ಇಂದು ವರ್ಧಮಾನ ಶಿಕ್ಷಣ ಸಂಸ್ಥೆಯ ರಜತ ಮಹೋತ್ಸವ

KannadaprabhaNewsNetwork |  
Published : Feb 04, 2024, 01:36 AM IST
02 ಅಥಣಿ 02   | Kannada Prabha

ಸಾರಾಂಶ

ಕಾರ್ಯಕ್ರಮದ ಉದ್ಘಾಟಕರಾಗಿ ವಿಜಯಪುರ ಸಂಸದ ರಮೇಶ ಜಿಗಜಿಣಗಿ ಮತ್ತು ಮುಖ್ಯ ಅಥಿತಿಗಳಾಗಿ ದಿಲ್ಲಿಯ ವಿಶೇಷ ಪ್ರತಿನಿಧಿ ಹಾಗೂ ವಿಧಾನ ಪರಿಷತ್ ಸದಸ್ಯ ಪ್ರಕಾಶ ಹುಕ್ಕೇರಿ, ವಿ.ಪ ಸದಸ್ಯ ಹಣಮಂತ ನಿರಾಣಿ, ಮಾಜಿ ಸಚಿವ ವೀರಕುಮಾರ ಪಾಟೀಲ ವಿವಿಧ ಗಣ್ಯರು ಆಗಮಿಸುತ್ತಿದ್ದು, ಕಾರ್ಯಕ್ರಮದ ಅಧ್ಯಕ್ಷತೆ ವರ್ಧಮಾನ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಶಂಕರ ಪರಗೌಡ ದಡ್ಡಿ ವಹಿಸುವರು ಎಂದು ಹೇಳಿದರು.

ಕನ್ನಡಪ್ರಭ ವಾರ್ತೆ ಅಥಣಿ ತಾಲೂಕಿನ ಸಂಕೋನಟ್ಟಿಯ ಶ್ರೀ ವರ್ಧಮಾನ ಶಿಕ್ಷಣ ಸಂಸ್ಥೆಯ ರಜತ ಮಹೋತ್ಸವ ಹಾಗೂ ದಾನಿಗಳ ಸನ್ಮಾನ ಸಮಾರಂಭ ಫೆ.4 ಮತ್ತು 5 ರಂದು ಹಮ್ಮಿಕೊಳ್ಳಲಾಗಿದೆ ಎಂದು ವರ್ಧಮಾನ ಶಿಕ್ಷಣ ಸಂಸ್ಥೆಯ ಕಾರ್ಯಾಧ್ಯಕ್ಷ ಶ್ರೀಕಾಂತ ಅಸ್ಕಿ ತಿಳಿಸಿದರು. ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಫೆ.4ರ ಬೆಳಗ್ಗೆ 10 ಗಂಟೆಗೆ ನಡೆಯಲಿರುವ ಕಾರ್ಯಕ್ರಮದ ಸಾನ್ನಿಧ್ಯವನ್ನು ನಾಂದಣಿಯ ಶ್ರೀ ಕ್ಷೇತ್ರ ಜೈನ ಮಠದ ಜಗದ್ಗುರು ಜಿನಸೇನ ಭಟ್ಟಾರಕ ಪಟ್ಟಾಚಾರ್ಯರು, ಶ್ರವಣಬೆಳಗೊಳದ ಚಾರುಕೀರ್ತಿ ಪಂಡಿತಾಚಾರ್ಯ ಭಟ್ಟಾರಕ ಸ್ವಾಮಿಗಳು ಹಾಗೂ ಶೇಗುಣಸಿಯ ವಿರಕ್ತ ಮಠದ ಮಹಾಂತ ಪ್ರಭು ಸ್ವಾಮಿಗಳು ವಹಿಸುವರು. ಕಾರ್ಯಕ್ರಮದ ಉದ್ಘಾಟಕರಾಗಿ ವಿಜಯಪುರ ಸಂಸದ ರಮೇಶ ಜಿಗಜಿಣಗಿ ಮತ್ತು ಮುಖ್ಯ ಅಥಿತಿಗಳಾಗಿ ದಿಲ್ಲಿಯ ವಿಶೇಷ ಪ್ರತಿನಿಧಿ ಹಾಗೂ ವಿಧಾನ ಪರಿಷತ್ ಸದಸ್ಯ ಪ್ರಕಾಶ ಹುಕ್ಕೇರಿ, ವಿ.ಪ ಸದಸ್ಯ ಹಣಮಂತ ನಿರಾಣಿ, ಮಾಜಿ ಸಚಿವ ವೀರಕುಮಾರ ಪಾಟೀಲ ವಿವಿಧ ಗಣ್ಯರು ಆಗಮಿಸುತ್ತಿದ್ದು, ಕಾರ್ಯಕ್ರಮದ ಅಧ್ಯಕ್ಷತೆ ವರ್ಧಮಾನ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಶಂಕರ ಪರಗೌಡ ದಡ್ಡಿ ವಹಿಸುವರು ಎಂದು ಹೇಳಿದರು.

