ಹೊಸಕೋಟೆ: ನಗರಸಭೆ ವ್ಯಾಪ್ತಿಯ ಎಲ್ಲಾ 31 ವಾರ್ಡ್ಗಳಲ್ಲಿ ಯಾವುದೇ ರೀತಿಯ ನೀರಿನ ಸಮಸ್ಯೆ ಉಂಟಾಗದಂತೆ ಕ್ರಮವಹಿಸಲು ಹಾಗೂ ನೂತನ ಕೊಳವೆ ಬಾವಿಗಳನ್ನು ಕೊರೆಸಲು 1.25ಕೋಟಿ ಅನುದಾನದ ಸದ್ಬಳಕೆ ಮಾಡಿಕೊಳ್ಳಲಾಗುವುದು ಎಂದು ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ದೇವರಾಜ್ ತಿಳಿಸಿದರು.
ರಸ್ತೆ ಗುಂಡಿ ಮುಚ್ಚಿ: ನಗರಸಭೆ ವ್ಯಾಪ್ತಿಯ 31 ವಾರ್ಡ್ಗಳಲ್ಲಿ ಇರುವ ರಸ್ತೆಗಳಲ್ಲಿ ಇರುವ ಗುಂಡಿಗಳನ್ನು ಮುಚ್ಚುವತ್ತ ಅಧಿಕಾರಿಗಳು ಗಮನಹರಿಸಿ. ಮಳೆ ಬಂದ ಹಿನ್ನೆಲೆಯಲ್ಲಿ ವಾರ್ಡ್ಗಳ ರಸ್ತೆಗಳಲ್ಲಿ ಗುಂಡಿಗಳು ಬಿದ್ದಿದ್ದು ವಾಹನ ಸವಾರರ ಸಂಚಾರಕ್ಕೆ ತೊಂದರೆಯಾಗಿದೆ. ಗುಂಡಿಗಳನ್ನು ಗುರ್ತಿಸಿ ತ್ವರಿತವಾಗಿ ಮುಚ್ಚುವ ಕೆಲಸ ಮಾಡಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.
ನಗರಸಭೆಯಲ್ಲಿ ಬಿ ಖಾತೆ, ಇ ಖಾತೆಗಾಗಿ ಬರುವ ನಾಗರಿಕರಿಗೆ ಅಧಿಕಾರಿಗಳು ಅಗತ್ಯ ದಾಖಲಾತಿಗಳ ಬಗ್ಗೆ ಸೂಕ್ತ ಮಾರ್ಗದರ್ಶನ ನೀಡಿ ದಾಖಲಾತಿಗಳನ್ನು ಪಡೆದು ಸಾರ್ವಜನಿಕರಿಗೆ ಉತ್ತಮ ಸೇವೆ ನೀಡಬೇಕು. ಕಂದಾಯ ಇಲಾಖೆ ವತಿಯಿಂದ ನಗರದ ಅಭಿವೃದ್ಧಿಗೆ ಅಗತ್ಯ ಸಂಪನ್ಮೂಲ ಕ್ರೋಡಿಕರಣ ಆಗಬೇಕು. ಆರೋಗ್ಯ ಇಲಾಖೆಯಲ್ಲಿ ದೈನಂದಿನ ಕಸ ವಿಲೆವಾರಿಗೆ ನಾಗರಿಕರಿಗೆ ಸೂಕ್ತ ಮಾರ್ಗದರ್ಶನ ನೀಡಿ ಮನೆ ಮನೆ ಕಸ ಸಂಗ್ರಹಣೆಗೆ ಮುಂದಾಗಬೇಕು ಎಂದರು.ನಗರಸಭೆ ಪೌರಾಯುಕ್ತ ನೀಲಲೋಚನ ಪ್ರಭು ಮಾತನಾಡಿ, ನಗರದಲ್ಲಿ ಎಲ್ಲೆಂದರಲ್ಲಿ ಕಸ ಸುರಿಯುವ ನಾಗರಿಕರು ಹೆಚ್ಚಾಗಿದ್ದು ನಗರಸಭೆ ಸಿಬ್ಬಂದಿ ಕೈಗೆ ಸಿಕ್ಕಿಬಿದ್ದರೆ ಭಾರಿ ಮೊತ್ತದ ದಂಡ ಕಟ್ಟಬೇಕಾಗುತ್ತದೆ. ಆದ್ದರಿಂದ ನಗರದ ಸ್ವಚ್ಚತೆಗೆ ನಗರಸಭೆ ಸಿಬ್ಬಂದಿ ಜೊತೆಗೆ ನಾಗರಿಕರು ಸಹಕಾರ ನೀಡಬೇಕು ಎಂದರು.
ಫೋಟೋ: 16 ಹೆಚ್‌ಎಸ್‌ಕೆ 1
ಹೊಸಕೋಟೆ ನಗರಸಭೆ ಕಚೇರಿಯಲ್ಲಿ ಸ್ಥಾಯಿ ಸಮಿತಿ ಅಧ್ಯಕ್ಷರ ಸ್ಥಾಯಿ ಸಮಿತಿ ಕಾರ್ಯಸೂಚಿ ಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ದೇವರಾಜ್ ಅಧ್ಯಕ್ಷತೆಯಲ್ಲಿ ನಡೆಯಿತು.