ನಗರದ ಸಮಗ್ರ ಅಭಿವೃದ್ಧಿಗೆ ವಿಶೇಷ ಆದ್ಯತೆ

KannadaprabhaNewsNetwork |  
Published : May 08, 2026, 01:45 AM IST
7ಎಚ್ಎಸ್ಎನ್3 :  | Kannada Prabha

ಸಾರಾಂಶ

ಶಂಕುಸ್ಥಾಪನೆ ಬಳಿಕ ಶಾಸಕರು ಮಾತನಾಡಿ, ೨೩ ಲಕ್ಷ ರುಪಾಯಿ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗುತ್ತಿರುವ ಈ ಅಭಿವೃದ್ಧಿ ಕಾಮಗಾರಿಗಳು ದೇವಾಲಯದ ಸೌಲಭ್ಯಗಳನ್ನು ವಿಸ್ತರಿಸುವುದರ ಜೊತೆಗೆ ಬಡಾವಣೆಯ ಅಭಿವೃದ್ಧಿಗೂ ಸಹಕಾರಿಯಾಗಲಿವೆ. ಹಾಸನ ನಗರ ಮಹಾನಗರಪಾಲಿಕೆಯಾಗಿರುವ ಹಿನ್ನೆಲೆಯಲ್ಲಿ ನಗರದ ಪ್ರತಿಯೊಂದು ವಾರ್ಡ್‌ಗೂ ಸಮಾನವಾಗಿ ಅಭಿವೃದ್ಧಿ ಕಾಮಗಾರಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲಾಗುತ್ತಿದೆ. ರಸ್ತೆ, ಚರಂಡಿ, ಕುಡಿಯುವ ನೀರು, ಬೀದಿದೀಪ, ಸ್ವಚ್ಛತೆ ಸೇರಿದಂತೆ ಮೂಲಭೂತ ಸೌಲಭ್ಯಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದರು.

ಕನ್ನಡಪ್ರಭ ವಾರ್ತೆ ಹಾಸನ

ಹಾಸನ ಮಹಾನಗರ ಪಾಲಿಕೆಯ ಅನುದಾನದಡಿ ನಗರದ 29 ನೇ ವಾರ್ಡ್ ಹುಣಸಿನಕೆರೆ ಬಡಾವಣೆಯಲ್ಲಿರುವ ಶ್ರೀ ಕಾಶಿ ವಿಶ್ವನಾಥ ದೇವಾಲಯದ ೨೩ ಲಕ್ಷದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಸ್ವರೂಪ್ ಪ್ರಕಾಶ್ ಗುರುವಾರ ಭೂಮಿಪೂಜೆ ನೆರವೇರಿಸಿ ಶಂಕುಸ್ಥಾಪನೆ ಮಾಡಿದರು.

ಶಂಕುಸ್ಥಾಪನೆ ಬಳಿಕ ಶಾಸಕರು ಮಾತನಾಡಿ, ೨೩ ಲಕ್ಷ ರುಪಾಯಿ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗುತ್ತಿರುವ ಈ ಅಭಿವೃದ್ಧಿ ಕಾಮಗಾರಿಗಳು ದೇವಾಲಯದ ಸೌಲಭ್ಯಗಳನ್ನು ವಿಸ್ತರಿಸುವುದರ ಜೊತೆಗೆ ಬಡಾವಣೆಯ ಅಭಿವೃದ್ಧಿಗೂ ಸಹಕಾರಿಯಾಗಲಿವೆ. ಹಾಸನ ನಗರ ಮಹಾನಗರಪಾಲಿಕೆಯಾಗಿರುವ ಹಿನ್ನೆಲೆಯಲ್ಲಿ ನಗರದ ಪ್ರತಿಯೊಂದು ವಾರ್ಡ್‌ಗೂ ಸಮಾನವಾಗಿ ಅಭಿವೃದ್ಧಿ ಕಾಮಗಾರಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲಾಗುತ್ತಿದೆ. ರಸ್ತೆ, ಚರಂಡಿ, ಕುಡಿಯುವ ನೀರು, ಬೀದಿದೀಪ, ಸ್ವಚ್ಛತೆ ಸೇರಿದಂತೆ ಮೂಲಭೂತ ಸೌಲಭ್ಯಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದರು.

