ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ರಸ್ತೆ ಸೌಕರ್ಯ ಮುಖ್ಯ

KannadaprabhaNewsNetwork |  
Published : Apr 27, 2026, 01:45 AM IST
26ಎಚ್ಎಸ್ಎನ್12 :  | Kannada Prabha

ಸಾರಾಂಶ

ಗ್ರಾಮೀಣ ಭಾಗದ ರಸ್ತೆ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದ್ದು, ಜನರ ಸಂಚಾರ ಸುಗಮಗೊಳಿಸುವ ಉದ್ದೇಶದಿಂದ ಈ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ತಾಲೂಕು ಪಂಚಾಯಿತಿ ವ್ಯಾಪ್ತಿಯ ಆನಬಾಳು ಗ್ರಾಮದ ಅಗನಿ ಜಂಕ್ಷನ್‌ನಿಂದ ದೋನಹಳ್ಳಿವರೆಗೆ ೯೦ ಲಕ್ಷ ರು. ವೆಚ್ಚದಲ್ಲಿ ರಸ್ತೆ ನಿರ್ಮಾಣವಾಗಲಿದೆ. ಇದೇ ಮಾರ್ಗದ ಅಗನಿ ಜಂಕ್ಷನ್‌ನಿಂದ ಮರಗಿಡಿ ವರೆಗೆ ೬೦ ಲಕ್ಷ ರು. ವೆಚ್ಚದಲ್ಲಿ ಮತ್ತೊಂದು ರಸ್ತೆ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಈ ಎರಡೂ ರಸ್ತೆ ಯೋಜನೆಗಳು ಸ್ಥಳೀಯ ಗ್ರಾಮಗಳ ಸಂಪರ್ಕ ಸುಧಾರಣೆಗೆ ಮಹತ್ವದ ಪಾತ್ರವಹಿಸಲಿವೆ.

