ಕನ್ನಡಪ್ರಭ ವಾರ್ತೆ ಮಾಲೂರು
ಬೇಸಿಗೆ ಆರಂಭದಲ್ಲೇ ಕುಡಿಯು ನೀರಿನ ಅಭಾವವೂ ಕಾಣಿಸುಕೊಳ್ಳುತ್ತಿದೆ. ಬಿಸಿನ ತಾಪಕ್ಕೆ ಬಳಲುವ ಜನತೆಗೆ ಕುಡಿಯುವ ನೀರಿಗೆ ಪರದಾಡುವ ಪರಿಸ್ಥಿತಿ ಉಂಟಾಗುವ ಸ್ಥಿತಿ ಗೋಚರಿಸುತ್ತಿದೆ.ಸರ್ಕಾರದ ಪಂಚ ಗ್ಯಾರಂಟಿಗಳು ಗ್ರಾಮಗಳ ಮೂಲಭೂತ ಸೌರ‍್ಯಗಳ ಅನುದಾನಕ್ಕೆ ಅಡ್ಡಿಯಾದಂತಿದೆ. ಇದಕ್ಕೊಂದು ತಾಜಾ ಉದಾಹರಣೆ ಮಾಲೂರು ಪಟ್ಟಣಕ್ಕೆ ಕೂಗಳತೆ ದೂರದಲ್ಲಿರುವ ನೀಲಕಂಠ ಅಗ್ರಹಾರ. ಇಲ್ಲಿ ಈಗಾಗಲೇ ನೀರಿನ ಸಮಸ್ಯೆ ಆರಂಭವಾಗಿದೆ. ಕುಡಿಯುವ ನೀರಿ ಸಮಸ್ಯೆ ಉಂಟಾಗಲು ತಾಲೂಕು ಆಡಳಿತ ಹಾಗೂ ಪಂಚಾಯ್ತಿ ಅಧಿಕಾರಿಗಳ ನಿರ್ಲಕ್ಷವೇ ಮುಖ್ಯ ಕಾರಣ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ, ಕ್ರಮ ಕೈಗೊಳ್ಳದ ಗ್ರಾಪಂ
ತಾಲೂಕಿನ ಅರಳೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೀಲಕಂಠ ಅಗ್ರಹಾರ ಗ್ರಾಮದಲ್ಲಿ ಬೇಸಿಗೆ ಆರಂಭಕ್ಕೂ ಮುನ್ನವೇ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದೆ. ಯಾವುದೇ ಕ್ರ ಕೈಗೊಳ್ಳದ ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ, ಸರ್ಕಾರಗಳು ಗ್ರಾಮೀಣ ಪ್ರದೇಶದ ಹಳ್ಳಿಗಳಿಗೆ ಮೊದಲ ಆದ್ಯತೆಯಂತೆ ಕುಡಿಯುವ ನೀರಿಗೆ ಗಮನ ಹರಿಸಿ ಎಂದು ಸೂಚಿಸಿದ್ದರೂ ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಹಾಗೂ ವಾಟರ್ ಮ್ಯಾನ್ ನಿರ್ಲಕ್ಷ್ಯದಿಂದ ನೀಲಕಂಠ ಗ್ರಾಮದಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಟ್ಟಣದ ಕೂಗಳತೆ ದೂರದಲ್ಲಿರುವ ಈ ಕುಗ್ರಾಮದಲ್ಲಿ ಇಂದಿಗೂ ಸಹ ಮೂಲ ಭೂತ ಸೌಕರ್ಯಗಳಾದ ಕುಡಿಯುವ ನೀರು, ಸ್ವಚ್ಛತೆ, ಚರಂಡಿಗಳ ಸ್ವಚ್ಛತೆ, ಸಮರ್ಪಕ ರಸ್ತೆಗಳು, ಇಲ್ಲದೆ ಅಭಿವೃದ್ಧಿಗಳು ಮರೀಚಿಕೆಯಾಗಿದೆ, ಅರಳೇರಿ ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಈ ಗ್ರಾಮಕ್ಕೆ ಇದುವರೆಗೂ ಭೇಟಿ ನೀಡದೇ ಬೇಜವಾಬ್ದಾರಿಯಿಂದ ನಡೆದುಕೊಂಡು ಮೂಲ ಭೂತ ಸೌಕರ್ಯ ಮರೀಚಿಕೆ ಯಾಗಿದೆ.ಸರ್ಕಾರ ಅನುದಾನ ನೀಡಲಿ