ನಗರದಲ್ಲಿ ವೇಗವಾಗಿ ಬೆಳೆಯುತ್ತಿರುವ ಬಡಾವಣೆಗಳಲ್ಲಿ ಜನರಿಗೆ ಮೂಲಭೂತ ಸೌಕರ್ಯಗಳ ಕೊರತೆ ಉಂಟಾಗದಂತೆ ವಿಶೇಷ ನಿಗಾ ವಹಿಸಲಾಗುತ್ತಿದೆ. ಹುಣಸಿನಕೆರೆ ಬಡಾವಣೆಯಲ್ಲಿಯೂ ಹಲವು ವರ್ಷಗಳಿಂದ ಸಾರ್ವಜನಿಕರು ಮತ್ತು ದೇವಾಲಯದ ಭಕ್ತರು ಅಭಿವೃದ್ಧಿ ಕಾಮಗಾರಿಗಳ ಬೇಡಿಕೆ ಇಟ್ಟಿದ್ದು, ಅದಕ್ಕೆ ಸ್ಪಂದಿಸಿ ಮಹಾನಗರಪಾಲಿಕೆ ಅನುದಾನದಡಿ ಈ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ಹೇಳಿದರು.ದೇವಾಲಯಗಳು ಕೇವಲ ಪೂಜಾ ಕೇಂದ್ರಗಳಷ್ಟೇ ಅಲ್ಲದೆ ಸಮಾಜದ ಸಂಸ್ಕೃತಿ, ಪರಂಪರೆ ಮತ್ತು ಜನರ ನಂಬಿಕೆಯ ಪ್ರತೀಕಗಳಾಗಿವೆ. ಇಂತಹ ಧಾರ್ಮಿಕ ಕೇಂದ್ರಗಳ ಅಭಿವೃದ್ಧಿಯಿಂದ ಸ್ಥಳೀಯ ಜನರಲ್ಲಿ ಆತ್ಮೀಯತೆ ಹಾಗೂ ಸಾಮಾಜಿಕ ಬಾಂಧವ್ಯ ಹೆಚ್ಚುತ್ತದೆ. ಶ್ರೀ ಕಾಶಿ ವಿಶ್ವನಾಥ ದೇವಾಲಯಕ್ಕೆ ಪ್ರತಿದಿನ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದು, ಇಲ್ಲಿ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸುವುದು ಅಗತ್ಯವಾಗಿತ್ತು ಎಂದು ಅವರು ತಿಳಿಸಿದರು.

ಸುಮಾರು ೨೩ ಲಕ್ಷ ರೂಪಾಯಿ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗುತ್ತಿರುವ ಕಾಮಗಾರಿಗಳಲ್ಲಿ ದೇವಾಲಯ ಆವರಣ ಅಭಿವೃದ್ಧಿ, ಕಾಂಕ್ರೀಟ್ ರಸ್ತೆ, ಚರಂಡಿ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ, ವಿದ್ಯುತ್ ಹಾಗೂ ಇತರೆ ಅಗತ್ಯ ಸೌಲಭ್ಯಗಳ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಕಾಮಗಾರಿಗಳನ್ನು ಗುಣಮಟ್ಟದಿಂದ ಹಾಗೂ ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು. ನಗರದ ಸಮಗ್ರ ಅಭಿವೃದ್ಧಿಗೆ ಸರ್ಕಾರದಿಂದ ಹೆಚ್ಚಿನ ಅನುದಾನ ತರಲು ಪ್ರಯತ್ನಿಸಲಾಗುತ್ತಿದೆ. ಹಾಸನ ನಗರ ಮುಂದಿನ ದಿನಗಳಲ್ಲಿ ಮಾದರಿ ನಗರವಾಗಿ ರೂಪುಗೊಳ್ಳಬೇಕು ಎಂಬ ಉದ್ದೇಶದಿಂದ ಅಭಿವೃದ್ಧಿ ಕಾಮಗಾರಿಗಳನ್ನು ಯೋಜಿತ ರೀತಿಯಲ್ಲಿ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.

ಹಲವು ವರ್ಷಗಳಿಂದ ದೇವಾಲಯದ ಅಭಿವೃದ್ಧಿಗೆ ಬೇಡಿಕೆ ಇಟ್ಟಿದ್ದರೂ ಕಾಮಗಾರಿ ಕೈಗೆತ್ತಿಕೊಳ್ಳಲಾಗಿರಲಿಲ್ಲ. ಇದೀಗ ಶಾಸಕ ಸ್ವರೂಪ್ ಪ್ರಕಾಶ್ ಅವರು ಅನುದಾನ ಬಿಡುಗಡೆ ಮಾಡಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿರುವುದು ಸಂತಸದ ವಿಚಾರ ಎಂದು ಭಕ್ತರು ಅಭಿಪ್ರಾಯಪಟ್ಟರು.

ಈ ಸಂದರ್ಭದಲ್ಲಿ ಜೆಡಿಎಸ್ ಪಕ್ಷದ ಮುಖಂಡರು, ಮಹಾನಗರಪಾಲಿಕೆ ಸದಸ್ಯರು, ಸ್ಥಳೀಯ ಜನಪ್ರತಿನಿಧಿಗಳು, ಬಡಾವಣೆಯ ಹಿರಿಯರು, ಮಹಿಳೆಯರು, ಯುವಕರು ಹಾಗೂ ದೇವಾಲಯದ ಭಕ್ತರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೃಹದಾಕಾರವಾಗಿ ಬೆಳೆದ ಕನ್ನಡ ಸಾಹಿತ್ಯ ಪರಿಷತ್ ಕನ್ನಡಿಗರ ಅಸ್ಮಿತೆ: ಬೆಮ್ಮನೆ ದಯಾನಂದ್
ಬಿಎಸ್‌ವೈ ಅಭಿಮಾನೋತ್ಸವದಲ್ಲಿ ಹೆಚ್ಚು ಕಾರ್ಯಕರ್ತರು ಪಾಲ್ಗೊಳ್ಳಿ