ಗುಬ್ಬಿ: ಪಟ್ಟಣದ ಶ್ರೀ ಚನ್ನಬಸವೇಶ್ವರ ಯುವಕ ಕ್ರೀಡಾ ಸಂಘವು ಆಟಗಾರ್ತಿಯರು ತಮಿಳುನಾಡಿನಲ್ಲಿ ನಡೆದ ರಾಷ್ಟ್ರಮಟ್ಟದ ಖೇಲೋ ಇಂಡಿಯಾ ಕ್ರೀಡಾ ಮೇಳದಲ್ಲಿ 14 ವರ್ಷದ ಒಳಗಿನ ಬಾಲಕಿಯರ ವಿಭಾಗದ ಖೋ ಖೋ ಪಂದ್ಯಾವಳಿಯಲ್ಲಿ ದ್ವಿತೀಯ ಸ್ಥಾನ ಗಳಿಸುವ ಮೂಲಕ ತಾಲೂಕಿಗೆ ಕೀರ್ತಿಯನ್ನು ತಂದಿದ್ದಾರೆ. ಗ್ರಾಮೀಣ ಭಾಗದ ಈ ಬಾಲಕಿಯರ ಸಾಧನೆಗೆ ಗ್ರಾಮಸ್ಥರು ಹಾಗೂ ಸಾರ್ವಜನಿಕರು ಹಾಗೂ ಚನ್ನಬಸವೇಶ್ವರ ಕ್ರೀಡಾ ಸಂಘದ ವತಿಯಿಂದ ಅಭಿನಂದನೆ ಕೋರಿದ್ದಾರೆ.