ತುಂಗಭದ್ರೆಯಲ್ಲಿ 1.12 ಲಕ್ಷ ಕ್ಯು. ನೀರು: ನೆರೆ ಪರಿಸ್ಥಿತಿ

KannadaprabhaNewsNetwork |  
Published : Jul 28, 2025, 12:31 AM IST
ಕ್ಯಾಪ್ಷನ27ಕೆಡಿವಿಜಿ46 ಜಿ.ಎಂ.ಗಂಗಾಧರ ಸ್ವಾಮಿ | Kannada Prabha

ಸಾರಾಂಶ

ಶಿವಮೊಗ್ಗ ಮತ್ತು ಚಿಕ್ಕಮಗಳೂರು ಭಾಗದಲ್ಲಿ ಹೆಚ್ಚಿನ ಮಳೆ ಆಗುತ್ತಿರುವುದರಿಂದ ತುಂಗಭದ್ರಾ ನದಿಯಲ್ಲಿ 1,12,170 ಕ್ಯುಸೆಕ್‌ ನೀರು ಅಪಾಯಮಟ್ಟದಲ್ಲಿ ಹರಿಯುತ್ತಿದೆ. ಇದರಿಂದ ಜನರು ನದಿಪಾತ್ರದಲ್ಲಿ ಎಚ್ಚರಿಕೆಯಿಂದ ಇರಬೇಕೆಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ಸೂಚನೆ ನೀಡಿದ್ದಾರೆ.

- ಹೊನ್ನಾಳಿ, ನ್ಯಾಮತಿ, ಹರಿಹರ ತಾಲೂಕುಗಳಲ್ಲಿ ಎಚ್ಚರಿಕೆಯಿಂದಿರಲು ಡಿಸಿ ಸೂಚನೆ

- - -

- ತುರ್ತು ಸಂದರ್ಭಗಳಲ್ಲಿ ಸಾರ್ವಜನಿಕರ ಸಹಾಯಕ್ಕಾಗಿ ಸಹಾಯವಾಣಿಗಳ ಸ್ಥಾಪನೆ

- ಹೊನ್ನಾಳಿಯ ಬಾಲರಾಜ್‌ ಘಾಟ್ ಬಳಿ ಅಂಬೇಡ್ಕರ್ ಭವನದಲ್ಲಿ ಕಾಳಜಿ ಕೇಂದ್ರ

- 8 ಕುಟುಂಬಗಳ 33 ಜನರ ಸ್ಥಳಾಂತರ, ಊಟೋಪಚಾರ- ಮೂಲಸೌಕರ್ಯ- ವೈದ್ಯಕೀಯ ಸೇವೆ

- ಹರಿಹರದ ಗಂಗಾನಗರ ಬಳಿ ಎಪಿಎಂಸಿ ಭವನ, ನ್ಯಾಮತಿಯ ಚೀಲೂರಿನಲ್ಲೂ ಕಾಳಜಿ ಕೇಂದ್ರಕ್ಕೆ ಸಿದ್ಧತೆ

- - -

ಕನ್ನಡಪ್ರಭ ವಾರ್ತೆ ದಾವಣಗೆರೆ

ಶಿವಮೊಗ್ಗ ಮತ್ತು ಚಿಕ್ಕಮಗಳೂರು ಭಾಗದಲ್ಲಿ ಹೆಚ್ಚಿನ ಮಳೆ ಆಗುತ್ತಿರುವುದರಿಂದ ತುಂಗಭದ್ರಾ ನದಿಯಲ್ಲಿ 1,12,170 ಕ್ಯುಸೆಕ್‌ ನೀರು ಅಪಾಯಮಟ್ಟದಲ್ಲಿ ಹರಿಯುತ್ತಿದೆ. ಇದರಿಂದ ಜನರು ನದಿಪಾತ್ರದಲ್ಲಿ ಎಚ್ಚರಿಕೆಯಿಂದ ಇರಬೇಕೆಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ಸೂಚನೆ ನೀಡಿದ್ದಾರೆ.

ತುಂಗಾ ಜಲಾಶಯದಿಂದ 68,599 ಕ್ಯುಸೆಕ್‌ ನೀರನ್ನು ನದಿಗೆ ಬಿಡಲಾಗಿದೆ ಮತ್ತು ಭದ್ರಾ ಜಲಾಶಯ ಭರ್ತಿಯಾಗುವ ಹಂತದಲ್ಲಿದ್ದು, 39017 ಕ್ಯುಸೆಕ್‌ ನೀರನ್ನು ನದಿಗೆ ಬಿಡಲಾಗಿದೆ. ಪ್ರಸ್ತುತ ತುಂಗಭದ್ರಾ ನದಿಯಲ್ಲಿ ಅಪಾಯಮಟ್ಟ ಮೀರಿದ್ದು, 1,12,170 ಕ್ಯುಸೆಕ್‌ ನೀರು ಹರಿಯುತ್ತಿದೆ. ಇದರಿಂದಾಗಿ ಹೊನ್ನಾಳಿ, ನ್ಯಾಮತಿ ಹಾಗೂ ಹರಿಹರ ತಾಲೂಕುಗಳ ನದಿ ಪಾತ್ರದ ಕೆಲವೆಡೆ ಪ್ರವಾಹ ಪರಿಸ್ಥಿತಿ ಉಂಟಾಗಿದೆ.

