ರಾಮನಾಥಪುರದ ಸರ್ಕಾರಿ ಪಿಯು ಕಾಲೇಜಿನ ವಿದ್ಯಾರ್ಥಿಗಳಿಗೆ ಸನ್ಮಾನ

KannadaprabhaNewsNetwork |  
Published : Jul 18, 2025, 12:45 AM IST
17ಎಚ್ಎಸ್ಎನ್4 : ರಾಮನಾಥಪುರ ಸರ್ಕಾರಿ ಮಹಿಳಾ ಕಾಲೇಜ್ ನಲ್ಲಿ ನಡೆದ ಪ್ರತಿಭಾ ಪುರಸ್ಕಾರ   ಸಮಾರೋಪ ಕಾರ್ಯಕ್ರಮದಲ್ಲಿ ಉತ್ತಮ ಶ್ರೇಣಿಯಲ್ಲಿ ಅಂಕ ಪಡೆದ ವಿದ್ಯಾರ್ಥಿಗಳಿಗೆ  ಶಾಸಕರು ಎ. ಮಂಜು ಗೌರವಿಸಿದರು. | Kannada Prabha

ಸಾರಾಂಶ

ರಾಮನಾಥಪುರದ ಬಸವೇಶ್ವರ ವೃತ್ತದಲ್ಲಿರುವ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜು ಆವರಣದಲ್ಲಿ ಪ್ರಥಮ ಪಿಯುಸಿಯಲ್ಲಿ ಉತ್ತಮ ಶ್ರೇಣಿಯಲ್ಲಿ ಅಂಕ ಪಡೆದ ವಿದ್ಯಾರ್ಥಿಗಳಿಗೆ ಸ್ವಾಗತ ಮತ್ತು ಪ್ರತಿಭಾ ಪುರಸ್ಕಾರ ಮತ್ತು ಸಹಪಾಠಿಯ ಚಟುವಟಿಕೆಗಳ ಉದ್ಘಾಟನೆ ಸಮಾರಂಭದಲ್ಲಿ ವಿದ್ಯಾರ್ಥಿಗಳನ್ನು ಗೌರವಿಸಿದ ನಂತರ ಮಾತನಾಡಿದರು. ಹಾಸನ ಜಿಲ್ಲೆಯಲ್ಲಿ ಸುಮಾರು 17 ವರ್ಷಗಳಿಂದ ರಾಮನಾಥಪುರದ ಸರ್ಕಾರಿ ಮಹಿಳಾ ಪದವಿಪೂರ್ವ ಕಾಲೇಜಿಗೆ ಸುಮಾರು 350ರಿಂದ 400 ವಿದ್ಯಾರ್ಥಿಗಳು ಬರುತ್ತಿದ್ದು, ಅದರಲ್ಲಿಯೂ ಹಾಸನ ಜಿಲ್ಲೆಯಲ್ಲಿ ಹೆಣ್ಣು ಮಕ್ಕಳ ಮಹಿಳಾ ಪದವಿಪೂರ್ವ ಕಾಲೇಜಿನಲ್ಲಿ ಜಿಲ್ಲೆಯಲ್ಲಿ ಪ್ರಥಮ ಶ್ರೇಣಿಯಲ್ಲಿ ಬಂದಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

ಕನ್ನಡಪ್ರಭ ವಾರ್ತೆ ರಾಮನಾಥಪುರ

ಹಾಸನ ಜಿಲ್ಲೆಯಲ್ಲಿ ರಾಮನಾಥಪುರದ ಮಹಿಳಾ ಪದವಿಪೂರ್ವ ಕಾಲೇಜು ಪಿಯು ಪರೀಕ್ಷೆಯಲ್ಲಿ 3 ಸ್ಥಾನಕ್ಕೆ ಬಂದಿರುವುದು ಹೆಮ್ಮೆಯ ವಿಷಯ. ಇಂತಹ ವಿದ್ಯಾರ್ಥಿಗಳು ಹೆಚ್ಚಿನ ರೀತಿಯಲ್ಲಿ ಸರ್ಕಾರಿ ಶಾಲಾ- ಕಾಲೇಜುಗಳಲ್ಲಿ ವಿದ್ಯಾಭ್ಯಾಸ ಮಾಡಿ ದೇಶದ ಉತ್ತಮ ಆಸ್ತಿಯಾಗಬೇಕು ಎಂದು ಶಾಸಕ ಎ. ಮಂಜು ಹೇಳಿದರು. ರಾಮನಾಥಪುರದ ಬಸವೇಶ್ವರ ವೃತ್ತದಲ್ಲಿರುವ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜು ಆವರಣದಲ್ಲಿ ಪ್ರಥಮ ಪಿಯುಸಿಯಲ್ಲಿ ಉತ್ತಮ ಶ್ರೇಣಿಯಲ್ಲಿ ಅಂಕ ಪಡೆದ ವಿದ್ಯಾರ್ಥಿಗಳಿಗೆ ಸ್ವಾಗತ ಮತ್ತು ಪ್ರತಿಭಾ ಪುರಸ್ಕಾರ ಮತ್ತು ಸಹಪಾಠಿಯ ಚಟುವಟಿಕೆಗಳ ಉದ್ಘಾಟನೆ ಸಮಾರಂಭದಲ್ಲಿ ವಿದ್ಯಾರ್ಥಿಗಳನ್ನು ಗೌರವಿಸಿದ ನಂತರ ಮಾತನಾಡಿದರು. ಹಾಸನ ಜಿಲ್ಲೆಯಲ್ಲಿ ಸುಮಾರು 17 ವರ್ಷಗಳಿಂದ ರಾಮನಾಥಪುರದ ಸರ್ಕಾರಿ ಮಹಿಳಾ ಪದವಿಪೂರ್ವ ಕಾಲೇಜಿಗೆ ಸುಮಾರು 350ರಿಂದ 400 ವಿದ್ಯಾರ್ಥಿಗಳು ಬರುತ್ತಿದ್ದು, ಅದರಲ್ಲಿಯೂ ಹಾಸನ ಜಿಲ್ಲೆಯಲ್ಲಿ ಹೆಣ್ಣು ಮಕ್ಕಳ ಮಹಿಳಾ ಪದವಿಪೂರ್ವ ಕಾಲೇಜಿನಲ್ಲಿ ಜಿಲ್ಲೆಯಲ್ಲಿ ಪ್ರಥಮ ಶ್ರೇಣಿಯಲ್ಲಿ ಬಂದಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