ಕುಡಿಯುವ ನೀರು ಸೇರಿದಂತೆ ಇತರ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಅರಳೇರಿ ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ವಿಫಲರಾಗಿದ್ದಾರೆ. ಈ ಬಗ್ಗೆ ಕೇಳಿದರೆ ಸರ್ಕಾರದಿಂದ ಅನುದಾನ ಬರಬೇಕು ಎನ್ನುತ್ತಾರೆ ಎಂದು ಗ್ರಾಮದ ಮಹಿಳೆಯರು ದಾರಿದ್ದಾರೆ. ಸರ್ಕಾರವು ಮೊದಲು ಅಭಿವೃದ್ದಿ ಕಾಮಗಾರಿಗಳಿಗೆ ಅದರಲ್ಲೂ ಕುಡಿಯುವ ನೀರಿಗೆ ಅನುದಾನ ನೀಡಲಿ ಎಂದು ಒತ್ತಾಯಿಸಿದ್ದಾರೆ. ಗ್ರಾಮ ಪಂಚಾಯಿತಿ ಸದಸ್ಯ ಶಾಮಣ್ಣ ಮಾತನಾಡಿ, ಗ್ರಾಮದಲ್ಲಿ ಕೆಲವು ಮಹಿಳೆಯರು ಕೂಲಿನಾಲಿ ಮಾಡಿಕೊಂಡು ಜೀವನ ನಡೆಸುತ್ತಿದ್ದು ನೀರಿಗಾಗಿ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ, ಶುದ್ಧ ಕುಡಿಯುವ ನೀರಿನ ಸಮಸ್ಯೆ, ಚರಂಡಿಗಳ ಸ್ವಚ್ಛತೆ ಕೈಗೊಳ್ಳುವಂತೆ ಗ್ರಾಮ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಅಧ್ಯಕ್ಷರ ಮತ್ತು ಪಿಡಿಒ ಗಮನಕ್ಕೆ ತಂದರೂ ಯಾವುದೇ ರೀತಿಯ ಪ್ರಯೋಜನವಾಗಿಲ್ಲ ಎಂದು ಆರೋಪಿಸಿದರು.ಗ್ರಾಪಂ ಪಿಡಿಒ ಕ್ರಮ ಜರುಗಿಸಲಿ
ಪಂಚಾಯ್ತಿ ಸದಸ್ಯನಾಗಿ ನನನ್ನು ಗೆಲಿಸಿದ ಜನರ ಸಮಸ್ಯೆಗಳಿಗೆ ಸ್ಪಂದಿಸಲು ಆಗುತ್ತಿಲ್ಲ ಎಂಬ ಬೇಸರ ಇದೆ. ಈಗಲಾದರೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಎಚ್ಚೆತ್ತುಕೊಂಡು ಗ್ರಾಮದಲ್ಲಿ ಸ್ವಚ್ಛತೆ ಇಲ್ಲದೆ ರೋಗರುಜನೆಗಳು ಬಾರದಂತೆ ಮುನ್ನೆಚ್ಚರಿಕೆವಹಿಸಿ ಸ್ವಚ್ಛತೆ ಕಾರ್ಯ ಕೈಗೊಳ್ಳಬೇಕು ಅಲ್ಲದೆ ಬೇಸಿಗೆ ಸಮೀಪಿಸಿರುವುದರಿಂದ ನೀರಿಗೆ ಹಾಹಾಕಾರ ಉಂಟಾಗಿದ್ದು ಜಲಗಾರ ಸಮರ್ಪಕವಾಗಿ ನೀರು ಸರಬರಾಜು ಮಾಡಲು ಸೂಚಿಸುವಂತೆ ಪಂಚಾಯ್ತಿ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.