ಮುಂಜಾಗ್ರತಾ ಕ್ರಮವಾಗಿ ಹೊನ್ನಾಳಿ ಪಟ್ಟಣದ ನದಿ ತೀರದ ಬಾಲರಾಜ್‌ ಘಾಟ್ ಪ್ರದೇಶದ ಬಳಿ ಅಂಬೇಡ್ಕರ್ ಭವನದಲ್ಲಿ ಕಾಳಜಿ ಕೇಂದ್ರ ತೆರೆಯಲಾಗಿದೆ. 8 ಕುಟುಂಬದ 33 ಜನರನ್ನು ಸ್ಥಳಾಂತರ ಮಾಡಿ ಸಂತ್ರಸ್ತರಿಗೆ ಊಟೋಪಚಾರ ಹಾಗೂ ಅಗತ್ಯ ಮೂಲ ಸೌಕರ್ಯ ಹಾಗೂ ವೈದ್ಯಕೀಯ ಸೇವೆಗಳನ್ನು ಒದಗಿಸಲಾಗಿದೆ. ಹರಿಹರ ಪಟ್ಟಣದ ಗಂಗಾನಗರ ಬಳಿ ಎಪಿಎಂಸಿ ಭವನದಲ್ಲಿ ಹಾಗೂ ನ್ಯಾಮತಿ ತಾಲೂಕು ಚೀಲೂರು ಗ್ರಾಮದಲ್ಲಿ ಕಾಳಜಿ ಕೇಂದ್ರ ತೆರೆಯಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದಿದ್ದಾರೆ.

ಈ ಹಿನ್ನೆಲೆ ಸುರಕ್ಷತಾ ದೃಷ್ಟಿಯಿಂದ ಜನ ಹಾಗೂ ಜಾನುವಾರುಗಳು ನದಿಗೆ ಇಳಿಯುವುದು, ಸಾರ್ವಜನಿಕರು ಹಾಗೂ ಪ್ರವಾಸಿಗರು ನದಿಯ ಬಳಿ ಸೆಲ್ಫಿ ತೆಗೆದುಕೊಳ್ಳವುದನ್ನು ನಿಷೇಧಿಸಲಾಗಿದೆ. ತುರ್ತು ಸಂದರ್ಭಗಳಲ್ಲಿ ಸಾರ್ವಜನಿಕರ ಸಹಾಯಕ್ಕಾಗಿ ಸಹಾಯವಾಣಿಗಳನ್ನು ಸಹ ತೆರೆಯಲಾಗಿದೆ. ಜಿಲ್ಲಾಧಿಕಾರಿ ಕಾರ್ಯಾಲಯ, ದಾವಣಗೆರೆ: 08192-234034 ಅಥವಾ 1077 ಎಸ್‌ಡಿಆರ್‌ಎಫ್ ಘಟಕ, ದೇವರಬೆಳೆಕೆರೆ- 7411308591, ಅಗ್ನಿಶಾಮಕ ಇಲಾಖೆ- ದಾವಣಗೆರೆ- 08192-258101 ಅಥವಾ 112, ಮಹಾನಗರ ಪಾಲಿಕೆ ದಾವಣಗೆರೆ- 08192-234444 ಹಾಗೂ 82772- 34444 (ವಾಟ್ಸಪ್‌) ಸ್ಮಾರ್ಟ್ ಸಿಟಿ, ದಾವಣಗೆರೆ, 180042-56020, ತಾಲೂಕು ಕಚೇರಿ, ದಾವಣಗೆರೆ 90363-96101, ತಾಲೂಕು ಕಚೇರಿ, ಹರಿಹರ: 08192- 272959, ತಾಲೂಕು ಕಚೇರಿ, ಜಗಳೂರು: 08196- 227242, ತಾಲೂಕು ಕಚೇರಿ, ಹೊನ್ನಾಳಿ- 08188-252108, ತಾಲೂಕು ಕಚೇರಿ, ನ್ಯಾಮತಿ: 8073951245, ತಾಲೂಕು ಕಚೇರಿ, ಚನ್ನಗಿರಿ: 08188-295518 ಇಲ್ಲಿ ಸಹಾಯವಾಣಿ ಕೇಂದ್ರಗಳಿಗೆ ಕರೆ ಮಾಡಲು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

- - -

-27ಕೆಡಿವಿಜಿ46: ಜಿ.ಎಂ. ಗಂಗಾಧರ ಸ್ವಾಮಿ

PREV

Recommended Stories

ರಾಜ್ಯದಲ್ಲಿ 3 ದಿನ ಭಾರೀ ಮಳೆ: 15 ಜಿಲ್ಲೆಗೆ ಯೆಲ್ಲೋ ಅಲರ್ಟ್‌
ವರ್ಗಾವಣೆ ಬಳಿಕ ಪೊಲೀಸರು ವರದಿ ಮಾಡಿಕೊಳ್ಳದಿದ್ದರೆ ಸಂಬಳ ಕಟ್‌ : ವೈದ್ಯಕೀಯ ರಜೆಗೆ ಬ್ರೇಕ್