ಕನ್ನಡಪ್ರಭ ವಾರ್ತೆ ಸಕಲೇಶಪುರ

ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಒಟ್ಟು ೨ ಕೋಟಿ ೭೦ ಲಕ್ಷ ರು. ವೆಚ್ಚದ ನೂತನ ರಸ್ತೆ ಕಾಮಗಾರಿಗಳಿಗೆ ಭೂಮಿಪೂಜೆಯನ್ನು ಆಲೂರು -ಸಕಲೇಶಪುರ ಕ್ಷೇತ್ರದ ಶಾಸಕ ಸಿಮೆಂಟ್ ಮಂಜು ನೆರವೇರಿಸಿದರು.ಗ್ರಾಮೀಣ ಭಾಗದ ರಸ್ತೆ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದ್ದು, ಜನರ ಸಂಚಾರ ಸುಗಮಗೊಳಿಸುವ ಉದ್ದೇಶದಿಂದ ಈ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ತಾಲೂಕು ಪಂಚಾಯಿತಿ ವ್ಯಾಪ್ತಿಯ ಆನಬಾಳು ಗ್ರಾಮದ ಅಗನಿ ಜಂಕ್ಷನ್‌ನಿಂದ ದೋನಹಳ್ಳಿವರೆಗೆ ೯೦ ಲಕ್ಷ ರು. ವೆಚ್ಚದಲ್ಲಿ ರಸ್ತೆ ನಿರ್ಮಾಣವಾಗಲಿದೆ. ಇದೇ ಮಾರ್ಗದ ಅಗನಿ ಜಂಕ್ಷನ್‌ನಿಂದ ಮರಗಿಡಿ ವರೆಗೆ ೬೦ ಲಕ್ಷ ರು. ವೆಚ್ಚದಲ್ಲಿ ಮತ್ತೊಂದು ರಸ್ತೆ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಈ ಎರಡೂ ರಸ್ತೆ ಯೋಜನೆಗಳು ಸ್ಥಳೀಯ ಗ್ರಾಮಗಳ ಸಂಪರ್ಕ ಸುಧಾರಣೆಗೆ ಮಹತ್ವದ ಪಾತ್ರವಹಿಸಲಿವೆ. ಇದೇ ವೇಳೆ ಸಕಲೇಶಪುರ ತಾಲೂಕಿನ ದೇವಾಲದಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಚ್ಚನಹಳ್ಳಿ ಗ್ರಾಮದ ಮುಖ್ಯ ರಸ್ತೆಯಿಂದ ಬಸವನಗುಡಿ ಬಸವೇಶ್ವರ ದೇವಾಲಯದವರೆಗೆ ೧ ಕೋಟಿ ೨೦ ಲಕ್ಷ ರು. ವೆಚ್ಚದಲ್ಲಿ ನಿರ್ಮಾಣವಾಗಲಿರುವ ನೂತನ ರಸ್ತೆ ಕಾಮಗಾರಿಗೂ ಭೂಮಿಪೂಜೆ ನೆರವೇರಿಸಲಾಯಿತು. ಈ ರಸ್ತೆ ನಿರ್ಮಾಣದಿಂದ ಗ್ರಾಮಸ್ಥರು, ಭಕ್ತಾದಿಗಳು ಹಾಗೂ ಸಾರ್ವಜನಿಕರಿಗೆ ಸಂಚಾರದಲ್ಲಿ ಹೆಚ್ಚಿನ ಅನುಕೂಲವಾಗಲಿದೆ.ಭೂಮಿಪೂಜೆ ಕಾರ್ಯಕ್ರಮದಲ್ಲಿ ಶಾಸಕ ಸಿಮೆಂಟ್ ಮಂಜು ಮಾತನಾಡಿ, ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ರಸ್ತೆ ಮೂಲಸೌಕರ್ಯ ಅತ್ಯಂತ ಮುಖ್ಯವಾಗಿದೆ. ಉತ್ತಮ ರಸ್ತೆ ನಿರ್ಮಾಣವಾದರೆ ಶಿಕ್ಷಣ, ಆರೋಗ್ಯ, ಕೃಷಿ ಹಾಗೂ ವ್ಯಾಪಾರ ಚಟುವಟಿಕೆಗಳಿಗೆ ಹೆಚ್ಚಿನ ಉತ್ತೇಜನ ಸಿಗುತ್ತದೆ ಎಂದು ಹೇಳಿದರು. ಸಕಲೇಶಪುರ ಮಂಡಲ ಪ್ರಧಾನ ಕಾರ್ಯದರ್ಶಿ ಅಗನಿ ಸೋಮಶೇಖರ್‌ ಮಾತನಾಡಿ, ಹಲವು ವರ್ಷಗಳಿಂದ ಗ್ರಾಮಸ್ಥರು ರಸ್ತೆ ಅಭಿವೃದ್ಧಿಗಾಗಿ ಬೇಡಿಕೆ ಇಟ್ಟಿದ್ದರು. ಇದೀಗ ಕಾಮಗಾರಿಗೆ ಚಾಲನೆ ಸಿಕ್ಕಿರುವುದು ಸಂತಸದ ಸಂಗತಿ. ಕಾಮಗಾರಿ ಗುಣಮಟ್ಟದಿಂದ ಪೂರ್ಣಗೊಳ್ಳಬೇಕು ಎಂಬುದು ಜನರ ನಿರೀಕ್ಷೆಯಾಗಿದೆ ಎಂದು ತಿಳಿಸಿದರು.ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಿ. ರಾಜಕುಮಾರ್‌, ಸ್ಥಳೀಯ ಮುಖಂಡರು, ಬಿಜೆಪಿ ಕಾರ್ಯಕರ್ತರು, ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಗ್ರಾಮಸ್ಥರು ಹೊಸ ರಸ್ತೆ ನಿರ್ಮಾಣಕ್ಕೆ ಸಂತಸ ವ್ಯಕ್ತಪಡಿಸಿ, ಇದರಿಂದ ಸಂಚಾರದ ಸಮಸ್ಯೆ ಕಡಿಮೆಯಾಗಲಿದೆ ಎಂದು ಅಭಿಪ್ರಾಯಪಟ್ಟರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ತಂದೆ ಮಾರ್ಗದಲ್ಲಿ ಪುತ್ರ ಮಧು ಮಾದೇಗೌಡರಿಂದ ಜನಸೇವೆ: ನಿಶ್ಚಲಾನಂದನಾಥ ಸ್ವಾಮೀಜಿ
ಮಹಿಳಾ ಮೀಸಲು ಮಸೂದೆ ಹೆಸರಿನಲ್ಲಿ ದಕ್ಷಿಣ ಭಾರತ ರಾಜ್ಯಗಳಿಗೆ ಕೇಂದ್ರದಿಂದ ಅನ್ಯಾಯ: ಕೆ.ಎಂ.ಉದಯ್