ಪ್ರತಿವರ್ಷ ಉತ್ತಮ ಶ್ರೇಣಿಯಲ್ಲಿ ವಿದ್ಯಾರ್ಥಿಗಳು ಪಾಸ್‌ ಆಗಿ ಉತ್ತಮ ಗುಣಮಟ್ಟದ ಶಿಕ್ಷಣದ ಮೂಲಕ ಕಾಲೇಜು ಮುಂದೆ ಬರುತ್ತಿದ್ದು, ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಇದರ ಸದುಪಯೋಗ ಪಡಿಸಿಕೊಳ್ಳಲು ಮನವಿ ಮಾಡಿದರು. ಹಿರಿಯ ವಿದ್ಯಾರ್ಥಿಗಳ ಸಮಿತಿಯವರು ಹಾಗೂ ನಮ್ಮ ಕುಟುಂಬದವರು ಸೇರಿ ಈ ತಾಲೂಕಿನಲ್ಲಿ 17 ಮಕ್ಕಳ ಮನೆ, ಶಾಲೆಗಳನ್ನು ತೆರೆದು ಉತ್ತಮವಾಗಿ ನಡೆಯುತ್ತಿವೆ. ಇತ್ತೀಚಿನ ಕಾಲಘಟ್ಟದಲ್ಲಿ ಮಕ್ಕಳ ಮನೆ ಪೂರ್ವ ಪ್ರಾಥಮಿಕ ಶಿಕ್ಷಣ ಯಾವ ಕಾನ್ವೆಂಟ್‌ಗಳಿಗೂ ಕಡಿಮೆ ಇಲ್ಲದಂತೆ ಗುಣಾತ್ಮಕ ಶಿಕ್ಷಣ ನೀಡುತ್ತಿರುವುದು ನಮ್ಮ ಗುರಿಯಾಗಿದೆ. ಇಂತಹ ಮಕ್ಕಳ ಮನೆ ಶಾಲೆಗಳು ಪ್ರತಿ ಗ್ರಾಮದಲ್ಲಿ ಅಗಬೇಕು. ಆಗ ಮಾತ್ರ ದೀನದಲಿತರ ಮಕ್ಕಳ ವಿದ್ಯಾಭಾಸಕ್ಕೆ ಅನೂಕುಲವಾಗಲಿದೆ ಇದರ ಉಪಯೋಗಪಡಿಸಿಕೊಳ್ಳುವಂತೆ ಶಾಸಕರು ಮಂಜು ಮನವಿ ಮಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಎಂ.ಎಸ್. ಸರ್ವಮಂಗಳ ಪ್ರಾಸ್ತಾವಿಕವಾಗಿ ಮಾತನಾಡಿದರು. ಗೌರವಾಧ್ಯಕ್ಷರು ಕೆ. ಕೃಷ್ಣೇಗೌಡ ಅಭಿವೃದ್ಧಿ ಸಮಿತಿ ಉಪಾಧ್ಯಕ್ಷರು ರೂಪದೇವಿ, ಸದಸ್ಯರಾದ ಮೈಕ್ ಮಂಜು , ಭರತ್, ಗಂಗೂರು ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷರು ಕುಮಾರ್, ನಿತೃತ್ತ ಉಪಾನ್ಯಾಸಕರು ಸ್ವಾಮಿ, ಸಿದ್ದರಾಜು ಶಾಸಕರ ಸಹಾಯಕರು ಸುನೀಲ್ , ಮಂಜುನಾಥ್, ಮಹದೇವ್, ಮುಂತಾದವರು ಉಪಸ್ಥಿತರಿದ್ದರು. ಉಪನ್ಯಾಸಕರು ಕೃಷ್ಣ ಸ್ವಾಗತಿಸಿ, ವಂದಿಸಿದರು.

PREV

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