ಹಾಸನದ ರಸ್ತೆಯಲ್ಲಿ ವ್ಹೀಲಿಂಗ್ ಪುಂಡರ ಅಟ್ಟಹಾಸ

KannadaprabhaNewsNetwork |  
Published : Feb 20, 2026, 01:45 AM IST
19ಎಚ್ಎಸ್ಎನ್6 :  ಸ್ಥಳಕ್ಕೆ ಬಂದ ಪೊಲೀಸರು ಅಲ್ಲಿದ್ದ ಯುವಕರಿಗೆ ಎಚ್ಚರಿಕೆ ನೀಡಿದರು. | Kannada Prabha

ಸಾರಾಂಶ

ನಗರದ 80 ಅಡಿ ರಸ್ತೆಯಲ್ಲಿರುವ ಈದ್ಗಾ ಮೈದಾನದ ಎದುರು ಗುರುವಾರ ಬೆಳ್ಳಂಬೆಳಿಗ್ಗೆ ಕೆಲ ಯುವಕರು ಬೈಕ್‌ಗಳಲ್ಲಿ ಅಪಾಯಕಾರಿ ವ್ಹೀಲಿಂಗ್ ಪ್ರದರ್ಶನ ನಡೆಸಿ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ ಘಟನೆ ಗುರುವಾರ ನಡೆದಿದೆ. ತಕ್ಷಣ 112 ಸಹಾಯವಾಣಿಗೆ ಕರೆ ಮಾಡಿದ ಹಿನ್ನೆಲೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಪೊಲೀಸರು ಬರುವುದನ್ನು ಗಮನಿಸಿದ ಯುವಕರು ಅಲ್ಲಿಂದ ಪರಾರಿಯಾಗಿದ್ದಾರೆ. ಈ ವೇಳೆ ಗುಂಪು ಗುಂಪಾಗಿ ನಿಂತು ವೀಕ್ಷಿಸುತ್ತಿದ್ದವರನ್ನು ಪೊಲೀಸರು ಚದುರಿಸಿ ಪರಿಸ್ಥಿತಿ ತಿಳಿಗೊಳಿಸಿದರು.

ಕನ್ನಡಪ್ರಭ ವಾರ್ತೆ ಹಾಸನ

ನಗರದ 80 ಅಡಿ ರಸ್ತೆಯಲ್ಲಿರುವ ಈದ್ಗಾ ಮೈದಾನದ ಎದುರು ಗುರುವಾರ ಬೆಳ್ಳಂಬೆಳಿಗ್ಗೆ ಕೆಲ ಯುವಕರು ಬೈಕ್‌ಗಳಲ್ಲಿ ಅಪಾಯಕಾರಿ ವ್ಹೀಲಿಂಗ್ ಪ್ರದರ್ಶನ ನಡೆಸಿ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ ಘಟನೆ ಗುರುವಾರ ನಡೆದಿದೆ.

ಬೆಳಗ್ಗೆ ಸುಮಾರು ೬ ಗಂಟೆ ಸಮಯದಲ್ಲಿ ಏಳೆಂಟು ಮಂದಿ ಯುವಕರು ರಸ್ತೆಯ ಮಧ್ಯದಲ್ಲೇ ಬೈಕ್ ಎತ್ತಿ ಸಾಹಸ ಪ್ರದರ್ಶನ ಮಾಡುತ್ತಾ, ಅದನ್ನು ಮೊಬೈಲ್‌ನಲ್ಲಿ ವಿಡಿಯೋ ಚಿತ್ರೀಕರಣ ಕೂಡ ಮಾಡುತ್ತಿದ್ದರು. ಈ ದೃಶ್ಯಗಳನ್ನುಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡುವ ಉದ್ದೇಶದಿಂದಲೇ ಇಂತಹ ಕೃತ್ಯ ನಡೆಸಲಾಗಿದೆ. ಈ ರೀತಿಯ ಚಟುವಟಿಕೆಗಳಿಂದ ಕೆಲಸಕ್ಕೆ ತೆರಳುತ್ತಿದ್ದ ಸಾರ್ವಜನಿಕರು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಬೆಳಗಿನ ನಡಿಗೆಗೆ ಬಂದ ನಾಗರಿಕರು ಭಯಭೀತರಾಗಿದ್ದಾರೆ.

