ಸತೀಶ ಜಾರಕಿಹೊಳಿಗೆ ಡಿಸಿಎಂ ಸ್ಥಾನ ನೀಡುವಂತೆ ಒತ್ತಾಯ

KannadaprabhaNewsNetwork |  
Published : Jan 06, 2024, 02:00 AM IST
 05 ಜಿಕೆಕೆ-3 | Kannada Prabha

ಸಾರಾಂಶ

ಸತೀಶ ಜಾರಕಿಹೊಳಿ ಸಮಾಜ ಮೌಢ್ಯದ ವಿರುದ್ಧ ಕಾರ್ಯಕ್ರಮಗಳನ್ನು ರೂಪಿಸಿ ಸಮಾಜ ತಿದ್ದುವ ಕಾರ್ಯದಲ್ಲಿ ತೊಡಗಿದ್ದು, ನಿಷ್ಪಕ್ಷಪಾತ ಸೇವೆ ಸಲ್ಲಿಸುತ್ತಿದ್ದಾರೆ.

ಗೋಕಾಕ: ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿಗೆ ಡಿಸಿಎಂ ಸ್ಥಾನ ನೀಡುವಂತೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಸೇರಿದಂತೆ ಇತರ ದಲಿತ ಸಮುದಾಯದ ಮುಖಂಡರು ಬುಧವಾರ ಒತ್ತಾಯಿಸಿದರು. ಮಾಧ್ಯಮದವರೊಂದಿಗೆ ಮುಖಂಡ ರಮೇಶ ಮಾದರ ಮಾತನಾಡಿ, ಸತೀಶ ಜಾರಕಿಹೊಳಿ ಸಮಾಜ ಮೌಢ್ಯದ ವಿರುದ್ಧ ಕಾರ್ಯಕ್ರಮಗಳನ್ನು ರೂಪಿಸಿ ಸಮಾಜ ತಿದ್ದುವ ಕಾರ್ಯದಲ್ಲಿ ತೊಡಗಿದ್ದು, ನಿಷ್ಪಕ್ಷಪಾತ ಸೇವೆ ಸಲ್ಲಿಸುತ್ತಿದ್ದಾರೆ. ಪ್ರಗತಿಪರ ಚಿಂತನೆಗಳನ್ನು ಮೈಗೂಡಿಸಿಕೊಂಡು ಶೋಷಣೆಗೊಳಗಾದ ಸಮುದಾಯ ಎಸ್ಸಿ - ಎಸ್‌ಟಿ ಹಾಗೂ ಹಿಂದುಳಿದ ವರ್ಗಗಳು, ಅಲ್ಪಸಂಖ್ಯಾತರ ಸಾಮಾಜಿಕ, ಶೈಕ್ಷಣಿಕ ಹಾಗೂ ರಾಜಕೀಯ ಶ್ರೇಯೋಭಿವೃದ್ದಿಗಾಗಿ ಶ್ರಮಿಸುತ್ತಿದ್ದಾರೆ. ಇಂತಹವರಿಗೆ ಸಮಾಜದಲ್ಲಿ ಹೆಚ್ಚಿನ ಸೇವೆ ಮಾಡಲು ಕಾಂಗ್ರೆಸ್ ಪಕ್ಷ ಡಿಸಿಎಂ ಸ್ಥಾನಮಾನ ನೀಡಬೇಕು ಎಂದು ಆಗ್ರಹಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಿಇಎಲ್‌ನಲ್ಲಿ ಕ್ಷಿಪಣಿ ಸಂಯೋಜನಾ ಘಟಕ ಉದ್ಘಾಟಿಸಿದ ರಾಜನಾಥ್‌ ಸಿಂಗ್
ದೇವರ ಕಾಣುವ ಮುನ್ನವೇ ಮಗುವಿಗೆ ಯಮನಾದ ಕಾರು