ನಾರಿ ಶಕ್ತಿ ವಂದನ್ ಯೋಜನೆಯಿಂದ ಮಹಿಳಾ ಸಬಲೀಕರಣ

KannadaprabhaNewsNetwork |  
Published : Feb 14, 2024, 02:18 AM IST
ಪೋಟೋ : 13ಸಿಕೆಡಿ1ಯಕ್ಸಂಬಾ ಪಟ್ಟಣದ  ಬೀರೇಶ್ವರ ಭವನದಲ್ಲಿ ಶಕ್ತಿ ವಂದನಾ ಕಾರ್ಯಕ್ರಮವನ್ನು ಸಸಿಗೆ ನೀರುಣಿಸುವ ಮೂಲಕ ಶಶಿಕಲಾ ಜೊಲ್ಲೆ, ಸತೀಶ ಅಪ್ಪಾಜಿಗೊಳ ಇನ್ನುಳಿದವರು ಚಾಲನೆ ನೀಡಿದರು.  | Kannada Prabha

ಸಾರಾಂಶ

ಮಹಿಳೆಯರ ಸಬಲೀಕರಣಕ್ಕಾಗಿ ತಂದಿರುವ ಯೋಜನೆಗಳನ್ನು ಗ್ರಾಮದ ಪ್ರತಿ ಮಹಿಳೆಯರಿಗೆ ಮುಟ್ಟಿಸುವ ಕಾರ್ಯವನ್ನು ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಮಾಡಬೇಕು ಎಂದು ಕರೆ ನೀಡಿದರು.

ಕನ್ನಡಪ್ರಭ ವಾರ್ತೆ ಚಿಕ್ಕೋಡಿ

ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಾರಿ ಶಕ್ತಿ ವಂದನ ಯೋಜನೆ ಪ್ರತಿ ರಾಜ್ಯದಲ್ಲಿನ ಸ್ವ-ಸಹಾಯ ಸಂಘಗಳ ನಗರ ಮತ್ತು ಗ್ರಾಮೀಣ ಭಾಗದ ಸ್ತ್ರೀಯರಿಗೆ ( ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿ ವ್ಯಾಪ್ತಿಯ) ಕೇಂದ್ರದ ಹಲವಾರು ಯೋಜನೆಗಳನ್ನು ತಲುಪಿಸುವುದು ಹಾಗೂ ತಿಳುವಳಿಕೆ ಹೇಳುವ ಕಾರ್ಯಕ್ರಮ ಎಂದು ನಿಪ್ಪಾಣಿ ಮತಕ್ಷೇತ್ರದ ಶಾಸಕಿ ಶಶಿಕಲಾ ಜೊಲ್ಲೆ ಹೇಳಿದರು.

ಅವರು ಯಕ್ಸಂಬಾ ಪಟ್ಟಣದ ಬೀರೇಶ್ವರ ಭವನದಲ್ಲಿ ಸೋಮವಾರ ನಡೆದ ಬಿಜೆಪಿ ಚಿಕ್ಕೋಡಿ ಜಿಲ್ಲೆ ವತಿಯಿಂದ ಹಮ್ಮಿಕೊಂಡಿದ್ದ ಶಕ್ತಿ ವಂದನ್ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿ, ಮೋದಿ ಅವರ ಹಲವಾರು ಯೋಜನೆಗಳು ಸ್ವ-ಉದ್ಯೋಗ ಕೈಗೊಳ್ಳಲು ಸಹಕಾರಿಯಾಗಲಿದೆ. ಮಹಿಳೆಯರ ಸಬಲೀಕರಣಕ್ಕಾಗಿ ತಂದಿರುವ ಯೋಜನೆಗಳನ್ನು ಗ್ರಾಮದ ಪ್ರತಿ ಮಹಿಳೆಯರಿಗೆ ಮುಟ್ಟಿಸುವ ಕಾರ್ಯವನ್ನು ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಮಾಡಬೇಕು ಎಂದು ಕರೆ ನೀಡಿದರು.

ಬಳಿಕ ಅಣ್ಣಾಸಾಹೇಬ ಜೊಲ್ಲೆ ಮಾತನಾಡಿ, ನರೇಂದ್ರ ಮೋದಿಯವರು ಕಳೆದ 9 ವರ್ಷಗಳಲ್ಲಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು, ಅವುಗಳನ್ನು ಜನರಿಗೆ ಮುಟ್ಟಿಸುವ ಕಾರ್ಯ ಕಾರ್ಯಕರ್ತರು ಮಾಡಬೇಕೆಂದರು.

ಜಿಲ್ಲಾಧ್ಯಕ್ಷ ಸತೀಶ ಅಪ್ಪಾಜಿಗೊಳ ಹಾಗೂ ನಿಂಗಪ್ಪ ಕೋಕಲೆ ಮಾತನಾಡಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಮೃತ ಕುಲಕರ್ಣಿ, ಮಂಡಲ ಅಧ್ಯಕ್ಷ ಸಂಜಯ ಪಾಟೀಲ, ಪಕ್ಷದ ಪದಾಧಿಕಾರಿಗಳು ಮಹಿಳೆಯರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹುಬ್ಬಳ್ಳಿಯಲ್ಲಿ ಸ್ನೇಹಿತನಿಂದಲೇ ಯುವ ಕಾಂಗ್ರೆಸ್‌ ನಾಯಕ ಹತ್ಯೆ?
ಫಿಸಿಯೋಥೆರಪಿಗೆ ವಿಶ್ವಾದ್ಯಂತ ವಿಫುಲ ಅವಕಾಶ : ಯುಟಿ ಖಾದರ್‌