ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ‘ಒಂದು ಭೂಮಿ, ಒಂದು ಆರೋಗ್ಯಕ್ಕಾಗಿ ಯೋಗ’ ಎಂಬ ಪರಿಕಲ್ಪನೆಯಡಿ ‘ಯೋಗ ವಿತ್ ಯೋಧ’ ಕಾರ್ಯಕ್ರಮ ದ.ಕ. ಸಂಸದ ಕ್ಯಾ.ಬ್ರಿಜೇಶ್ ಚೌಟ ನೇತೃತ್ವದಲ್ಲಿ ಶನಿವಾರ ಸೋಮೇಶ್ವರದ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ನಡೆಯಿತು.
ಕನ್ನಡಪ್ರಭ ವಾರ್ತೆ ಉಳ್ಳಾಲ
ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ‘ಒಂದು ಭೂಮಿ, ಒಂದು ಆರೋಗ್ಯಕ್ಕಾಗಿ ಯೋಗ’ ಎಂಬ ಪರಿಕಲ್ಪನೆಯಡಿ ‘ಯೋಗ ವಿತ್ ಯೋಧ’ ಕಾರ್ಯಕ್ರಮ ದ.ಕ. ಸಂಸದ ಕ್ಯಾ.ಬ್ರಿಜೇಶ್ ಚೌಟ ನೇತೃತ್ವದಲ್ಲಿ ಶನಿವಾರ ಸೋಮೇಶ್ವರದ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ನಡೆಯಿತು.ಕಾರ್ಯಕ್ರಮದಲ್ಲಿ ಮಾತನಾಡಿದ ಸಂಸದ, ಕಳೆದ ವರ್ಷದಿಂದ ಯೋಗ ವಿದ್ ಯೋಧ ಎಂಬ ಹೆಸರಿನಿಂದ ಈ ಕಾರ್ಯಕ್ರಮವನ್ನು ಮಾಡುತ್ತ ಬಂದಿದ್ದೇವೆ. ಜಿಲ್ಲೆಯಲ್ಲಿ ಪ್ರವಾಸೋದ್ಯಮವು ಬೆಳೆಯಬೇಕೆನ್ನುವ ದೃಷ್ಟಿಯಲ್ಲಿ ವಿಶ್ವ ಯೋಗ ದಿನದಂದು ಪ್ರಮುಖ ಸಮುದ್ರ ತೀರಗಳಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.
ಯೋಗ ತರಬೇತುದಾರೆ ಶ್ರದ್ಧಾ ಸಂದೇಶ್ ರೈ ಅವರ ಮಾರ್ಗದರ್ಶನದಲ್ಲಿ ಸಾಮೂಹಿಕ ಯೋಗಾಭ್ಯಾಸ ನಡೆಯಿತು. ನಿವೃತ್ತ ಯೋಧರು, ವಿವಿಧ ಕ್ಷೇತ್ರಗಳ ಮುಖಂಡರು, ಜೀವರಕ್ಷಕರು, ಕ್ರೀಡಾ ಸಾಧಕರು, ಸಾರ್ವಜನಿಕರು ಯೋಗಾಭ್ಯಾಸ ನಡೆಸಿದರು.
ಸೋಮನಾಥ ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರವೀಂದ್ರನಾಥ ರೈ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಉಪಾಧ್ಯಕ್ಷ ಕೆ.ರವೀಂದ್ರ ಶೆಟ್ಟಿ ಉಳಿದೊಟ್ಟು, ಕ್ಷೇತ್ರಾಧ್ಯಕ್ಷ ಜಗದೀಶ ಆಳ್ವ ಕುವೆತ್ತಬೈಲು, ಪ್ರ.ಕಾ.ದಯಾನಂದ ತೊಕ್ಕೊಟ್ಟು, ಮುಖಂಡರಾದ ಸಂತೋಷ್ ಕುಮಾರ್ ರೈ ಬೋಳಿಯಾರು, ಬಿಜೆಪಿ ಯುವ ಮೋರ್ಚಾದ ಜಿಲ್ಲಾಧ್ಯಕ್ಷ ನಂದನ್ ಮಲ್ಯ, ಉಪಾಧ್ಯಕ್ಷ ನಿಶಾಂತ್, ಮಂಡಲ ಅಧ್ಯಕ್ಷ ಮುರಳಿ ಕೊಣಾಜೆ, ಸೋಮೇಶ್ವರ ಪುರಸಭಾ ಉಪಾಧ್ಯಕ್ಷ ರವಿಶಂಕರ್ ಸೋಮೇಶ್ವರ, ಸದಸ್ಯ ದೀಪಕ್ ಪಿಲಾರು ಮೊದಲಾದವರು ಉಪಸ್ಥಿತರಿದ್ದರು.
ಸಾಹಿತಿ ಡಾ.ಅರುಣ್ ಉಳ್ಳಾಲ್, ಯೋಗ ಪ್ರಾರ್ಥನೆ ನೆರವೇರಿಸಿದರು. ಆರ್.ಜೆ. ಅಭಿಷೇಕ್ ಶೆಟ್ಟಿ ನಿರೂಪಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.