಂತ್ರಣ ಮಾಡುತ್ತಿದೆ. ಇದರಲ್ಲಿ ಹೆಚ್ಚಿನ ದೇವಸ್ಥಾನಗಳು ಅವ್ಯವಹಾರದ ಆಗರವಾಗಿವೆ. ಈ ದೇವಸ್ಥಾನಗಳನ್ನು ಸರ್ಕಾರದ ಮುಷ್ಟಿಯಿಂದ ಹೊರ ತರಲು ಎಲ್ಲರೂ ಒಟ್ಟಾಗಿ ಹೋರಾಟ ಮಾಡಬೇಕಿದೆ. ಕರ್ನಾಟಕ ದೇವಸ್ಥಾನ ಮಹಾಸಂಘವು ಈ ಕಾರ್ಯಕ್ಕೆ ಮುಂದಾಗಿದೆ ಎಂದು ಹೇಳಿದರು.
ಈ ಕಾರ್ಯಕ್ರಮವನ್ನು ಶಂಕರ ಮಠದ ಧರ್ಮದರ್ಶಿಗಳಾದ ಎಂ. ಎಸ್ ಶ್ರೀಕಂಠಯ್ಯ, ಹೊಳೆ ಮಲ್ಲೇಶ್ವರ ದೇವಸ್ಥಾನದ ಕಾರ್ಯದರ್ಶಿಗಳಾದ ಮಂಜುನಾಥ್, ಉತ್ತರಮುಖಿ ಉತ್ತಿಷ್ಟ ಗಣಪತಿ ದೇವಸ್ಥಾನದ ಅಧ್ಯಕ್ಷ ರಾಘವೇಂದ್ರ ಹಾಗೂ ಕರ್ನಾಟಕ ದೇವಸ್ಥಾನ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ಸಂಯೋಜಕರಾದ ಮೋಹನ್ ಗೌಡ ದೀಪ ಬೆಳಗಿ ಉದ್ಘಾಟನೆ ಮಾಡಿದರು.
ದೇವಾಲಯವನ್ನು ಶುಚಿಯಾಗಿ ಇಟ್ಟುಕೊಳ್ಳುವುದರಿಂದ ದೇವರ ಮೂರ್ತಿಯಿಂದ ಪ್ರಸರಣವಾಗುವ ಚೈತನ್ಯ ಶಕ್ತಿಯಿಂದ ಋಣಾತ್ಮಕ ಶಕ್ತಿ ಗಳಿಂದ ರಕ್ಷಣೆ ಪಡೆಯಬಹುದು ಅರ್ಚಕರ ಪೂಜೆ ಮಾಡುವಾಗ ಏಕಾಗ್ರತೆಯಿಂದ ಸ್ಥಿರವಾದ ಮನಸ್ಸಿನಿಂದ ಸ್ಪಷ್ಟ ಶ್ಲೋಕ ಉಚ್ಚಾರಣೆಯಿಂದ ವಿಧಿವತ್ತಾಗಿ ಪೂಜೆ ಮಾಡಬೇಕು ಎಂದು ಡಾ. ಪಾಂಡುರಂಗ ಹೇಳಿದರು.ಹಾಸನದಲ್ಲಿ ಧಾರ್ಮಿಕ ಕಾರ್ಯಕ್ರಮವನ್ನು (ಎಡದಿಂದ) ಶ್ರೀ ಶಂಕರ ಮಠದ ಧರ್ಮದರ್ಶಿ ಎಂ.ಎಸ್. ಶ್ರೀಕಂಠಯ್ಯ ಉದ್ಘಾಟಿಸಿದರು. ಹೊಳೆಮಲ್ಲೇಶ್ವರ ದೇವಸ್ಥಾನದ ಕಾರ್ಯದರ್ಶಿ ಮಂಜುನಾಥ್, ಇತರರು ಇದ್ದರು.