ವ್ಹೀಲಿಂಗ್ ಮಾಡುವ ವೇಳೆ ಬೈಕ್ ನಿಯಂತ್ರಣ ತಪ್ಪಿದರೆ ಸಂಭವಿಸಬಹುದಾದ ಅಪಘಾತದಿಂದ ಅಮಾಯಕರ ಜೀವಕ್ಕೂ ಅಪಾಯ ಉಂಟಾಗಬಹುದೆಂಬ ಆತಂಕ ವ್ಯಕ್ತವಾಗಿದೆ. ೮೦ ಫೀಟ್ ರಸ್ತೆ ಮಾತ್ರವಲ್ಲದೆ ಎಂ.ಜಿ. ರಸ್ತೆ, ರಿಂಗ್ ರಸ್ತೆ ಹಾಗೂ ನಗರದ ಹೊರವಲಯ ಪ್ರದೇಶಗಳಲ್ಲಿ ಸಹ ಇಂತಹ ವ್ಹೀಲಿಂಗ್ ಹಾವಳಿ ಹೆಚ್ಚುತ್ತಿರುವ ಬಗ್ಗೆ ಸಾರ್ವಜನಿಕರು ದೂರು ನೀಡಿದ್ದಾರೆ. ತಕ್ಷಣ 112 ಸಹಾಯವಾಣಿಗೆ ಕರೆ ಮಾಡಿದ ಹಿನ್ನೆಲೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಪೊಲೀಸರು ಬರುವುದನ್ನು ಗಮನಿಸಿದ ಯುವಕರು ಅಲ್ಲಿಂದ ಪರಾರಿಯಾಗಿದ್ದಾರೆ. ಈ ವೇಳೆ ಗುಂಪು ಗುಂಪಾಗಿ ನಿಂತು ವೀಕ್ಷಿಸುತ್ತಿದ್ದವರನ್ನು ಪೊಲೀಸರು ಚದುರಿಸಿ ಪರಿಸ್ಥಿತಿ ತಿಳಿಗೊಳಿಸಿದರು.

ಇದೇ ವೇಳೆ ಅಜಾದ್ ಟಿಪ್ಪು ಸಂಘರ್ಷ ಸಮಿತಿ ಜಿಲ್ಲಾಧ್ಯಕ್ಷ ಮುಬಶಿರ್‌ ಅಹಮದ್ ಹಾಗೂ ಜೈಭೀಮ್ ಬ್ರಿಗೇಡ್ ಜಿಲ್ಲಾಧ್ಯಕ್ಷ ರಾಜೇಶ್ ಮಾಧ್ಯಮದೊಂದಿಗೆ ಮಾತನಾಡಿ, ವ್ಹೀಲಿಂಗ್ ಎಂಬುದು ಅಪರಾಧವಾಗಿದೆ. ಇಂತಹ ಕೃತ್ಯಗಳಿಂದ ಸಂಭವಿಸುವ ಅಪಘಾತಗಳಿಗೆ ಕಠಿಣ ಕಾನೂನು ಕ್ರಮ ಜರುಗಿಸಿ ಎಚ್ಚರಿಕೆ ಕೊಡಬೇಕಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಿದ್ಧಿ ಪಡೆಯುವ ಉದ್ದೇಶದಿಂದ ಜೀವದೊಂದಿಗೆ ಆಟವಾಡುವ ಪ್ರವೃತ್ತಿ ತಕ್ಷಣ ನಿಲ್ಲಬೇಕೆಂದು ಒತ್ತಾಯಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮತ್ತೆ ಆತಂಕ ಮೂಡಿಸಿದ ಚಿರತೆ ಹೆಜ್ಜೆ!
ಶಿಕ್ಷಣ ದೇಶದ ಅಭಿವೃದ್ಧಿಗೆ ಅಡಿಪಾಯ: ಡಾ. ಪ್ರಾನ್ಸಿಸ್ ಮರಿಯಾ