ಉತ್ತಮರ ಆಯ್ಕೆಗೆ ಯುವ ಪೀಳಿಗೆಯ ಮತದಾನ ಮುಖ್ಯ

KannadaprabhaNewsNetwork |  
Published : Jan 26, 2026, 01:45 AM IST
25ಎಚ್ಎಸ್ಎನ್11ಎ : ಚುನಾವಣೆ ಪ್ರಕಿಯ ಕುರಿತು ಆಯೋಜಿಸಿದ್ದ ಚಿತ್ರಕಲಾ ಸ್ಪರ್ಧೆ, ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. | Kannada Prabha

ಸಾರಾಂಶ

ಪ್ರತಿಯೊಬ್ಬ ನಾಗರಿಕರು ದೇಶ ಕಟ್ಟುವ ರಾಜಕೀಯ ಪ್ರಜ್ಞೆ ಇರಬೇಕು, ಯುವ ಮತದಾರರು ರಾಜಕೀಯ ಚಟುವಟಿಕೆಯಲ್ಲಿ ಭಾಗವಹಿಸಬೇಕು, ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಲು ಪ್ರತಿಯೊಬ್ಬರಿಗೂ ಮತದಾನದ ಪಟ್ಟಿಯಲ್ಲಿ ಹೆಸರು ಇರಬೇಕು ಎಂದರು. ಮತದಾರರು ಯಾವುದೇ ಆಮಿಷಗಳಿಗೆ ಬಲಿಯಾಗದೆ ದೇಶದ ಅಭಿವೃದ್ದಿ ದೃಷ್ಟಿಯಿಂದ ಉತ್ತಮ ನಾಯಕರನ್ನು ಆಯ್ಕೆ ಮಾಡಿಕೊಳ್ಳಬೇಕು, ಹಿರಿಯರು, ಸ್ವಾತಂತ್ರ್ಯ ಹೋರಾಟಗಾರರು ತಮ್ಮ ಜೀವನವನ್ನು ಪಣಕ್ಕಿಟ್ಟು, ಬಲಿದಾನ, ಶ್ರಮದಿಂದ ಸ್ವಾತಂತ್ಯವನ್ನು ತಂದುಕೊಟ್ಟಿದ್ದಾರೆ ಹಾಗಾಗಿ ಇತಿಹಾಸವನ್ನು ಅರಿತು ಪ್ರತಿನಿಧಿಗಳ ಆಯ್ಕೆ ಮಾಡಬೇಕು ಎಂದರು.

