ಶಕ್ತಿ ಯೋಜನೆಯಡಿ ಭಟ್ಕಳ ಘಟಕದಿಂದ 1.15 ಕೋಟಿ ಮಹಿಳೆಯರು ಪ್ರಯಾಣ

KannadaprabhaNewsNetwork |  
Published : Jul 15, 2025, 01:00 AM IST
ಪೊಟೊ ಪೈಲ್ : 14ಬಿಕೆಲ್1 | Kannada Prabha

ಸಾರಾಂಶ

ಶಕ್ತಿ ಯೋಜನೆ ಫಲಾನುಭವಿಗಳ ಸಂಖ್ಯೆ 500 ಕೋಟಿ ದಾಟಿದ ಹಿನ್ನೆಲೆಯಲ್ಲಿ ಭಟ್ಕಳ ಬಸ್ ನಿಲ್ದಾಣದಲ್ಲಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಮತ್ತು ಕಾಂಗ್ರೆಸ್‌ನಿಂದ ಸಂಭ್ರಮಾಚರಣೆ ನಡೆಸಿ, ಪ್ರಯಾಣಿಕರಿಗೆ ಮತ್ತು ಸಾರ್ವಜನಿಕರಿಗೆ ಸಿಹಿ ಹಂಚಲಾಯಿತು.

ಭಟ್ಕಳ: ಶಕ್ತಿ ಯೋಜನೆ ಫಲಾನುಭವಿಗಳ ಸಂಖ್ಯೆ 500 ಕೋಟಿ ದಾಟಿದ ಹಿನ್ನೆಲೆಯಲ್ಲಿ ಇಲ್ಲಿನ ಬಸ್ ನಿಲ್ದಾಣದಲ್ಲಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಮತ್ತು ಕಾಂಗ್ರೆಸ್‌ನಿಂದ ಸಂಭ್ರಮಾಚರಣೆ ನಡೆಸಿ, ಪ್ರಯಾಣಿಕರಿಗೆ ಮತ್ತು ಸಾರ್ವಜನಿಕರಿಗೆ ಸಿಹಿ ಹಂಚಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ರಾಜು ನಾಯ್ಕ ಕೊಪ್ಪ, ಶಕ್ತಿ ಯೋಜನೆಯಿಂದ ಮಹಿಳೆಯರಿಗೆ ಸಾಕಷ್ಟು ಪ್ರಯೋಜನವಾಗಿದೆ. ಭಟ್ಕಳ ಘಟಕದಲ್ಲಿ 1.15 ಕೋಟಿ ಮಹಿಳೆಯರು ಶಕ್ತಿ ಯೋಜನೆಯನ್ನು ಸದುಪಯೋಗಪಡಿಸಿಕೊಂಡಿದ್ದಾರೆ. ಸರ್ಕಾರ ಭಟ್ಕಳ ಘಟಕವೊಂದಕ್ಕೆ ₹42 ಕೋಟಿಯನ್ನು ಈ ಯೋಜನೆಗಾಗಿ ವ್ಯಯ ಮಾಡಿದೆ. ಭಟ್ಕಳ ಘಟಕದಿಂದ ಪ್ರತಿ ತಿಂಗಳು 4 ಲಕ್ಷಕ್ಕೂ ಅಧಿಕ ಮಹಿಳೆಯರು ಪ್ರಯಾಣಿಸಿ ಯೋಜನೆಯ ಸದುಪಯೋಗಪಡಿಸಿಕೊಂಡಿದ್ದಾರೆ ಎಂದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೆಂಕಟೇಶ ನಾಯ್ಕ ಮಾತನಾಡಿ, ಸರ್ಕಾರದ ಗ್ಯಾರಂಟಿ ಯೋಜನೆಯಿಂದ ರಾಜ್ಯದ ಜನರಿಗೆ ಒಳ್ಳೆಯದಾಗಿದೆ. ಶಕ್ತಿ ಯೋಜನೆಯನ್ನು ಮಹಿಳೆಯ ಸದುಪಯೋಗಪಡಿಸಿಕೊಂಡಿದ್ದಾರೆ ಎಂದರು.

ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸುರೇಶ ನಾಯ್ಕ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ನಯನಾ ನಾಯ್ಕ, ಪ್ರಮುಖರಾದ ಶಿವಾನಂದ ಹೆಬ್ಬಾರ, ವಿಠಲ್ ನಾಯ್ಕ, ಮಹಾಬಲೇಶ್ವರ ನಾಯ್ಕ, ಮೀನಾಕ್ಷಿ ನಾಯ್ಕ, ಮಂಜಪ್ಪ ನಾಯ್ಕ, ಸತೀಶ ಆಚಾರಿ, ರಮೇಶ ನಾಯ್ಕ, ಈಶ್ವರ ನಾಯ್ಕ, ಗಣಪತಿ ನಾಯ್ಕ, ಜಟ್ಟಪ್ಪ ನಾಯ್ಕ, ಡಿಪೋ ವ್ಯವಸ್ಥಾಪಕ ದಿವಾಕರ ಮುಂತಾದವರಿದ್ದರು. ಬಸ್‌ನ್ನು ಶೃಂಗರಿಸಿ ಪೂಜೆ ಸಲ್ಲಿಸಲಾಯಿತು.

