ಶ್ರದ್ಧೆ ಪರಿಶ್ರಮದಿಂದ ಓದಿ ಸಾಧನೆ ಮೂಲಕ ಕಾಲೇಜಿಗೆ ಕೀರ್ತಿ ತನ್ನಿ: ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಶಶಿಕಲಾ

KannadaprabhaNewsNetwork | Published : Nov 16, 2024 12:31 AM

ಸಾರಾಂಶ

ವಿದ್ಯಾರ್ಥಿಗಳು ಓದಿನ ಜೊತೆಗೆ ಸಾಂಸ್ಕೃತಿಕ ಕ್ರೀಡೆ ರಾಷ್ಟ್ರೀಯ ಸೇವೆ ಯೋಜನೆಯಲ್ಲಿ ಗುರುತಿಸಿಕೊಳ್ಳಬೇಕು. ಸಾಮಾಜಿಕ ಜೀವನದೊಂದಿಗೆ ಸಮಾಜದಲ್ಲಿ ಉತ್ತಮ ಸೇವೆ ಮಾಡಬೇಕು.

ಹಲಗೂರು: ವಿದ್ಯಾರ್ಥಿಗಳು ಶ್ರದ್ಧೆ, ಪರಿಶ್ರಮದಿಂದ ಓದಿ ಸಾಧನೆ ಮಾಡುವ ಮೂಲಕ ಓದಿದ ಶಾಲಾ ಕಾಲೇಜು, ತಂದೆ ತಾಯಿಯರಿಗೆ ಕೀರ್ತಿ ತರಬೇಕು ಎಂದು ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಆರ್.ಶಶಿಕಲಾ ಕರೆ ನೀಡಿದರು.

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ಏರ್ಪಡಿಸಿದ್ದ 2024- 25 ನೇ ಸಾಲಿನ ಸಾಂಸ್ಕೃತಿಕ ಕ್ರೀಡೆ ಮತ್ತು ರಾಷ್ಟ್ರೀಯ ಸೇವಾ ಯೋಜನೆ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ಹಾಗೂ ಪ್ರಥಮ ಪದವಿ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ಉತ್ತಮ ಶಿಕ್ಷಣ ದೊರೆಯುತ್ತಿದೆ. ಪ್ರತಿಯೊಬ್ಬರು ವ್ಯಾಸಂಗದ ಕಡೆ ಹೆಚ್ಚು ಗಮನ ನೀಡಿ ನಿಮ್ಮ ಪೋಷಕರಿಗೆ ಹಾಗೂ ಶಿಕ್ಷಕರಿಗೆ ಶಾಲೆಗೆ ಕೀರ್ತಿ ತರುವಂಥ ಸಾಧನೆ ಮಾಡಬೇಕು ಕಿವಿಮಾತು ಹೇಳಿದರು.

ಕನ್ನಡ ವಿಭಾಗದ ಮುಖ್ಯಸ್ಥ ಡಾ.ಶಂಕರೇಗೌಡ ಎನ್.ಎಸ್ ಮಾತನಾಡಿ, ವಿದ್ಯಾರ್ಥಿಗಳು ಓದಿನ ಜೊತೆಗೆ ಸಾಂಸ್ಕೃತಿಕ ಕ್ರೀಡೆ ರಾಷ್ಟ್ರೀಯ ಸೇವೆ ಯೋಜನೆಯಲ್ಲಿ ಗುರುತಿಸಿಕೊಳ್ಳಬೇಕು. ಸಾಮಾಜಿಕ ಜೀವನದೊಂದಿಗೆ ಸಮಾಜದಲ್ಲಿ ಉತ್ತಮ ಸೇವೆ ಮಾಡಬೇಕು ಎಂದು ಸಲಹೆ ನೀಡಿದರು.

ಕಾಲೇಜಿನ ಪ್ರಾಂಶುಪಾಲ ಆಲಂಗೂರು ಮಂಜುನಾಥ್ ಮಾತನಾಡಿ. ವಿದ್ಯಾರ್ಥಿಗಳಿಗೆ ಕೊರತೆ ಇದ್ದ ಹಾಸ್ಟೆಲ್ ಗೆ ಮಂಜೂರು ಮಾಡಿರುವ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರನ್ನು ಅಭಿನಂದಿಸಿದರು. ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಲು ಶಾಸಕರು ಮುಂದಾಗಿದ್ದಾರೆ ಎಂದರು.

ನಂತರ ಮೈಸೂರಿನಲ್ಲಿ ನಡೆದ ಜಿಲ್ಲಾ ಮಟ್ಟದ ಮಾಂಡವ್ಯ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಎರಡನೇ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ನೀಡಿದರು. ಇದೇ ವೇಳೆ ಅತಿಥಿಗಳನ್ನು ಸನ್ಮಾನಿಸಲಾಯಿತು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

ಕಾರ್ಯಕ್ರಮದಲ್ಲಿ ಗ್ರಾಪಂ ಉಪಾಧ್ಯಕ್ಷೆ ಲತಾ, ಶಿಕ್ಷಕರಾದ ಸುಧಾಬಿದರಿ, ಸೀಮಾ ಕೌಸರ್, ಗುರುಪ್ರಸಾದ್, ಕುಮಾರಸ್ವಾಮಿ, ಜಿಪಂ ಮಾಜಿ ಸದಸ್ಯ ಚಂದ್ರಕುಮಾರ್, ಕುಂತೂರು ಗೋಪಾಲ್ ಸೇರಿದಂತೆ ಇತರರು ಇದ್ದರು.

Share this article