ಕನ್ನಡಪ್ರಭ ವಾರ್ತೆ ಹಾಸನ

ರಾಷ್ಟ್ರಕ್ಕೆ ಉತ್ತಮ ನಾಯಕರನ್ನು ಆಯ್ಕೆ ಮಾಡುವಲ್ಲಿ ಯುವ ಪೀಳಿಗೆಯ ಮತದಾನ ಬಹಳ ಮುಖ್ಯವಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಹೇಮಾವತಿ ಅವರು ತಿಳಿಸಿದ್ದಾರೆ.ಭಾರತ ಚುನಾವಣಾ ಆಯೋಗ, ಮುಖ್ಯ ಚುನಾವಣಾಧಿಕಾರಿ ಕಚೇರಿ ಹಾಗೂ ಹಾಸನ ಜಿಲ್ಲಾಡಳಿತ ಸಂಯುಕ್ತಶ್ರಾಯದಲ್ಲಿ ಹಾಸನ ಜಿಲ್ಲಾ ಪಂಚಾಯತಿ ಹೊಯ್ಸಳ ಸಭಾಂಗಣದಲ್ಲಿ ಭಾನುವಾರ ಏರ್ಪಡಿಸಲಾಗಿದ್ದ ರಾಷ್ಟ್ರೀಯ ಮತದಾನ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಪ್ರತಿಯೋಬ್ಬ ಭಾರತೀಯರು ೧೮ ವರ್ಷದ ನಂತರ ಸ್ವತಂತ್ರವಾಗಿ ತಮ್ಮ ಹಕ್ಕು ಚಲಾಯಿಸುವ ಅಧಿಕಾರವನ್ನು ಹೊಂದಿದ್ದಾರೆ, ಅದರಂತೆ ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಬೇಕು ಎಂದು ಕರೆ ನೀಡಿದರು. ಭಾರತ ದೇಶ ಪ್ರತಿಯೊಬ್ಬರ ಆಸ್ತಿಯಾಗಿದೆ, ಸಂವಿಧಾನ ಬದ್ಧವಾಗಿ ಮತದಾನದ ಹಕ್ಕುಗಳನ್ನು ಪ್ರತಿಯೊಬ್ಬರೂ ಪಡೆದಿರುತ್ತಾರೆ, ಮತ ಚಲಾಯಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಹಾಗೂ ಮತದಾನ ಪಟ್ಟಿಯಲ್ಲಿ ಸುತ್ತ ಮುತ್ತಲಿನವರನ್ನು ಸೇರ್ಪಡೆಗೊಳಿಸಲು ಉತ್ತೇಜನ ನೀಡಬೇಕು ಎಂದರು. ಯುವ ಪೀಳಿಗೆ ಮತದಾನದಲ್ಲಿ ಭಾಗವಹಿಸದಿರುವುದು ಹಾಗೂ ಮತದಾನ ಪಟ್ಟಿ ಸೇರ್ಪಡೆ ಆಸಕ್ತಿ ತೋರಿಸದಿರುವುದು ವಿಷಾದನೀಯ, ೧೮ ವರ್ಷ ತುಂಬಿದ ಪ್ರತಿಯೊಬ್ಬರೂ ಮತದಾರ ಪಟ್ಟಿಯಲ್ಲಿ ಮೊದಲ ನೋಂದಣಿ ಮಾಡಿಕೊಳ್ಳುವುದು ಕರ್ತವ್ಯವಾಗಿದೆ. ಇಂದಿನ ಪ್ರಜೆಗಳು ಮುಂದಿನ ಭವಿಷ್ಯವಾಗಿದ್ದಾರೆ. ಯುವ ಸಮುದಾಯ ದೇಶಕ್ಕೆ ಉತ್ತಮ ನಾಯಕರನ್ನು ಆಯ್ಕೆ ಮಾಡಬೇಕು, ಅಭಿವೃದ್ಧಿ ಹಾದಿಯಲ್ಲಿ ಸಾಗಬೇಕು ಎಂದರು.ಜಿಲ್ಲಾಧಿಕಾರಿ ಕೆ. ಎಸ್ ಲತಾ ಕುಮಾರಿ ಅವರು ಮಾತನಾಡಿ ಪ್ರತಿಯೊಬ್ಬ ನಾಗರಿಕರು ದೇಶ ಕಟ್ಟುವ ರಾಜಕೀಯ ಪ್ರಜ್ಞೆ ಇರಬೇಕು, ಯುವ ಮತದಾರರು ರಾಜಕೀಯ ಚಟುವಟಿಕೆಯಲ್ಲಿ ಭಾಗವಹಿಸಬೇಕು, ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಲು ಪ್ರತಿಯೊಬ್ಬರಿಗೂ ಮತದಾನದ ಪಟ್ಟಿಯಲ್ಲಿ ಹೆಸರು ಇರಬೇಕು ಎಂದರು. ಮತದಾರರು ಯಾವುದೇ ಆಮಿಷಗಳಿಗೆ ಬಲಿಯಾಗದೆ ದೇಶದ ಅಭಿವೃದ್ದಿ ದೃಷ್ಟಿಯಿಂದ ಉತ್ತಮ ನಾಯಕರನ್ನು ಆಯ್ಕೆ ಮಾಡಿಕೊಳ್ಳಬೇಕು, ಹಿರಿಯರು, ಸ್ವಾತಂತ್ರ್ಯ ಹೋರಾಟಗಾರರು ತಮ್ಮ ಜೀವನವನ್ನು ಪಣಕ್ಕಿಟ್ಟು, ಬಲಿದಾನ, ಶ್ರಮದಿಂದ ಸ್ವಾತಂತ್ಯವನ್ನು ತಂದುಕೊಟ್ಟಿದ್ದಾರೆ ಹಾಗಾಗಿ ಇತಿಹಾಸವನ್ನು ಅರಿತು ಪ್ರತಿನಿಧಿಗಳ ಆಯ್ಕೆ ಮಾಡಬೇಕು ಎಂದರು.

