ರಾಜ್ಯಾದ್ಯಂತ 1.50 ಕೋಟಿ ಬಿಜೆಪಿ ಸದಸ್ಯತ್ವ ನೋಂದಣಿ ಗುರಿ: ಮಾಜಿ ಕೇಂದ್ರ ಸಚಿವ ಭಗವಂತ ಖೂಬಾ

KannadaprabhaNewsNetwork |  
Published : Sep 27, 2024, 01:16 AM IST
26ಕೆಎಂಎನ್ ಡಿ23 | Kannada Prabha

ಸಾರಾಂಶ

ಮಂಡ್ಯ ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳಲ್ಲಿ ಸುಮಾರು ನಾಲ್ಕು ಲಕ್ಷ ಸದಸ್ಯರ ನೋಂದಣಿ ಗುರಿ ಹೊಂದಲಾಗಿದೆ. ಪ್ರಸ್ತುತ 25 ಸಾವಿರ ನೋಂದಣಿ ಮಾಡಲಾಗಿದೆ. ಮಂಡ್ಯ, ಮೈಸೂರು, ಮೈಸೂರು ಗ್ರಾಮಾಂತರ, ಚಾಮರಾಜನಗರ, ಕೊಡಗು, ಮಂಗಳೂರು, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಜೆಪಿ ಸದಸ್ಯತ್ವ ನೋಂದಣಿ ಪರಿಶೀಲನಾ ಜವಾಬ್ದಾರಿ ಉಸ್ತುವಾರಿಯನ್ನು ಪಕ್ಷದ ನಾಯಕರು ನನಗೆ ನೀಡಿದ್ದಾರೆ.

ಕನ್ನಡಪ್ರಭ ವಾರ್ತೆ ಮದ್ದೂರು

ಬಿಜೆಪಿ ಸದಸ್ಯತ್ವ ಅಭಿಯಾನದಲ್ಲಿ ರಾಜ್ಯಾದ್ಯಂತ ಸುಮಾರು 1.50 ಲಕ್ಷ ಸದಸ್ಯತ್ವದ ನೋಂದಣಿ ಗುರಿ ಹೊಂದಿದೆ ಎಂದು ಕೇಂದ್ರದ ಮಾಜಿ ಸಚಿವ ಭಗವಂತ ಖೂಬಾ ಗುರುವಾರ ಹೇಳಿದರು.

ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ತಾಲೂಕಿನ ಮಡೇನಹಳ್ಳಿ, ಕೆ.ಶೆಟ್ಟಿಹಳ್ಳಿ, ಮುತ್ತನಹಳ್ಳಿ, ಕೊಕ್ಕರೆ ಬೆಳ್ಳೂರು ಹಾಗೂ ಗ್ರಾಮಗಳಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕಳೆದ ಸೆ.2 ರಂದು ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. ರಾಜ್ಯಾದ್ಯಂತ 25 ಲಕ್ಷ ಸದಸ್ಯತ್ವ ನೋಂದಣಿ ಮಾಡಲಾಗಿದೆ ಎಂದರು.

ಮಂಡ್ಯ ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳಲ್ಲಿ ಸುಮಾರು ನಾಲ್ಕು ಲಕ್ಷ ಸದಸ್ಯರ ನೋಂದಣಿ ಗುರಿ ಹೊಂದಲಾಗಿದೆ. ಪ್ರಸ್ತುತ 25 ಸಾವಿರ ನೋಂದಣಿ ಮಾಡಲಾಗಿದೆ. ಮಂಡ್ಯ, ಮೈಸೂರು, ಮೈಸೂರು ಗ್ರಾಮಾಂತರ, ಚಾಮರಾಜನಗರ, ಕೊಡಗು, ಮಂಗಳೂರು, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಜೆಪಿ ಸದಸ್ಯತ್ವ ನೋಂದಣಿ ಪರಿಶೀಲನಾ ಜವಾಬ್ದಾರಿ ಉಸ್ತುವಾರಿಯನ್ನು ಪಕ್ಷದ ನಾಯಕರು ನನಗೆ ನೀಡಿದ್ದಾರೆ ಎಂದು ಹೇಳಿದರು.

ಮುಂದಿನ ದಿನಗಳಲ್ಲಿ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೆಚ್ಚಿನ ಉತ್ಸಾಹದಿಂದ ಸದಸ್ಯರ ನೋಂದಣಿ ಮಾಡುವ ವಿಶ್ವಾಸವಿದೆ ಎಂದು ಖೂಬಾ ತಿಳಿಸಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಇಂದ್ರೇಶ, ಮನ್ಮುಲ್ ನಿರ್ದೇಶಕ ಎಸ್.ಪಿ.ಸ್ವಾಮಿ, ಜಿಪಂ ಮಾಜಿ ಸದಸ್ಯ ಕೃಷ್ಣೇಗೌಡ, ಮುಖಂಡರಾದ ವಿವೇಕ್, ಮಲ್ಲಿಕಾರ್ಜುನ್, ಎಂ.ಸಿ.ಸಿದ್ದು, ಕೆಂಪ ಬೋರಯ್ಯ, ತ್ರಿವೇಣಿ, ಮಮತಾರಾಂಕಾ, ಶಿವಕುಮಾರ್, ಗೆಜ್ಜಲಗೆರೆ ಕಿಟ್ಟಿ, ದ್ಯಾವಯ್ಯ, ಮಧು ಮತ್ತಿತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ ವಾಗ್ದೇವಿ ಟವರ್ಸ್‌ಗೆ ಭೂಮಿ ಪೂಜೆ
ಆತ್ಮನಿರ್ಭರ ಭಾರತಕ್ಕೆ ಸ್ವದೇಶಿ ವಸ್ತು ಬಳಕೆ ಅಗತ್ಯ: ನಾರಾಯಣಸಾ ಭಾಂಡಗೆ