ಕನ್ನಡಪ್ರಭ ವಾರ್ತೆ ಕೋಲಾರಮಹಿಳೆಯರ ಆರೋಗ್ಯ ಕುರಿತು ಪ್ರಧಾನಿ ನರೇಂದ್ರ ಮೋದಿಯವರು ಕೈಗೊಂಡಿರುವ ಸ್ವಸ್ಥ ನಾರಿ- ಸಶಕ್ತ ಪರಿವಾರ ಅಭಿಯಾನ ಶ್ಲಾಘನೀಯ. ಈ ಯೋಜನೆಯ ಮೂಲಕ ಬಿಪಿ, ಮಧುಮೇಹ, ಕ್ಯಾನ್ಸರ್ ಮುಂತಾದ ರೋಗಗಳನ್ನು ಮುಂಚಿತವಾಗಿ ಪತ್ತೆ ಹಚ್ಚಿ ತಕ್ಷಣ ಚಿಕಿತ್ಸೆ ಪಡೆಯಲು ಸಾಧ್ಯವಾಗುತ್ತದೆ. ಇದರಿಂದ ಬಡಕುಟುಂಬಗಳು ಆರ್ಥಿಕ ಸಂಕಷ್ಟದಿಂದ ಹಾಗೂ ಮಹಿಳೆಯರು ಅನಾರೋಗ್ಯದ ಬಾಧೆಯಿಂದ ಪಾರಾಗಲು ನೆರವಾಗುತ್ತದೆ ಎಂದು ಸಂಸದ ಎಂ.ಮಲ್ಲೇಶ್ ಬಾಬು ತಿಳಿಸಿದರು.ನಗರದ ಜಿಲ್ಲಾ ಎಸ್.ಎನ್.ಆರ್. ಆಸ್ಪತ್ರೆಯಲ್ಲಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿ, ಮಹಿಳೆಯರು ಪ್ರತಿ ಕ್ಷೇತ್ರದಲ್ಲಿ ಸಾಧನೆ ಮಾಡುತ್ತಿದ್ದಾರೆ, ಸಮ ಸಮಾಜ ನಿರ್ಮಾಣದಲ್ಲಿ ಮಹಿಳೆಯರು ಭಾಗವಹಿಸುವಿಕೆ ಹೆಚ್ಚಾಗುತ್ತಿದೆ. ಜಾಗತಿಕ ಮಟ್ಟದಲ್ಲಿ ಪೈಪೋಟಿ ನೀಡಿ ಹಲವು ಉನ್ನತ ಹುದ್ದೆಗಳನ್ನು ಮಹಿಳೆಯರು ಪಡೆಯುತ್ತಿದ್ದಾರೆ.ಆರೋಗ್ಯ ಕಲ್ಪಿಸಲು ಶ್ರಮಿಸಿ
ತಪಾಸಣೆ ಮಾಡಿಸಿಕೊಳ್ಳಿ
ಸ್ವಸ್ಥ ನಾರಿ ಸಶಕ್ತ ಪರಿಹಾರ ಎಂಬ ಅಭಿಯಾನದಲ್ಲಿ ಆರೋಗ್ಯವಂತ ಮಹಿಳೆಯರು ಸದೃಢ ಕುಟುಂಬಗಳು ಉಚಿತ ಆರೋಗ್ಯ ತಪಾಸಣೆ, ಕ್ಯಾನ್ಸರ್ ಸ್ಕ್ರೀನಿಂಗ್, ಪ್ರಸವಪೂರ್ವ ಆರೈಕೆ, ಲಸಿಕೆಗಳು ಪ್ರತಿಯೊಬ್ಬ ಮಹಿಳೆಯರು ತಪಾಸಣೆ ಮಾಡಿಕೊಳ್ಳಬೇಕು. ಈ ಅಭಿಯಾನದ ಪ್ರಯೋಜನ ಪಡೆಯಲು ನಿಮ್ಮ ಸಮೀಪದ ಪ್ರಾಥಮಿಕ ಆರೋಗ್ಯ ಕೇಂದ್ರ, ಆಯುಷ್‌ನ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ ಅಥವಾ ಅಂಗನವಾಡಿ ಕೇಂದ್ರವನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಜಗದೀಶ್ ತಿಳಿಸಿದರು.ಈ ಸಂದರ್ಭದಲ್ಲಿ ಡಿಎಚ್‌ಓ ಡಾ.ಜಿ.ಶ್ರೀನಿವಾಸ್, ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಎಂ.ಎ. ಚಾರಿಣಿ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಬಿ.ಹೆಚ್. ರವಿಕುಮಾರ್, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ಜಿ.ಪ್ರಸನ್ನಕುಮಾರ್, ವೈದ್ಯಕೀಯ ಅಧೀಕ್ಷಕಿ ಡಾ.ಸುಧಾಮಣಿ, ಟಿಹೆಚ್‌ಓ ಡಾ.ಎ.ವಿ.ನಾರಾಯಣಸ್ವಾಮಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಎಂ.ಪ್ರೇಮ ಇದ್ದರು.