ಇಂದು ೧೬ನೇ ರಾಷ್ಟ್ರೀಯ ಮತದಾನ ದಿನಾಚರಣೆಯನ್ನು ಆಚರಿಸುತ್ತಿದ್ದೇವೆ ರಾಜ್ಯದಲ್ಲಿ ಜಿಲ್ಲೆ ಶೇಕಡಾವಾರು ಮತದಾನದಲ್ಲಿದ್ದು, ಸ್ವೀಪ್ ವತಿಯಿಂದ ಜಿಲ್ಲೆಯ ಎಲ್ಲಾ ಕಾಲೇಜುಗಳಲ್ಲಿ ಭೇಟಿ ನೀಡಿ ಯುವ ಮತದಾರರ ನೋಂದಣಿ ಮಾಡಿಸಬೇಕು ಎಂದರು. ಜಿಲ್ಲೆಯಲ್ಲಿ ೨೬ ಸಾವಿರ ಹೊಸ ಯುವ ಮತದಾರರು ಸೇರ್ಪಡೆಯಾಗಿದ್ದಾರೆ, ೧೫ ಲಕ್ಷಕ್ಕೂ ಹೆಚ್ಚು ಮತದಾರರಿದ್ದಾರೆ, ಜಿಲ್ಲೆಯಲ್ಲಿ ಹೆಚ್ಚು ಮಹಿಳಾ ಮತದಾರಿದ್ದು ಪ್ರತಿಯೊಬ್ಬರಲ್ಲಿಯೂ ರಾಜಕೀಯ ಪ್ರಜ್ಞೆ ಹೊಂದಬೇಕು. ರಾಜ್ಯದಲ್ಲಿ ೨೦೨೫-೨೬ ರ ಮತದಾರರ ಪಟ್ಟಿಯ ಮ್ಯಾಪಿಂಗ್ ಕಾರ್ಯ ನಡೆಯುತ್ತಿದೆ. ಹಿಂದೆ ೨೦೦೧ ರಲ್ಲಿ ಮ್ಯಾಪಿಂಗ್ ಕಾರ್ಯ ಮಾಡಲಾಗಿತ್ತು ಎಂದರು.ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಭಾರ ಸದಸ್ಯ ಕಾರ್ಯದರ್ಶಿಗಳಾದ ಗಿರಿಗೌಡ ಅವರು ಮಾತನಾಡಿ ಮತದಾನ ಶೇಕಡಾವಾರು ಕುಸಿಯುತ್ತಿದ್ದು, ಗ್ರಾಮೀಣ ಭಾಗದಲ್ಲಿ ಮತದಾನವಾಗುತ್ತಿದೆ ಆದರೆ ನಗರ ಭಾಗದಲ್ಲಿಯೇ ಮತದಾನ ಕಡಿಮೆಯಾಗುತ್ತಿದೆ ಇದು ವಿಷಾದನೀಯ ಎಂದರು. ಜಾತಿ, ಧರ್ಮ ಬಿಟ್ಟು ಉತ್ತಮ ನಾಯಕರನ್ನು ಮತದಾನದ ಮೂಲಕ ಆಯ್ಕೆ ಮಾಡಿ, ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಉಳಿಸಿಕೊಳ್ಳಬೇಕು ಎಂದು ತಿಳಿಸಿದರು.ಅಪರ ಜಿಲ್ಲಾಧಿಕಾರಿ ಜಗದೀಶ್ ಗಂಗಣ್ಣನವರ್ ಮಾತನಾಡಿ, ಭಾರತ ೨೦೧೧ರಲ್ಲಿ ರಾಷ್ಟ್ರೀಯ ಮತದಾನ ದಿನಾಚರಣೆಯನ್ನು ಮೊದಲ ಬಾರಿಗೆ ಆರಂಭಿಸಲಾಯಿತು, ಇಂದು ಭಾರತ ಚುನಾವಣಾ ಆಯೋಗದ ನಮ್ಮಭಾರತ ನನ್ನ ಹಕ್ಕು ಎಂಬ ಧ್ಯೇಯ ವಾಕ್ಯದೊಂದಿಗೆ ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ಆಚರಿಸಲಾಗುತ್ತಿದೆ ಎಂದರು. ಜಿಲ್ಲಾ ಮಟ್ಟದಲ್ಲಿ ಸ್ವೀಪ್ ಸಮಿತಿಯು ಅರ್ಹ ಮತದಾರ ಜಾಗೃತಿಯನ್ನು ಮೂಡಿಸುವ ಕೆಲಸ ಹಾಗೂ ಪ್ರತಿಯೊಬ್ಬರೂ ಮತದಾನ ಮಾಡುವಂತೆ ಅರಿವು ಮೂಡಿಸುತ್ತಿದೆ ಎಂದು ತಿಳಿಸಿದರು.ಇದೇ ವೇಳೆ ಚುನಾವಣೆ ಪ್ರಕಿಯ ಕುರಿತು ಆಯೋಜಿಸಿದ್ದ ಚಿತ್ರಕಲಾ ಸ್ಪರ್ಧೆ, ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕರಾದ ಕೃಷ್ಣಮೂರ್ತಿ, ತಹಸೀಲ್ದಾರ್ ಗೀತಾ, ಡಿವೈಎಸ್ಪಿ ಗಂಗಾಧರಪ್ಪ, ಮತ್ತಿತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಭಾರತವು ಸಮಾನತೆ, ಸಾಮಾಜಿಕ ನ್ಯಾಯ ಕಲ್ಪಿಸಿದ ರಾಷ್ಟ್ರ-ಶಾಸಕ ಕೋಳಿವಾಡ
ವಿಶ್ವದಲ್ಲಿಯೇ ಭಾರತೀಯ ಸಂವಿಧಾನ ಶ್ರೇಷ್ಠ