ಕನ್ನಡಪ್ರಭ ವಾರ್ತೆ ಬೆಳಗಾವಿ
ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಸೋಮವಾರ ನಡೆದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಹೆಲ್ಮೆಟ್ ಇಲ್ಲದೇ ಬೈಕ್ ಓಡಿಸುವ ಸವಾರರ ಚಾಲನಾ ಪರವಾನಗಿ ಅಮಾನತುಗೊಳಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅಲ್ಲದೇ ನಗರದ ಆಯ್ದ ಪ್ರಮುಖ ಸ್ಥಳಗಳಲ್ಲಿ ಪ್ರಿಪೇಡ್ ಆಟೋ ವ್ಯವಸ್ಥೆ ಕಲ್ಪಿಸಲು ಅಗತ್ಯ ಕ್ರಮ ವಹಿಸುವಂತೆ ತಿಳಿಸಿದರು.
ನಗರದ ಫುಟ್‌ಪಾತ್‌ಗಳಲ್ಲಿ ಕುಳಿತುಕೊಳ್ಳುವ ಬೀದಿ ವ್ಯಾಪಾರಿಗಳಿಂದ ಮಹಾನಗರ ಪಾಲಿಕೆಯವರು ಕರ ವಸೂಲಿ ಮಾಡುತ್ತಿರುವುದರಿಂದ ಅಂತಹ ವ್ಯಾಪಾರಿಗಳನ್ನು ತೆರವುಗೊಳಿಸುವುದು ಕಷ್ಟವಾಗುತ್ತಿದೆ. ಆದ್ದರಿಂದ ಈ ಬಗ್ಗೆ ಪಾಲಿಕೆ ಗಮನಹರಿಸಬೇಕು ಎಂದು ತಿಳಿಸಿದರು.ದೇಶಾದ್ಯಂತ ಅಪಘಾತ ಪ್ರಮಾಣವನ್ನು ಕಡಿಮೆಗೊಳಿಸುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ನಿರಂತರ ನಿಗಾ ವಹಿಸಿರುತ್ತದೆ. ಆದ್ದರಿಂದ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಕಡ್ಡಾಯವಾಗಿ ಸಭೆಗೆ ಹಾಜರಾಗುವುದರ ಜತೆಗೆ ತಮಗೆ ನಿಗದಿಪಡಿಸಿದ ಕೆಲಸಗಳನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ ತಿಳಿಸಿದರು.
ಹೆದ್ದಾರಿ ಅಥವಾ ಜಿಲ್ಲಾ ಮುಖ್ಯರಸ್ತೆಗೆ ಕೂಡುರಸ್ತೆಗಳಿರುವ ಕಡೆಗಳಲ್ಲಿ ಸೂಕ್ತ ಬೆಳಕಿನ ವ್ಯವಸ್ಥೆ ಕಲ್ಪಿಸಬೇಕು. ರಸ್ತೆ ಸರಿಯಾಗಿ ಕಾಣಿಸಲು ಅನುಕೂಲವಾಗುವಂತೆ ಗಿಡಗಂಟೆಗಳು ಅಥವಾ ಪೊದೆಯನ್ನು ಕತ್ತರಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸುವಂತೆ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಬೇಕು. ಪರವಾನಿಗೆ ನೀಡುವಾಗ ಮತ್ತು ವಾಹನ ನೋಂದಣಿ ಸಂದರ್ಭದಲ್ಲಿ ಈ ಬಗ್ಗೆ ಗಮನಹರಿಸಬೇಕು ಎಂದು ಗುಳೇದ ನಿರ್ದೇಶನ ನೀಡಿದರು.
ಬ್ಲ್ಯಾಕ್ ಸ್ಪಾಟ್ ಗಳನ್ನು ಸಂಬಂಧಿತ ಇಲಾಖೆಯ ಅಧಿಕಾರಿಗಳು ಜಂಟಿಯಾಗಿ ಪರಿಶೀಲಿಸಿ ಮುಂಬರುವ ದಿನಗಳಲ್ಲಿ ಅಪಘಾತಗಳ ನಿಯಂತ್ರಣಕ್ಕೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.
ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್ ಎಸ್.ಬಿ.ಸೊಬರದ, ಸಮಿತಿಯ ಸದಸ್ಯರಾದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಮಹೇಶ್ ಕೋಣಿ, ಸಾರಿಗೆ ಇಲಾಖೆಯ ಡಿಟಿಓ ಲಮಾಣಿ, ಪ್ರಾದೇಶಿಕ ಸಾರಿಗೆ ಅಧಿಕಾರಿ ನಾಗೇಶ್ ಮುಂಡಾಸ, ವಾರ್ತಾಧಿಕಾರಿ ಗುರುನಾಥ ಕಡಬೂರ ಸೇರಿದಂತೆ ಲೋಕೋಪಯೋಗಿ, ಪೊಲೀಸ್, ಸಾರಿಗೆ ಇಲಾಖೆ, ಮಹಾನಗರ ಪಾಲಿಕೆ ಮತ್ತಿತರ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಇದ್ದರು.
ಕೋಟ್...
- ಎಸ್.ಎನ್.ಸಿದ್ದರಾಮಪ್ಪ. ಬೆಳಗಾವಿ ನಗರ ಪೊಲೀಸ್ ಆಯುಕ್ತ