ಕನ್ನಡಪ್ರಭ ವಾರ್ತೆ ಅರಸೀಕೆರೆ
ಬಾಣಾವರ ಹೋಬಳಿ ಚಿಕ್ಕಣ್ಣನಕೊಪ್ಪಲು ಗ್ರಾಮದಲ್ಲಿ ಕಾಂಕ್ರಿಟ್ ರಸ್ತೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಗ್ರಾಮೀಣ ಭಾಗಗಳಿಗೆ ಸಂಪರ್ಕ ಕಲ್ಪಿಸಿ ಸಂಚಾರ ಸುಗಮವಾಗಿಸಲು ಈ ರಸ್ತೆ ನಿರ್ಮಿಸಲಾಗುತ್ತಿದೆ ಎಂದರು. ಕೇವಲ ನಗರ, ಪಟ್ಟಣ ಪ್ರದೇಶಗಳ ಜನರಿಗೆ ಮಾತ್ರವಲ್ಲದೆ ಹಳ್ಳಿಗಾಡಿನ ಜನರಿಗೂ ಗುಣಮಟ್ಟದ ರಸ್ತೆ ಬಳಕೆಗೆ ಸಿಗಬೇಕು ಹಾಗೂ ಇದರಿಂದ ಅಪಾರ ಮಂದಿಗೆ ಅನುಕೂಲ ಆಗಬೇಕು ಎಂಬ ಹಿತದೃಷ್ಟಿಯಿಂದ ರಸ್ತೆ ನಿರ್ಮಿಸಲು ಉದ್ದೇಶಿಸಲಾಗಿದೆ ಎಂದು ಹೇಳಿದರು.
ಬಾಣಾವರದಿಂದ ಚಿಕ್ಕಣ್ಣನ ಕೊಪ್ಪಲಿನವರಗೆ ರಸ್ತೆ ಹಾಳಾಗಿದ್ದು, ಈ ರಸ್ತೆ ದುರಸ್ತಿಗೆ ಈಗಾಗಲೇ ಟೆಂಡರ್ ಆಗಿದ್ದು, ಕೆಲವೇ ದಿನಗಳಲ್ಲಿ ಕಾಮಗಾರಿ ಪ್ರಾರಂಭವಾಗಲಿದೆ ಎಂದು ತಿಳಿಸಿದರು.ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಭಾಗ್ಯಮ್ಮ, ಸದಸ್ಯರಾದ ಬಸವರಾಜು, ಮಹೇಶಪ್ಪ, ಶಿವಕುಮಾರ್, ದೇವರಾಜು, ಸಂಪತ್, ಮುಖಂಡರಾದ ಬಾಣಾವರ ಜಯಣ್ಣ, ಸುರೇಶ, ಮಹಂತೇಶ, ಶಿವಶಂಕರ್, ಶ್ಯಾನೆಗೆರೆ ಗ್ರಾ.ಪಂ.ಅಧ್ಯಕ್ಷ ಮಂಜಪ್ಪ, ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಇಂದುಕುಮಾರ್, ಪಿಡಿಒ ಕೊಟ್ರಪ್ಪ, ಗ್ರಾಮಸ್ಥರು ಹಾಜರಿದ್ದರು.