ಮಣಿಪಾಲ ಮಾಹೆಯಲ್ಲಿ ‘ಉತ್ಸವ್ 2026’ಗೆ ಅದ್ದೂರಿ ಚಾಲನೆ

KannadaprabhaNewsNetwork |  
Published : Apr 08, 2026, 03:45 AM IST
ಮಣಿಪಾಲ ಕೆಎಂಸಿ ಗ್ರೀನ್ಸ್ ನಲ್ಲಿ ಮಾಹೆಯ ಉತ್ಸವ್ - 2026ಕ್ಕೆ ವಸಂತಿ ಆರ್. ಪೈ ಚಾಲನೆ ನೀಡಿದರು | Kannada Prabha

ಸಾರಾಂಶ

ಮಣಿಪಾಲ್‌ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ವಿವಿ ವತಿಯಿಂದ 5 ದಿನಗಳ ಅಂತರ ಕಾಲೇಜು ಸಾಂಸ್ಕೃತಿಕ ಹಬ್ಬ ‘ಉತ್ಸವ್‌ 2026’ ಮಂಗಳ‍ವಾರ ಇಲ್ಲಿನ ಕೆಎಂಸಿ ಗ್ರೀನ್ಸ್‌ನಲ್ಲಿ ಅದ್ದೂರಿಯಾಗಿ ಆರಂಭಗೊಂಡಿತು. ಮಾಹೆ ಟ್ರಸ್ಟ್‌ನ ಟ್ರಸ್ಟಿ ವಸಂತಿ ಆರ್. ಪೈ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಮಣಿಪಾಲ: ಮಣಿಪಾಲ್‌ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ವಿವಿ ವತಿಯಿಂದ 5 ದಿನಗಳ ಅಂತರ ಕಾಲೇಜು ಸಾಂಸ್ಕೃತಿಕ ಹಬ್ಬ ‘ಉತ್ಸವ್‌ 2026’ ಮಂಗಳ‍ವಾರ ಇಲ್ಲಿನ ಕೆಎಂಸಿ ಗ್ರೀನ್ಸ್‌ನಲ್ಲಿ ಅದ್ದೂರಿಯಾಗಿ ಆರಂಭಗೊಂಡಿತು. ಮಾಹೆ ಟ್ರಸ್ಟ್‌ನ ಟ್ರಸ್ಟಿ ವಸಂತಿ ಆರ್. ಪೈ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮಾಹೆಯ ಸಹ ಕುಲಾಧಿಪತಿ ಡಾ. ಎಚ್.ಎಸ್. ಬಲ್ಲಾಳ್ ಅಧ್ಯಕ್ಷತೆ ವಹಿಸಿದ್ದರು. ಈ ಉತ್ಸವವು ಸಾಂಸ್ಕೃತಿಕ ವೈವಿಧ್ಯತೆಯನ್ನು ಸಂಭ್ರಮಿಸುವ ಜತೆಗೆ ವಿದ್ಯಾರ್ಥಿಗಳಲ್ಲಿ ಸೃಜನಶೀಲತೆ ಮತ್ತು ಒಗ್ಗಟ್ಟಿನ ಭಾವನೆಯನ್ನು ಮೂಡಿಸುವ ಒಂದು ಮಹತ್ವದ ವೇದಿಕೆಯಾಗಿದೆ ಎಂದು ಅವರು ಹೇಳಿದರು.

ಮುಖ್ಯ ಅತಿಥಿಯಾಗಿದ್ದ ಮಾಹೆಯ ಕುಲಪತಿ ಲೆಜ (ಡಾ.) ಎಂ.ಡಿ. ವೆಂಕಟೇಶ್ ಅವರು ಶೈಕ್ಷಣಿಕ ಕಾರ್ಯಕ್ರಮಗಳಷ್ಟೇ ಸಾಂಸ್ಕೃತಿಕ ಕಾರ್ಯಕ್ರಮಗಳಿಗೂ ಮಾಹೆ ಒತ್ತು ನೀಡುತ್ತದೆ ಎಂದರು.

ಮಾಹೆ ಸಹ ಕುಲಪತಿಗಳಾದ ಡಾ. ಕೆ. ಶರತ್ ರಾವ್ ಹಾಗೂ ಡಾ. ನಾರಾಯಣ ಸಭಾಹಿತ್ ಮತ್ತು ವಿದ್ಯಾರ್ಥಿ ಕ್ಷೇಮಪಾಲನಾ ವಿಭಾಗದ ನಿರ್ದೇಶಕಿ ಡಾ. ಗೀತಾ ಮಯ್ಯ, ಮಾಹೆ ಸಿಸಿಬಿ ಅಧ್ಯಕ್ಷ ಡಾ. ಶೋಭಾ ಯು. ಕಾಮತ್ ಮತ್ತು ಕಾರ್ಯದರ್ಶಿ ಡಾ. ಮೋಹನ್ ದಾಸ್ ರಾವ್ ಉಪಸ್ಥಿತರಿದ್ದರು. ಈ ಬಾರಿ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ಈ ಹಬ್ಬದಲ್ಲಿ ಭಾಗಿಯಾಗಿದ್ದು, ಮಾಹೆ ಸಮೂಹದ ಮಣಿಪಾಲ್, ಮಂಗಳೂರು, ಬೆಂಗಳೂರು ಮಾತ್ರವಲ್ಲದೆ ಜೈಪುರ ಮತ್ತು ಮಲೇಷ್ಯಾದ ಮಣಿಪಾಲ್ ಕ್ಯಾಂಪಸ್‌ಗಳು ಸೇರಿದಂತೆ ಒಟ್ಟು 27 ಸಂಸ್ಥೆಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿವೆ. 38 ವಿವಿಧ ಸ್ಪರ್ಧೆಗಳಲ್ಲಿ 1,700ಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಗೂ 300ಕ್ಕೂ ಅಧಿಕ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಪಾಲ್ಗೊಳ್ಳುತ್ತಿರುವುದು ಈ ಕಾರ್ಯಕ್ರಮದ ವಿಸ್ತಾರ ಮತ್ತು ಒಳಗೊಳ್ಳುವಿಕೆಗೆ ಸಾಕ್ಷಿಯಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಾಮಾಜಿಕ ಕಳಕಳಿಯ ಕಾರಣಕ್ಕೆ ‘ಬಾಬೂಜಿ’ಯಾದ ಡಾ. ಬಾಬು ಜಗಜೀವನ್ ರಾಂ: ಪ್ರೊ. ಎಂ.ಡಿ.ಮಂಚಿ
ಉಡುಪಿ: 12 ರಂದು ಕಥಾಬಿಂದು ಸಾಹಿತ್ಯ ಸಮ್ಮೇಳನ