ಜೋಯಿಡಾದಲ್ಲಿ ಬಸ್‌ಗೆ ಪೂಜೆ:

ರಾಜ್ಯ ಸರ್ಕಾರದ ಐದು ಪ್ರಮುಖ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಗೆ ಎರಡು ವರ್ಷ ತುಂಬಿದ ಹಿನ್ನೆಲೆಯಲ್ಲಿ ಬ್ಲಾಕ್ ಕಾಂಗ್ರೆಸ್‌ನಿಂದ ಜೋಯಿಡಾ ಬಸ್ ತಂಗುದಾಣದಲ್ಲಿ ಬಸ್‌ಗೆ ಪೂಜೆ ಸಲ್ಲಿಸಿ ಸಂಭ್ರಮಿಸಲಾಯಿತು.

ಕೆಪಿಸಿಸಿ ಸದಸ್ಯ ಸದಾನಂದ ದಬಗಾರ ಈ ಸಂದರ್ಭದಲ್ಲಿ ಮಾತನಾಡಿ, ರಾಜ್ಯ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಶಕ್ತಿ ಯೋಜನೆ ಪ್ರಮುಖವಾಗಿದೆ. 50 ಲಕ್ಷ ಕೋಟಿ ಮಹಿಳಾ ಫಲಾನುಭವಿಗಳು ಲಾಭ ಪಡೆದಿದ್ದಾರೆ. ಇದರಲ್ಲಿ ವಿರೋಧ ಪಕ್ಷದವರು, ಗ್ಯಾರಂಟಿಗಳನ್ನು ವಿರೋಧಿಸುವವರು ಹೆಚ್ಚಿನವರಿದ್ದಾರೆ. ಗ್ಯಾರಂಟಿ ಜಾರಿಯಿಂದ ಸರ್ಕಾರದಲ್ಲಿ ಹಣದ ಕೊರತೆ ಇಲ್ಲ ಎಂದರು.ತಹಸೀಲ್ದಾರ್ ಮಂಜುನಾಥ ಮುನ್ನೊಳ್ಳಿ, ಕಾರ್ಯನಿರ್ವಾಹಣಾಧಿಕಾರಿ ಎನ್. ಭಾರತಿ, ಗ್ಯಾರಂಟಿ ಯೋಜನಾ ಸಮಿತಿ ಅಧ್ಯಕ್ಷ ಪುರುಷೋತ್ತಮ ಕಾಮತ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಾರುತಿ ಗಾವಡೆ, ಮಹಿಳಾ ಅಧ್ಯಕ್ಷೆ ಸುಕನ್ಯಾ ದೇಸಾಯಿ, ಪ್ರಮುಖರಾದ ಅರುಣ ದೇಸಾಯಿ, ಮಂಜುನಾಥ ಮೊಕಾಶಿ, ಸುರೇಶ್ ಗಾವಡಾ, ಶ್ರೀಧರ ದಬಗಾರ, ಸದಾನಂದ ಉಪಾಧ್ಯಾಯ, ಗಜಾನನ ದೇಸಾಯಿ, ಪ್ರಸನ್ನ ಗಾವಡಾ, ವಿನಯ ದೇಸಾಯಿ, ರವಿ ರೆಡಕರ್, ಸುಭಾಷ ವೇಳಿಪ್, ಕೆಎಸ್‌ಆರ್‌ಟಿಸಿ ನಿಲ್ದಾಣ ಅಧಿಕಾರಿ ಸುಭಾಷ ಪೂಜಾರ್ ಇದ್ದರು.

PREV

Latest Stories

ನಗರದಲ್ಲಿ ಶೀಘ್ರ ಟೋಯಿಂಗ್ ವ್ಯವಸ್ಥೆ ಮರು ಜಾರಿ:ಪರಂ
ದೇಶದಲ್ಲೇ ಫಸ್ಟ್‌ ಟೈಂ ಜನರ ಮನೆ ಬಾಗಿಲಿಗೆ ಪೊಲೀಸ್ : ಪರಂ
ನೀರುಗಾಲುವೆಗಳಲ್ಲಿ ಟೆಕ್‌ ಪಾರ್ಕ್‌ ನಿರ್ಮಾಣದಿಂದ ಪ್ರವಾಹ