ಶಿಡ್ಲಘಟ್ಟ ನಗರಸಭೆಗೆ ₹2.09 ಕೋಟಿ ಉಳಿತಾಯ ಬಜೆಟ್

KannadaprabhaNewsNetwork | Published : Mar 12, 2024 2:06 AM

ಸಾರಾಂಶ

ನಗರೋತ್ತಾನ ಎಸ್.ಸಿ.ಪಿ ಮತ್ತು ಟಿ.ಎಸ್.ಪಿ ಯೋಜನೆಯಡಿ 12 ಕೋಟಿ ಅನುಧಾನವಿದ್ದು, 4 ಕೋಟಿ 56 ಲಕ್ಷ ವೆಚ್ಚದಲ್ಲಿ ನಗರದಲ್ಲಿ ಸುಸಜ್ಜಿತವಾದ ಅಂಬೇಡ್ಕರ್ ಭವನ ನಿರ್ಮಾಣ ಮಾಡಲಾಗುವುದು

ಕನ್ನಡಪ್ರಭ ವಾರ್ತೆ ಶಿಡ್ಲಘಟ್ಟ

ಸ್ಥಳೀಯ ನಗರಸಭೆಯ ಸಭಾಂಗಣದಲ್ಲಿ ಸೋಮವಾರ ಬೆಳಗ್ಗೆ ಜಿಲ್ಲಾಧಿಕಾರಿಗಳು ಹಾಗೂ ನಗರಸಭೆಯ ಆಡಳಿತಾಧಿಕಾರಿಗಳಾದ ಡಾ. ರವೀಂದ್ರ ಪಿ.ಎನ್. ಅಧ್ಯಕ್ಷತೆಯಲ್ಲಿ ನಡೆದ ಆಯ-ವ್ಯಯ ಸಭೆಯಲ್ಲಿ 2024-25 ನೇ ಸಾಲಿಗೆ 2.09 ಕೋಟಿ ಉಳಿತಾಯ ಬಜೆಟ್ ಮಂಡಿಸಿದರು. 2024-25ನೇ ಸಾಲಿಗೆ ನಗರಸಭೆ ಒಟ್ಟು 219 ಕೋಟಿ ರು, ಆದಾಯ ನಿರೀಕ್ಷಿಸುವ 217 ಕೋಟಿ ವೆಚ್ಚ ನಿರೀಕ್ಷಿಸುವ ಹಾಗೂ ಬರೋಬ್ಬರಿ 2.09 ಕೋಟಿ ರು, ಉಳಿತಾಯ ನಿರೀಕ್ಷಿಸುವ ಆಯ-ವ್ಯಯವನ್ನು ಮಂಡಿಸಿ ನಗರಸಭೆ ಕೌನ್ಸಿಲ್ ಸಭೆಯ ಒಪ್ಪಿಗೆ ಪಡೆಯಲಾಯಿತು.

ಮೂಲಭೂತ ಸೌಲಭ್ಯ ಕಲ್ಪಿಸಿ

ಈ ವೇಳೆ ಸಭೆಯಲ್ಲಿ ಉಪಸ್ಥಿತರಿದ್ದ ಶಾಸಕ ಬಿ.ಎನ್ ರವಿಕುಮಾರ್ ಮಾತನಾಡಿ, ಚುನಾವಣೆ ಬಂದಾಗ ರಾಜಕೀಯ ಮಾಡಿ ಜನ ಅಧಿಕಾರ ಕೊಟ್ಟಿದ್ದಾರೆ ಅಧಿಕಾರಿಗಳು ಮತ್ತು ನಗರಸಭೆಯ ಸದಸ್ಯರು ಒಗ್ಗಟ್ಟಿನಿಂದ ಕೆಲಸ ಮಾಡಿ ಜನರಿಗೆ ಕುಡಿಯುವ ನೀರು, ಬೀದಿ ದೀಪ ಮೂಲಭೂತ ಸೌಲಭ್ಯಗಳು ಕಲ್ಪಿಸಿದರೆ ಜನರ ಮುಂದೆ ಹೋದಾಗ ಗೌರವ ಸಿಗುತ್ತದೆ ಎಂದರು.

ನಗರದಲ್ಲಿ ಪ್ರತಿ ಮನೆ ಮನೆಗೂ ಯುಜಿಡಿ ವ್ಯವಸ್ಥೆಗೆ ಕಲ್ಪಿಸಬೇಕೆಂದು ಸರ್ಕಾರಕ್ಕೆ ಮನವಿ ಮಾಡಿದಾಗ 30 ಕೋಟಿ ಅನುದಾನ ಬಿಡುಗಡೆ ಮಾಡಿದೆ. ನಗರದಲ್ಲಿ ಸುಮಾರು 107 ಚಾಲ್ತಿ ಕೊಳವೆ ಬಾವಿಗಳಿದ್ದು, ನಗರೋತ್ತಾನ ಎಸ್.ಸಿ.ಪಿ ಮತ್ತು ಟಿ.ಎಸ್.ಪಿ ಯೋಜನೆಯಡಿ 12 ಕೋಟಿ ಅನುಧಾನವಿದ್ದು, 4 ಕೋಟಿ 56 ಲಕ್ಷ ವೆಚ್ಚದಲ್ಲಿ ನಗರದಲ್ಲಿ ಸುಸಜ್ಜಿತವಾದ ಅಂಬೇಡ್ಕರ್ ಭವನ ನಿರ್ಮಾಣ ಮಾಡಲಾಗುವುದು ಎಂದು ತಿಳಿಸಿದರು.

ನಗದಲ್ಲಿ ವಾಸ್ತವ್ಯ ಇರಿ: ಡೀಸಿ

ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಮಾತನಾಡಿ, ಅಧಿಕಾರಿಗಳು ನಗರಸಭೆಯ ವ್ಯಾಪ್ತಿಯಲ್ಲೆ ವಾಸ್ತವ್ಯ ಇದ್ದುಕೊಂಡು ಕೆಲಸ ಮಾಡಬೇಕು. ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಜನರಿಗೆ ಕುಡಿಯುವ ನೀರು ಕಲ್ಪಿಸಿಕೊಡಬೇಕು. ಖಾಸಗಿ ಕೊಳವೆ ಬಾವಿಗಳಿಂದ ನೀರು ಪೂರೈಕೆ ಮಾಡುವವರಿಗೆ 15 ದಿನಗಳಿಗೊಮ್ಮೆ ಬಿಲ್ ಪಾವತಿಸಲಾಗುವುದು. ಚರಂಡಿ, ಕೊಳಚೆ ನೀರಿನಲ್ಲಿ ಯಂತ್ರಗಳಿಂದ ಕೆಲಸ ಮಾಡಿಸಬೇಕು ಕುಡಿಯುವ ನೀರಿಗೆ ಆದ್ಯತೆ ನೀಡಬೇಕು ಎಂದು ನಗರಸಭೆಯ ಪೌರಾಯುಕ್ತ ಮಂಜುನಾಥ್ ಅವರಿಗೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ತಹಸೀಲ್ದಾರ್ ಬಿ.ಎನ್ ಸ್ವಾಮಿ, ನಗರಸಭೆ ಪೌರಾಯುಕ್ತ ಮಂಜುನಾಥ್, ಸೇರಿದಂತೆ ನಗರಸಭೆಯ ಸದಸ್ಯರು, ಸಿಬ್ಬಂದಿ ಹಾಜರಿದ್ದರು

Share this article