ಮಧ್ಯಾಹ್ನ 3 ಗಂಟೆಗೆ ನಡೆಯಲಿರುವ ಆಂಗ್ಲ ಮಾಧ್ಯಮ ಶಾಲೆಯ ನೂತನ ಕಟ್ಟಡ ಉದ್ಘಾಟನಾ ಸಮಾರಂಭದ ಸಾನ್ನಿಧ್ಯ ಕೌಲಗುಡ್ಡದ ಶ್ರೀ ಸಿದ್ಧಯೋಗಿ ಅಮರೇಶ್ವರ ಮಹಾರಾಜರು ವಹಿಸುವರು. ನೂತನ ಕಟ್ಟಡವನ್ನು ಶಾಸಕ ಲಕ್ಷ್ಮಣ ಸವದಿ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ವಿಧಾನ ಪರತ್ತ್‌ನ ಸಭಾಪತಿ ಬಸವರಾಜ ಹೊರಟ್ಟಿ, ಸಂಸದ ಅಣ್ಣಾಸಾಹೇಬ ಜೊಲ್ಲೆ, ಕಾಗವಾಡ ಶಾಸಕ ರಾಜು ಕಾಗೆ, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ನ್ಯಾಯವಾದಿ ಆನಂದಕುಮಾರ ಮಗದುಮ್ ಸೇರಿದಂತೆ ಅನೇಕರು ಆಗಮಿಸುವರು ಎಂದು ಹೇಳಿದರು.

ಫೆ.5 ರ ಬೆಳಗ್ಗೆ 9 ಗಂಟೆಗೆ ನಂದನ ವನದಲ್ಲಿ ಗುರುವಂದನಾ ಕಾರ್ಯಕ್ರಮ ಮತ್ತು 2023-24 ನೇ ಸಾಲಿನ ಏಳು, ಹತ್ತು ಹಾಗೂ 12 ನೇ ತರಗತಿಯ ವಿದ್ಯಾರ್ಥಿಗಳ ಬೀಳ್ಕೊಡುಗೆ ಕಾರ್ಯಕ್ರಮ ಮತ್ತು ಹಳೆಯ ವಿದ್ಯಾರ್ಥಿಗಳ ಸಮಾಗಮ ಸಂಭ್ರಮ ಕಾರ್ಯಕ್ರಮದ ಸಾನ್ನಿಧ್ಯ ಗಚ್ಚಿನ‌ಮಠದ ಶ್ರೀ ಶಿವಬಸವ ಸ್ವಾಮೀಜಿ, ಅಧ್ಯಕ್ಷತೆ ಸುರೇಶ ಪಡನಾಡ, ಕಾರ್ಯಕ್ರಮದ ಉದ್ಘಾಟನೆ ಸಿ.ಬಿ.ಬಸರಿಖೋಡಿ ನೆರವೇರಿಸುವರು. ಮುಖ್ಯ ಅತಿಥಿಗಳಾಗಿ ಸಂಸ್ಥೆಯ ಕಾರ್ಯಧರ್ಶಿ ಅನಂತ ಬಸರಿಖೋಡಿ, ಮುಖ್ಯಾಧ್ಯಾಪಕ ಬಿ.ಪಿ.ಲಡಗಿ ಸೇರಿದಂತೆ ಅನೇಕರು ಆಗಮಿಸುವರು ಎಂದರು.ಸಂಸ್ಥೆಯ ನಿರ್ದೇಶಕ ಎ.ಸಿ.ಪಾಟೀಲ, ಸಂಸ್ಥೆಯ ಕಾರ್ಯದರ್ಶಿ ಅನಂತ ಬಸರಿಖೋಡಿ, ರಾಜೇಂದ್ರ ಪಾಟೀಲ, ಸಿದ್ಧಪ್ಪ ಪಾಟೀಲ, ವೆಂಕಣ್ಣಾ ಬಳೋಜ, ಸುರೇಶ ಪಡನಾಡ, ಅಪ್ಪಾಸಾಹೇಬ ಪಾಟೀಲ, ರಾಮನಗೌಡ ಪಾಟೀಲ, ಬಿ.ಪಿ.ಲಡಗಿ, ಸುನೀಲ ಭೋಸಲೆ, ಅನೀಲ ಚೌಗಲಾ ಮತ್ತು ಮಲ್ಲಯ್ಯ ಹಿರೇಮಠ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪತ್ರಕರ್ತ ತಗಡೂರಿಗೆ ಲೋಹಿಯಾ ಪ್ರಶಸ್ತಿ ಪ್ರದಾನ
ಕನ್ನಡದಲ್ಲಿ ರೈಲ್ವೆ ಪರೀಕ್ಷೆಗೆ ಇಲಾಖೆ : ಕರವೇ