ಕನ್ನಡಪ್ರಭ ವಾರ್ತೆ ಪಾಂಡವಪುರಜೀವನದಲ್ಲಿ ಸಾಧನೆ ಮಾಡಲು ಪರಿಶ್ರಮಪಟ್ಟರೆ ಗುರಿ ಮುಟ್ಟಬಹುದು ಎಂದು ವೃತ್ತಿಕೌಶಲ್ಯ ತರಬೇತಿ ಮಾರ್ಗದರ್ಶಕ ಶಂಕರ್ ಬೆಳ್ಳೂರು ಹೇಳಿದರು.
ಸಾಧನೆ ಮಾಡಬೇಕು ಎಂಬ ಹಠ, ಛಲ ಹೊಂದಿರುವ ವಿದ್ಯಾರ್ಥಿಗಳಿಗೆ ಸಮಾಜದಲ್ಲಿ ಹಲವು ಅವಕಾಶಗಳು ಇವೆ. ನಾವು ಯಾವ ದಾರಿಯಲ್ಲಿ ಸಾಗಬೇಕು ಎಂಬುದನ್ನು ಆಯ್ಕೆ ಮಾಡಿಕೊಳ್ಳವುದು ನಿಮ್ಮಗಳ ಜವಾಬ್ದಾರಿಯಾಗಿದೆ. ನಾವು ಯಾವುದೇ ಕೆಲಸ ಮಾಡಿದರು ಆತ್ಮವಿಶ್ವಾಸದಿಂದ ಕೆಲಸ ಮಾಡಬೇಕು ಎಂದರು.
ಸಮಾಜದಲ್ಲಿ ಹಲವು ಸಾಧಕರಿದ್ದಾರೆ. ಸಾಧಕರ ಸಾಧನೆಯನ್ನು ಮೈಗೂಡಿಸಿಕೊಂಡು ಮುನ್ನಡೆದು ಕನಸ್ಸುಗಳನ್ನು ನನಸ್ಸು ಮಾಡಿಕೊಳ್ಳುವ ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಸಲಹೆ ನೀಡಿದರು.ಬಿಜಿಎಸ್ ಶಿಕ್ಷಣ ಸಂಸ್ಥೆ ಸಾವಿರಾರು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಸಹಕಾರಿಯಾಗಿದೆ. ಮಕ್ಕಳಿಗೆ ಶಿಕ್ಷಣ ಕೊಡಿಸುವುದರ ಜತೆಗೆ ಹಲವು ಮಾಹಿತಿಗಳನ್ನು ನೀಡುವ ಮೂಲಕ ಮಕ್ಕಳ ಮುಂದಿನ ಉಜ್ವಲ ಭವಿಷ್ಯಕ್ಕೆ ಸಹಕಾರಿಯಾಗುವ ಕೆಲಸ ಮಾಡುತ್ತಿದ್ದಾರೆ ಎಂದು ಬಣ್ಣಿಸಿದರು.
ಈ ವೇಳೆ ಆರ್‌ಟಿಒ ನೌಕರರ ಸಂಘದ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ್, ಡಾ.ರಾಘವೇಂದ್ರ, ಪ್ರಾಂಶುಪಾಲರು, ಮುಖ್ಯಶಿಕ್ಷಕ, ಶಿಕ್ಷರು ಹಾಜರಿದ್ದರು. ಸಾಧನೆಗೆ ವ್ಯಕ್ತಿತ್ವ ವಿಕಸನ ಅಗತ್ಯ: ಶಂಕರ್ ಬೆಳ್ಳೂರು
ಸಾಧನೆಗೆ ಪದವಿ ಪ್ರಮಾಣ ಪತ್ರ, ತಾಂತ್ರಿಕತೆ, ಕೌಶಲ್ಯಗಳು ಸಾಲದು. ಅದರ ಜೊತೆಗೆ ವ್ಯಕ್ತಿತ್ವ ವಿಕಸನವೂ ಅಗತ್ಯ ಎಂದು ರಾಜ್ಯ ವ್ಯಕ್ತಿತ್ವ ವಿಕಸನ ತರಬೇತುದಾರ ಶಂಕರ್ ಬೆಳ್ಳೂರು ತಿಳಿಸಿದರು.ಪಟ್ಟಣದ ಬಿಜಿಎಸ್ ಎಜುಕೇಷನ್ ಸೆಂಟರ್ ಶಾಲಾ ಆವರಣದಲ್ಲಿ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ವ್ಯಕ್ತಿತ್ವ ವಿಕಸನ ತರಬೇತಿ ಹಾಗೂ ಜೀವನದ ಗುರಿಸಾಧನೆ ಕುರಿತು ಕೆರಿಯರ್ ಲಾಂಚರ್ ಕಾರ್ಯಕ್ರಮದ ಹಾಗೂ ವಿದ್ಯಾರ್ಥಿಗಳೊಂದಿಗೆ ಚಿಂತನ ಮಂಥನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಸಮಾಜ ಸೇವಕ ಆರ್‌ಟಿಒ ಮಲ್ಲಿಕಾರ್ಜುನ್ ಮಾತನಾಡಿ, ವಿದ್ಯಾರ್ಥಿಗಳು ಸವಾಲುಗಳನ್ನು ಸ್ವೀಕರಿಸಬೇಕು. ಸಾಧನೆ ಮಾಡಬೇಕೆಂಬ ಮನೋಬಲವಿದ್ದರೆ ಯಾವುದೇ ರೀತಿಯ ಸಮಸ್ಯೆಗಳು ನಮಗೆ ಅಡ್ಡಿಯಾಗಲಾರವು ಎಂದರು.ಹೇಮಗಿರಿ ಬಿಜಿಎಸ್ ಶಾಖಾ ಮಠದ ಪ್ರಧಾನ ಕಾರ್ಯದರ್ಶಿ ಡಾ.ಜೆ.ಎನ್.ರಾಮಕೃಷ್ಣೇಗೌಡ ಮಾತನಾಡಿ, ವಿದ್ಯಾರ್ಥಿಗಳಲ್ಲಿ ವ್ಯಕ್ತಿತ್ವ ವಿಕಸನ, ಭಾಷಾಜ್ಞಾನ, ಕೌಶಲ್ಯಾಭಿವೃದ್ಧಿ ಮೂಲಕ ಸ್ಪರ್ಧೆಗಳಲ್ಲಿ ಭಾಗವಹಿಸುವಂತೆ ಉತ್ತೇಜಿಸಲಾಗುತ್ತಿದೆ ಎಂದರು.