ತಿಪಟೂರು ನಗರದ ಮೂಲಭೂತ ಸೌಕರ್ಯಗಳ ಅಭಿವೃದ್ದಿಗೆ ಹೆಚ್ಚು ಒತ್ತು ನೀಡುವುದು ಜನಪ್ರತಿನಿಧಿಗಳ ಕರ್ತವ್ಯವಾಗಿದ್ದು ಜನರಿಗೆ ತೊಂದರೆಯಾಗದಂತೆ ಬೇಕಾದ ಅಗತ್ಯ ಸೌಲಭ್ಯಗಳನ್ನು ಒದಗಿಸಿಕೊಡುವುದಾಗಿ ಶಾಸಕ ಕೆ. ಷಡಕ್ಷರಿ ತಿಳಿಸಿದರು.
ಕನ್ನಡಪ್ರಭ ವಾರ್ತೆ ತಿಪಟೂರು
ನಗರದ ಮೂಲಭೂತ ಸೌಕರ್ಯಗಳ ಅಭಿವೃದ್ದಿಗೆ ಹೆಚ್ಚು ಒತ್ತು ನೀಡುವುದು ಜನಪ್ರತಿನಿಧಿಗಳ ಕರ್ತವ್ಯವಾಗಿದ್ದು ಜನರಿಗೆ ತೊಂದರೆಯಾಗದಂತೆ ಬೇಕಾದ ಅಗತ್ಯ ಸೌಲಭ್ಯಗಳನ್ನು ಒದಗಿಸಿಕೊಡುವುದಾಗಿ ಶಾಸಕ ಕೆ. ಷಡಕ್ಷರಿ ತಿಳಿಸಿದರು. ನಗರಸಭೆಯ ವಿವಿಧ ಅನುದಾನದಡಿಯಲ್ಲಿ 2.5 ಕೋಟಿ ರು. ವೆಚ್ಚದ ಸುಮಾರು 18 ಕಾಮಗಾರಿಗಳಿಗೆ ಶಾಸಕ ಕೆ.ಷಡಕ್ಷರಿ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು. ನಗರದಲ್ಲಿ ಸುಮಾರು 2 ಕೋಟಿ 50ಲಕ್ಷ ರು ವೆಚ್ಚದ ವಿವಿಧ ಕಾಮಗಾರಿಗಳಿಗೆ ಶಾಸಕರ ವಿಶೇಷ ಅನುದಾನದಲ್ಲಿ ಕೆಲಸ ನೀಡಿದ್ದೇನೆ. ನಗರಸಭೆ ವ್ಯಾಪ್ತಿಯಲ್ಲಿ ಮೂಲಸೌಕರ್ಯಗಳಿಗೆ ಹೆಚ್ಚು ಆದ್ಯತೆ ನೀಡುತ್ತಿದ್ದು, ಅಗತ್ಯವಿರುವ ಕಡೆ, ರಸ್ತೆ ನಿರ್ಮಾಣ ಹಾಗೂ ಸಿಮೆಂಟ್ ಚರಂಡಿ ನಿರ್ಮಾಣದಂತಹ ಕಾಮಗಾರಿಗಳಿಗೆ ಅನುದಾನ ನೀಡಿದ್ದು, ಗುದ್ದಲಿ ಪೂಜೆ ನೆರವೇರಿಸಿದ್ದೇವೆ. ಗುಣಮಟ್ಟದ ಕಾಮಗಾರಿ ಮಾಡಲು ಗುತ್ತಿಗೆದಾರರಿಗೆ ಸೂಚಿಸಿದ್ದೇನೆ. ಅಲ್ಲದೆ ನಗರಕ್ಕೆ ಕುಡಿಯುವ ನೀರಿನ ಪೈಪ್ ಲೈನ್ ದುರಸ್ತಿ, ದಿನದ 24 ಗಂಟೆ ಕುಡಿಯುವ ನೀರಿನ ಯೋಜನೆ ವ್ಯಾಪ್ತಿಯಿಂದ ಬಿಟ್ಟು ಹೋಗಿರುವ ಬಡಾವಣೆಗಳಿಗೆ ನೀರು ಪೂರೈಸುವ ಯೋಜನೆ ಸೇರ್ಪಡೆಗೆ ಹಣ ನೀಡಲಾಗಿದೆ. ಜನರಿಗೆ ಅಗತ್ಯವಿರುವ ಕೆಲಸಗಳಿಗೆ ಅನುದಾನ ನೀಡುತ್ತಿದ್ದು ಯಾವುದೇ ಮೂಲಭೂತ ಸಮಸ್ಯೆಗಳಿದ್ದರೂ ನಾನು ಮಾಡಿಕೊಡುತ್ತೇನೆ ಎಂದು ತಿಳಿಸಿದರು. ನಗರಸಭೆ ಅಧ್ಯಕ್ಷೆ ಯಮುನಾ ಧರಣೇಶ್ ಮಾತನಾಡಿ ನಗರದ ಅಭಿವೃದ್ದಿಗೆ ಶ್ರಮಿಸಲಾಗುತ್ತಿದ್ದು ಶಾಸಕರ ನೇತೃತ್ವದಲ್ಲಿ ವಿವಿಧ ಅಭಿವೃದ್ದಿ ಕಾಮಗಾರಿಗಳು, ರಸ್ತೆ, ಚರಂಡಿ, ಕುಡಿಯುವ ನೀರು ಪೂರೈಸುವ ಪೈಪ್‌ಲೈನ್ ಕಾಮಗಾರಿ ಹೀಗೆ ಹತ್ತಾರು ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಲಾಗಿದೆ ಎಂದರು. ಈ ಸಂದರ್ಭದಲ್ಲಿ ನಗರದ ವಿವಿಧ ಬಡಾವಣೆಗಳಲ್ಲಿ ರಸ್ತೆ ಅಭಿವೃದ್ದಿ, ಕುಡಿಯುವ ನೀರಿಗೆ ಪೈಪ್‌ಲೈನ್, ಕಾಂಕ್ರೀಟ್ ಚರಂಡಿ ಕಾಮಗಾರಿ, ವಸತಿ ಗೃಹಗಳ ರಸ್ತೆ ಅಭಿವೃದ್ದಿ, ಪರಿಶಿಷ್ಟ ಪಂಗಡದ ಜನಾಂಗದವರು ವಾಸವಿರುವ ಸ್ಥಳದಲ್ಲಿ ಚರಂಡಿ, ರಸ್ತೆ ದುರಸ್ತಿ, ಕಾಂಪೌಂಡ್ ನಿರ್ಮಾಣ, ಮಾರನಗೆರೆಯಲ್ಲಿ ಸಮುದಾಯ ಭವನ ಕಟ್ಟಡದ ವಿಸ್ತರಣೆ, ಪುಟ್‌ಬಾತ್‌ಗೆ ಇಂಟರ್‌ಲಾಕ್ ಅಳವಡಿಕೆ, ನಗರಸಭೆಯ ವ್ಯಾಪ್ತಿಯ ವಿವಿಧ ಸ್ಥಳಗಳಲ್ಲಿ ಬಸ್ ಶೆಲ್ಟರ್ ನಿರ್ಮಾಣ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿದರು. ಈ ವೇಳೆ ನಗರಸಭೆ ಉಪಾಧ್ಯಕ್ಷೆ ಮೇಘನಭೂಷಣ್, ಪೌರಾಯುಕ್ತ ವಿಶ್ವೇಶ್ವರಯ್ಯ ಬದರಗಡೆ, ನಗರಸಬಾ ಸದಸ್ಯರುಗಳಾದ ಯೋಗೀಶ್, ಮಹೇಶ್, ನಹಿಂಪಾಶ, ಹೂರುಬಾನು, ಪದ್ಮ ಶಿವಣ್ಣ, ಭಾರತಿ ಮಂಜುನಾಥ್, ಆಶೀಫಾ ಬಾನು, ಸ್ಥಳೀಯ ಮುಂಖಂಡರಾದ ಲೋಕನಾಥ್ ಸಿಂಗ್, ಗಾರೆ ಶಿವಣ್ಣ, ತಿಲಕ್, ಶಿವಲಿಂಗಯ್ಯ ಧರಣೇಶ್, ಸುಜಿತ್ ಭೂ?ಣ್ ಸೇರಿದಂತೆ ನಗರಸಭಾ ಅಧಿಕಾರಿಗಳಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.