ಅನುಸೂಚಿತ ಜಾತಿ, ಪಂಗಡಗಳ 108 ದೌರ್ಜನ್ಯ ಪ್ರಕರಣಗಳಿಗೆ ₹1.44 ಕೋಟಿ ಪರಿಹಾರ

KannadaprabhaNewsNetwork |  
Published : Sep 20, 2025, 01:00 AM IST
ಚಿಕ್ಕಮಗಳೂರು ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ಅಧ್ಯಕ್ಷತೆಯಲ್ಲಿ ಪರಿಶಿಷ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜಿಲ್ಲಾ ಮಟ್ಟದ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ ನಡೆಯಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿಕ್ರಮ್ ಅಮಟೆ, ಜಿ.ಪಂ.ಉಪ ಕಾರ್ಯದರ್ಶಿ ಶಂಕರ ಕೊರವರ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕಿ ಬಿ.ಮಾಲತಿ ಇದ್ದರು. | Kannada Prabha

ಸಾರಾಂಶ

ಚಿಕ್ಕಮಗಳೂರು, ಅನುಸೂಚಿತ ಜಾತಿ, ಪಂಗಡಗಳ ದೌರ್ಜನ್ಯದ 108 ಪ್ರಕರಣಗಳಿಗೆ ಸಂಬಂಧಿಸಿದಂತೆ 2022 ರಿಂದ 2025ರ ಸೆಪ್ಟೆಂಬರ್ 17 ರವರೆಗೆ ₹1.44 ಕೋಟಿ ರು. ಮಂಜೂರು ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಹೇಳಿದರು.

- ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜಿಲ್ಲಾ ಮಟ್ಟದ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ,

ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರು

ಅನುಸೂಚಿತ ಜಾತಿ, ಪಂಗಡಗಳ ದೌರ್ಜನ್ಯದ 108 ಪ್ರಕರಣಗಳಿಗೆ ಸಂಬಂಧಿಸಿದಂತೆ 2022 ರಿಂದ 2025ರ ಸೆಪ್ಟೆಂಬರ್ 17 ರವರೆಗೆ ₹1.44 ಕೋಟಿ ರು. ಮಂಜೂರು ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಹೇಳಿದರು.

ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಜಿಲ್ಲಾ ಮಟ್ಟದ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರ ಮೇಲಿನ ದೌರ್ಜನ್ಯ ಪ್ರಕರಣಗಳಿಗೆ ಸಂಬಂಧಿಸಿದಂತೆ ತಾಲೂಕು ಮಟ್ಟದಲ್ಲಿನ ಸಮಸ್ಯೆಗಳನ್ನು ತಾಲೂಕು ಮಟ್ಟದ ಸಮಿತಿ ಸಭೆಯಲ್ಲಿ ಚರ್ಚಿಸಿ ಪರಿಹರಿಸಿಕೊಳ್ಳುವಂತೆ ತಾಲೂಕು ಮಟ್ಟದ ಅಧಿಕಾರಿಗಳಿಗೆ ನಿರ್ದೇಶನ ನೀಡಿದ ಜಿಲ್ಲಾಧಿಕಾರಿಗಳು, ತಾಲೂಕುಗಳಲ್ಲಿ ಸಭೆ ನಡೆಸುವುದರಿಂದ ಪ್ರಕರಣಗಳ ಮೇಲಿನ ನಿಗಾಕ್ಕೆ ಹಾಗೂ ನಿಯಂತ್ರಣಕ್ಕೆ ತುಂಬಾ ಅನುಕೂಲವಾಗಲಿದೆ ಎಂದರು.

ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೇಲೆ ದೌರ್ಜನ್ಯ ಎಸಗಿದರೆ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತದೆ ಹಾಗೂ ದೌರ್ಜನ್ಯ ಪ್ರಕರಣಗಳು ಹೆಚ್ಚಿನ ಪ್ರಮಾಣದಲ್ಲಿರುವ ಪ್ರದೇಶಗಳಿಗೆ ಪೊಲೀಸ್ ಅಧಿಕಾರಿಗಳು ಹಾಗೂ ತಾಲೂಕು ಮಟ್ಟದ ಅಧಿಕಾರಿ ಗಳು ಭೇಟಿ ನೀಡಿ ಜನರಲ್ಲಿ ಜಾಗೃತಿ ಹಾಗೂ ಕಾನೂನಿನ ಅರಿವು ಮೂಡಿಸಬೇಕು ಎಂದು ಹೇಳಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿಕ್ರಮ್ ಅಮಟೆ ಮಾತನಾಡಿ, ದೌರ್ಜನ್ಯ ಪ್ರಕರಣಕ್ಕೆ ಒಳಗಾದವರು ಬಡವರು, ಕೂಲಿ ಕಾರ್ಮಿಕರೂ ಆಗಿರುತ್ತಾರೆ. ಪ್ರಕರಣ ದಾಖಲಿಸಲು ಬರುವಾಗ ಗುರುತಿನ ಚೀಟಿ, ಆಧಾರ್ ಕಾರ್ಡ್‌ಗಳನ್ನು ತರು ವಂತೆ ತಿಳಿಸಿದ ಅವರು, ಬಂದು ಹೋಗುವ ವೆಚ್ಚವನ್ನು ಸಮಾಜ ಕಲ್ಯಾಣ ಇಲಾಖೆ ಭರಿಸಲಿದೆ ಎಂದು ತಿಳಿಸಿದರು. ಮುಖಂಡರು ತಮ್ಮ ವ್ಯಾಪ್ತಿಗೆ ಬರುವ ಸಮುದಾಯದಲ್ಲಿ ಸಭೆ ಕರೆದು ಅವರಿಗೆ ಕಾನೂನಿನ ಅರಿವು ಮೂಡಿಸುವಂತೆ ಸೂಚಿಸಿದರು. ಇತ್ತೀಚಿನ ದಿನದಲ್ಲಿ ಪೋಕ್ಸೊ ಪ್ರಕರಣ ಹೆಚ್ಚಾಗಿದ್ದು, 15 ರಿಂದ 18 ಮಕ್ಕಳು ಹೆಚ್ಚಾಗಿ ಈ ಪ್ರಕರಣಕ್ಕೆ ತುತ್ತಾಗುತ್ತಿದ್ದಾರೆ ಎಂದ ಅವರು, ಕೆಲವೊಂದು ಸಮುದಾಯದಲ್ಲಿ ಈ ಪ್ರಕರಣಗಳು ತಲೆಯೆತ್ತುತ್ತಿವೆ. ಶಾಲೆ ಬಿಟ್ಟ ಹೆಣ್ಣು ಮಕ್ಕಳನ್ನು ಶಾಲೆಗೆ ಹೋಗಲು ಪ್ರೇರೇಪಿಸಬೇಕು. ಸ್ಥಳೀಯ ಮುಖಂಡರು ಇಂತಹ ಮಕ್ಕಳನ್ನು ಗುರುತಿಸಿ ಅಧಿಕಾರಿಗಳ ಗಮನಕ್ಕೆ ತಂದರೆ ಅಂತಹವರನ್ನು ಪುನಃ ಶಾಲೆಗೆ ಸೇರಿಸಿ ವಿದ್ಯಾಭ್ಯಾಸ ಮುಂದುವರಿಸಲು ಕ್ರಮ ವಹಿಸುವರು ಎಂದು ಹೇಳಿದರು.

ಸಭೆಯಲ್ಲಿ ಜಿಪಂ ಉಪ ಕಾರ್ಯದರ್ಶಿ ಶಂಕರ ಕೊರವರ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕಿ ಬಿ.ಮಾಲತಿ, ಸರ್ಕಾರಿ ಅಭಿಯೋಜಕರಾದ ಲೋಹಿತಾಚಾರ್ಯ, ಎಲ್ಲಾ ತಾಲೂಕುಗಳ ತಹಸೀಲ್ದಾರರು, ತಾಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ಹಾಗೂ ಸಮಿತಿ ಸದಸ್ಯರು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

19 ಕೆಸಿಕೆಎಂ 1ಚಿಕ್ಕಮಗಳೂರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ಅಧ್ಯಕ್ಷತೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಜಿಲ್ಲಾ ಮಟ್ಟದ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ ನಡೆಯಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿಕ್ರಮ್ ಅಮಟೆ, ಜಿಪಂ ಉಪ ಕಾರ್ಯದರ್ಶಿ ಶಂಕರ ಕೊರವರ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕಿ ಬಿ.ಮಾಲತಿ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶಿವಶಂಕರಪ್ಪ ಕರ್ನಾಟಕ ರತ್ನಕ್ಕೆ ಅರ್ಹ : ಶ್ರೀ
ಮೈಸೂರು ಹೀಲಿಯಂ ಸಿಲಿಂಡರ್‌ ಸ್ಫೋಟ : ಎನ್‌ಐಎ ಭೇಟಿ