ಕನ್ನಡಪ್ರಭ ವಾರ್ತೆ ಹಾಸನ
ನಂತರ ಉದ್ದೇಶಿಸಿ ಮಾತನಾಡಿದ ಅವರು, ಇಂದಿನ ಯುವಜನತೆ ಮೊಬೈಲ್ ಬಳಸುವುದರಿಂದ ಆಗುವ ಅನಾನುಕೂಲಗಳು ಮತ್ತು ಹಿಂದಿನ ಯುವಜನತೆ ಅದನ್ನು ಒಳ್ಳೆಯ ಉದ್ದೇಶಕ್ಕಾಗಿ ಬಳಸಿಕೊಳ್ಳಬೇಕೆಂದು ಸಲಹೆ ನೀಡಿದರು. ವಿದ್ಯಾರ್ಥಿಗಳು ಕಷ್ಟಪಟ್ಟು ಓದುವುದರ ಮುಖಾಂತರ ತಮ್ಮ ಗುರಿಗಳನ್ನು ಸಾಧಿಸಲು ಸಾಧ್ಯವಿದೆ. ಪೋಷಕರು ಮಕ್ಕಳ ನಡವಳಿಕೆ ಮೇಲೆ ನಿಗಾ ವಹಿಸುವ ಅವಶ್ಯಕತೆ ಇದೆ ಎಂದು ಎಂದು ಕಿವಿಮಾತು ಹೇಳಿದರು. ಇತ್ತೀಚಿಗೆ ನಡೆಯುತ್ತಿರುವ ಸೈಬರ್ ಕ್ರೈಂಗಳ ಬಗ್ಗೆ ಯುವಜನತೆಗೆ ಕಾರ್ಯಕ್ರಮದಲ್ಲ್ಲಿ ತಿಳಿಸಿದರು. ಗುರಿ ಸಾಧಿಸಲು ಕಾರಣಗಳು ನೆಪವಾಗಬಾರದು, ಗುರಿಯನ್ನು ಬೆನ್ನು ಹತ್ತಿ ಗುರಿಮುಟ್ಟುವ ಕಡೆ ಗಮನ ಹರಿಸಿದರೆ ಯಶಸ್ಸು ತಾನಾಗಿ ದೊರೆಯುತ್ತದೆ ಎಂದು ಹೇಳಿದರು.
ಮತ್ತೊಬ್ಬ ಅತಿಥಿಗಳಾದ ಬಿಎಸ್‌ಎಸ್ ಮೈಕ್ರೋ ಫೈನಾನ್ಸ್ ಲಿಮಿಟೆಡ್ ಸಿಒಒ ಎಸ್. ಪಂಚಾಕ್ಷರಿ ಈ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ, ಮಹಿಳೆಯರು ಅವಶ್ಯಕತೆಗೆ ತಕ್ಕಷ್ಟು ಸಾಲವನ್ನು ಪಡೆದು ಮರುಪಾವತಿ ಶಿಸ್ತನ್ನು ಕಾಪಾಡಿಕೊಳ್ಳಬೇಕು ಮತ್ತು ಬಿ.ಎಸ್.ಎಸ್. ಮೈಕ್ರೋ ಫೈನಾನ್ಸ್ ಕೇವಲ ಸಾಲ ಸೌಲಭ್ಯವನ್ನು ಮಾತ್ರವಲ್ಲದೆ ಸಂಸ್ಥೆಯು ಎಲ್ಲಾ ಕಡೆಗೂ ಸಮಾಜಮುಖಿ ಕಾರ್ಯಗಳಾದ ಶಾಲಾ ಅಭಿವೃದ್ಧಿ ಕಾರ್ಯಕ್ರಮಗಳು, ಪ್ರವಾಹ ಪರಿಸ್ಥಿತಿಗಳು, ಬರಗಾಲ ಪರಿಸ್ಥಿತಿಗಳಲ್ಲಿ ಮತ್ತು ಸರ್ಕಾರಿ ಶಾಲೆಗಳಿಗೆ ಕಾಂಪೌಂಡ್ ವ್ಯವಸ್ಥೆ ಪೀಠೋಪಕರಣಗಳ ವ್ಯವಸ್ಥೆ, ಆಧುನಿಕ ಶಿಕ್ಷಣ ನೀಡಲು ಕಂಪ್ಯೂಟರ್ ಒದಗಿಸುವುದು ಸೇರಿದಂತೆ ಇನ್ನೂ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವುದಾಗಿ ತಿಳಿಸಿದರು.ಬಿ.ಎಸ್.ಎಸ್. ಸಂಸ್ಥೆಯು ತನ್ನ ಸಿ.ಎಸ್.ಆರ್. ಇನೆಟಿಟಿವ್ ಅಡಿಯಲ್ಲಿ ಆರೋಗ್ಯ ಶಿಕ್ಷಣ, ಹೈನುಗಾರಿಕೆ ಎಂಬ ಮೂರು ಅಂಶಗಳಲ್ಲಿ ಕಾರ್ಯ ನಿರ್ವಹಿಸುತ್ತಿದೆ. ಅಪೋಲೋ ಟೆಲಿ ಮೆಡಿಷನ್ ನೆಟ್ವರ್ಕ್ ಪೌಂಡೆಷನ್ ಮುಖಾಂತರ ಬಿಹಾರ ಮಹರಾಷ್ಟ್ರ ಕರ್ನಾಟಕದಲ್ಲಿ ಐದು ಸಂಚಾರಿ ಆರೋಗ್ಯ ಸೇವೆ ಮಾಡುತ್ತಿದೆ. ಸುಮಾರು ವರ್ಷಗಳಿಂದ ಬಿಹಾರ, ಮಹರಾಷ್ಟ್ರ, ತಮಿಳುನಾಡು, ಕರ್ನಾಟಕದಲ್ಲಿ ಈ ರಾಜ್ಯಗಳಲ್ಲಿ ಸರ್ಕಾರಿ ಕಟ್ಟಡ ಅಭಿವೃದ್ಧಿ ಹಾಗೂ ಸರ್ಕಾರಿ ಶಾಲೆಗಳಿಗೆ ಪಿಠೋಪಕರಣಗಳನ್ನು ನೀಡುವುದು ಮತ್ತು ಸರ್ಕಾರಿ ಶಾಲೆಗಳನ್ನು ನವೀಕರಿಸುವುದು, ತಂತ್ರಜ್ಞಾನವನ್ನು ಅಳವಡಿಸುವುದು ಹಾಗೂ ವಿದ್ಯಾರ್ಥಿ ವೇತನ ನೀಡುತ್ತಾ ಬಡ ಮಕ್ಕಳು ವಿದ್ಯಾಭ್ಯಾಸಕ್ಕಾಗಿ ಶ್ರಮಿಸುತ್ತಿದೆ ಎಂದರು.